NEWS

ಜಾಗೃತ ದಳ ಡಯಾಗೋಸ್ಟಿಕ್ ಸೆಂಟರ್‌ಗಳಿಗೆ ಭೇಟಿ ನೀಡಿ ಪರಿಶೀಲನೆ

ಪಾಲನೆ ನ್ಯೂಸ್

ಕಳೆದ ಬಾರಿ ಇದೇ ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ತಹಸಿಲ್ದಾ‌ರ್ ನೇತೃತ್ವದ ಜಾಗೃತ ದಳದ ತಂಡ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲನೆ ಮಾಡಿದ ನಂತರ ಎಚ್ಚೆತ್ತುಕೊಂಡ ಸ್ಕ್ಯಾನಿಂಗ್ ಸೆಂಟರ್‌ಗಳು ಮೂರು ಬಾಲ್ಯ ವಿವಾಹ ಪ್ರಕರಣಗಳ ಬಗ್ಗೆ ಆರೋಗ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಉಳಿದ ಎಲ್ಲ ಪ್ರಕರಣಗಳ ದಾಖಲೆಗಳನ್ನು ಪಡೆದುಕೊಂಡು ಪರಿಶೀಲನೆ ನಡೆಸಲು ತಾಲ್ಲೂಕು ಆರೋಗ್ಯ ಅಧಿಕಾರಿಗಳ ನೇತೃತ್ವದಲ್ಲಿ ತಂಡ ರಚಿಸಿದ್ದು, ಪೂರ್ಣ ದಾಖಲೆಗಳನ್ನು ಪರಿಶೀಲಿಸಿದ ನಂತರ ನ್ಯೂನ್ಯತೆ ಕಂಡು ಬಂದರೆ ಮುಂದಿನ ಕ್ರಮಕ್ಕಾಗಿ ಮೇಲಧಿಕಾರಿಗಳಿಗೆ ಮಾಹಿತಿ ನೀಡುತ್ತೇವೆ ಎಂದು ತಹಸಿಲ್ದಾ‌ರ್ ಎಚ್ಚರಿಸಿದರು.

ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ರವಿಶಂಕರ್ ಮಾತನಾಡಿ, ತಾಲ್ಲೂಕಿನಲ್ಲಿ ಗರ್ಭಿಣಿಯರ ಬಗ್ಗೆ ಸ್ಕ್ಯಾನಿಂಗ್‌ ಸೆಂಟರ್‌ಗಳಿಂದ ಮಾಹಿತಿಗಳನ್ನು ಪಡೆದುಕೊಂಡು ಆಶಾ, ಅಂಗನವಾಡಿ, ಆರೋಗ್ಯ ಕಾರ್ಯಕರ್ತೆಯರ ಒಳಗೊಂಡಂತೆ ತಂಡ ರಚಿಸಿ ತನಿಖೆ ನಡೆಸುತ್ತಿದ್ದೇವೆ ಎಂದು ತಿಳಿಸಿದರು.ಈ ವೇಳೆ ಸದಸ್ಯ ಕಾರ್ಯದರ್ಶಿಯಾದ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸಿ.ರವಿಶಂಕರ್, ಜಿಲ್ಲಾ ತಪಾಸಣೆ ಮತ್ತು ಪರಿಶೀಲನಾ ಸಮಿತಿ ಅಧ್ಯಕ್ಷ ಡಾ.ಬೆಟ್ಟಸ್ವಾಮಿ, ಸದಸ್ಯರಾದ ತಾಲ್ಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಬಾಲಕೃಷ್ಣ, ಸದಸ್ಯರಾದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅರುಣ್‌ಕುಮಾ‌ರ್, ವಿಮೋಚನಾ ಮಹಿಳಾ ಸಂಘಟನೆ ಮತ್ತು ಜಿಲ್ಲಾ ಸಲಹಾ ಸಮಿತಿಯಸದಸ್ಯ ಜನಾರ್ಧನ್ ಹೂತಗೆರೆ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸಿಬಂದಿ ಪ್ರವೀಣ್, ಹರ್ಷ ಉಪಸಿತರಿದರು.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಬೆಳ್ಳಿ ಬೆಲೆ 1,500 ರೂ. ಏರಿಕೆ

ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಏನೂ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ

ಶೇ.5 ರಷ್ಟು ದುಬಾರಿ ಆದ ಮೆಟ್ರೋ ಸವಾರಿ

Leave a Comment