NEWS

‘ಬೆಂಗಳೂರು-ಮುಂಬೈ ಸೂಪರ್ ಫಾಸ್ಟ್ ರೈಲು’ ಜೂನ್ ಅಂತ್ಯದೊಳಗೆ ಸಂಚಾರ

ಪಾಲನೆ ನ್ಯೂಸ್

ನವದೆಹಲಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಆಶಯದಂತೆ ಉತ್ತರ ಕರ್ನಾಟಕ ಮತ್ತು ಮಧ್ಯ ಕರ್ನಾಟಕದ ಸಂಪರ್ಕ ಸೇತುವಾಗಿ ‘ಬೆಂಗಳೂರು-ಮುಂಬೈ ಸೂಪರ್ ಫಾಸ್ಟ್ ರೈಲು’ ಜೂನ್ ಅಂತ್ಯದೊಳಗೆ ಸಂಚಾರ ಆರಂಭಿಸಲಿದೆ. ಅಲ್ಲದೆ, ನಂತರದ ದಿನಗಳ ಲ್ಲಿದು ‘ವಂದೇ ಭಾರತ್ ಸ್ಟೀಪರ್’ ರೈಲಾಗಿ ಪರಿವರ್ತನೆಗೊಳ್ಳುವ ಸೂಚನೆ ಸಹ ಸಿಕ್ಕಿದೆ.

ಈ ಕುರಿತಂತೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ ಜೋಶಿ ಅವರೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ. ರಾಜಧಾನಿ ಬೆಂಗಳೂರಿನಿಂದ ಪ್ರಮುಖ ವಾಣಿಜ್ಯ ನಗರಿ ಮುಂಬೈಗೆ ತೆರಳುವ ಈ ‘ಸೂಪರ್‌ಫಾಸ್ಟ್‌’ ರೈಲು ಮಧ್ಯ ಕರ್ನಾಟಕದ ತುಮಕೂರು, ದಾವಣಗೆರೆ, ಹಾವೇರಿ ಹಾಗೂ ಉತ್ತರ ಕರ್ನಾಟಕದ ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿ ಮಾರ್ಗದ ಮೂಲಕ ಸಂಚರಿಸಲಿದೆ. ತಮ್ಮ ಒತ್ತಾಸೆಯಂತೆ ಈ ‘ಬೆಂಗಳೂರು-ಮುಂಬೈ ಸೂಪರ್‌ಫಾಸ್ಟ್’ ರೈಲು ಸಂಚಾರವನ್ನು ಬಹುತೇಕ ಜೂನ್ ಅಂತ್ಯದೊಳಗೆ ಆರಂಭಿಸುವುದಾಗಿ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

ವಂದೇ ಭಾರತ್ ಸ್ಟೀಪರ್‌ಆಗಿಸಿ: ಇದೇ ವೇಳೆ ಸಚಿವ ಜೋಶಿ ಅವರು, ಮುಂದಿನ ದಿನಗಳಲ್ಲಿ ಬೆಂಗಳೂರು-ಮುಂಬೈ ನಡುವಿನ ಈ ಸೂಪರ್‌ಫಾಸ್ಟ್ ರೈಲನ್ನು ‘ವಂದೇ ಭಾರತ್ ಸ್ವೀಪರ್’ ರೈಲಾಗಿ ಸಹ ಬದಲಾಯಿಸುವಂತೆ ಮನವಿ ಮಾಡಿದ್ದು, ಇದಕ್ಕೂ ಅಶ್ವಿನಿ ವೈಷ್ಣವ್ ಸಮ್ಮತಿ ವ್ಯಕ್ತಪಡಿಸಿದ್ದಾರೆ.‌

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಕರ್ನಾಟಕ ಸಂಘ (ರಿ),ಮಂಡ್ಯ ಮಹಿಳಾ  ಘಟಕ

ಏಪ್ರಿಲ್ ಮಾಹೆಯಲ್ಲಿ ಬರುವ ಮಹನೀಯರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿ : ಬಿ. ಸಿ. ಶಿವಾನಂದಮೂರ್ತಿ

ರಂಗೋಲಿ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಸಮಾಧಾನಕರ ಬಹುಮಾನ ವಿತರಣೆ – ಪಿ ರವಿಕುಮಾರ್

Leave a Comment