NEWS

ತಮಿಳುನಾಡು ರಾಜಕೀಯದ ಈ ಬಿಕ್ಕಟ್ಟಿನ ಕುರಿತು ಕಮಲ್ ಹಾಸನ್ ಪೋಸ್ಟ್

ಪಾಲನೆ ನ್ಯೂಸ್

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿ ಮೂರು ದಿನ ಕಳೆದರೂ ಸರ್ಕಾರ ರಚನೆಯ ಕಸರತ್ತು ಇನ್ನೂ ಮುಗಿದಿಲ್ಲ. ಈ ಬಾರಿಯ ತಮಿಳುನಾಡು ವಿಧಾನಸಭೆಯಲ್ಲಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗದೆ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ, ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷಕ್ಕೆ ಸರ್ಕಾರ ರಚಿಸಲು ಅವಕಾಶ ನೀಡಬೇಕು ಎಂದು ನಟ ಹಾಗೂ ರಾಜಕಾರಣಿ ಕಮಲ್ ಹಾಸನ್‌ ಆಗ್ರಹಿಸಿದ್ದಾರೆ.

ತಮಿಳುನಾಡು ರಾಜಕೀಯದ ಈ ಬಿಕ್ಕಟ್ಟಿನ ಕುರಿತು ಎಕ್ ನಲ್ಲಿ ಪೋಸ್ಟ್ ಹಾಕಿರುವ ಕಮಲ್ ಹಾಸನ್, ವಿಜಯ್ ಅವರಿಗೆ ಬೆಂಬಲ ಸೂಚಿಸಿದ್ದಾರೆ. ತಮಿಳಗ ವೆಟ್ರಿ ಕಳಗಂ 108 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಅತಿ ದೊಡ್ಡ ಪಕ್ಷವಾಗಿರುವ ಟಿವಿಕೆ ಅನ್ನು ಸರ್ಕಾರ ರಚಿಸಲು ಕರೆಯದಿರುವುದು ತಮಿಳುನಾಡು ಜನತೆ ನೀಡಿದ ತೀರ್ಪಿಗೆ ಮಾಡುವ ಅವಮಾನ ಎಂದು ಅವರು

ಸಾಂವಿಧಾನಿಕ ಹುದ್ದೆಗಳಲ್ಲಿ ಇರುವವರು ಸಹ ತಮ್ಮ ಕರ್ತವ್ಯವನ್ನು ಸರಿಯಾಗಿ ನಿಭಾಯಿಸಬೇಕಿದೆ. ಈಗಾಗಲೇ ಆಯ್ಕೆಯಾಗಿರುವ 233 ಸದಸ್ಯರು ಇನ್ನೂ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಾಗದಿರುವುದು ರಾಜ್ಯಕ್ಕೆ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಗೆ ಆಗುತ್ತಿರುವ ದೊಡ್ಡ ಹಾನಿ. ಕಮಲ್ ಹಾಸನ್, ಹಿರಿಯ ನಟ ಕಿಡಿಕಾರಿದ್ದಾರೆ. ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಒಂದು ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡಿ ಆಡಳಿತ ನಡೆಸುವ ಅಧಿಕಾರವನ್ನು ಜನತೆ ನೀಡಿಲ್ಲ. ತಮಿಳುನಾಡಿನ ಇತಿಹಾಸದಲ್ಲೇ ಇಂತಹ ತೀರ್ಪು ಹಿಂದೆಂದೂ ಬಂದಿರಲಿಲ್ಲ. ಎಂ.ಕೆ.ಸ್ಟಾಲಿನ್ ಅವರು, ನಾವು ಜನರ ತೀರ್ಪನ್ನು ಗೌರವಿಸಿ ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಕಾರ್ಯ ನಿರ್ವಹಿಸುತ್ತೇವೆ ಎಂದು ಘೋಷಿಸಿ ರಾಜಕೀಯ ಮುತ್ಸದ್ದಿತನ ಮೆರೆದಿದ್ದಾರೆ ಎಂದು ಹೇಳಿದ್ದಾರೆ.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಯುದ್ದದ ಭೀತಿಯಲ್ಲಿ ಸಿಲುಕಿರುವ ಪ್ರವಾಸಿಗರಿಗೆ ಬಾಲಿವುಡ್ ನಟ ಸೋನು ಸೂದ್ ನೆರವು

ಕೊಡಗಿನ ಅರಣ್ಯದಲ್ಲಿ ನಾಪತ್ತೆಯಾಗಿದ್ದ ಯುವತಿ ಪತ್ತೆ ಪ್ರಕರಣ

ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ – ವದಂತಿಗಳಿಗೆ ಕಿವಿಗೊಡಬೇಡಿ – ಸಾರ್ವಜನಿಕರಿಗೆ ಕರೆ

Leave a Comment