NEWS

ನೂತನ ಸಿಎಂ ಆಗಿ ಜೋಸೆಫ್ ವಿಜಯ್ ಪ್ರಮಾಣ ವಚನ

ಪಾಲನೆ ನ್ಯೂಸ್

ಚೆನ್ನೈ: ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ, ಖ್ಯಾತ ನಟ ಚಂದ್ರಶೇಖರ್ ಜೋಸೆಫ್ ವಿಜಯ್ ಅವರು ತಮಿಳುನಾಡಿನ 9ನೇ ಮುಖ್ಯಮಂತ್ರಿಯಾಗಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು.

ಇಲ್ಲಿನ ಜವಾಹರಲಾಲ್ ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಉಸ್ತುವಾರಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞಾವಿಧಿ ಬೋಧಿಸಿದರು. ಇದೇ ಸಂದರ್ಭದಲ್ಲಿ ವಿಜಯ್ ಸಂಪುಟಕ್ಕೆ ಸೇರಿದ ಒಂಬತ್ತು ಮಂದಿ ಸಂಪುಟ ಸದಸ್ಯರಿಗೂ ರಾಜ್ಯಪಾಲರು ಪ್ರಮಾಣ ವಚನ ಬೋಧಿಸಿದರು.

ಇದರಲ್ಲಿ ಹಿರಿಯರಾದ ಕೆ.ಎ.ಸೆಂಗೋಟ್ಟಯ್ಯನ್ ಮತ್ತು ಯುವ ಮುಖಗಳಾದ ಡಾ.ಟಿ.ಕೆ.ಪ್ರಭು ಮತ್ತು ಎಸ್.ಕೀರ್ತನಾ ಸೇರಿದ್ದಾರೆ. ಅಪಾರ ಸಂಖ್ಯೆಯಲ್ಲಿ ಸೇರಿದ್ದ ಟಿವಿಕೆ ಕಾರ್ಯಕರ್ತರ ಶಿಳ್ಳೆ, ಚಪ್ಪಾಳೆಯ ನಡುವೆ, ವಿಜಯ್ ದೇವರ ಹೆಸರಿನಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಸಚಿವರೂ ಹಿಂದಿನ ಡಿಎಂಕೆ ಆಡಳಿತದ ಇತರರಿಗಿಂತ ಭಿನ್ನವಾಗಿ ದೇವರ ಹೆಸರಿನಲ್ಲೇ ಪ್ರಮಾಣವಚನ ತೆಗೆದು ಕೊಂಡರು.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಜಿ. ಪಂ. ಸಿಇಓ ನಂದಿನಿ ಕೆ. ಆರ್. ಅವರು ಶ್ರೀರಂಗಪಟ್ಟಣ ತಾಲೂಕಿನ ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆಯ ವಸತಿ ನಿಲಯಕ್ಕೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆರೋಗ್ಯ ಇಲಾಖೆಯಲ್ಲಿ ಔಷಧ ಕೊರತೆ,ಖರೀದಿಯಲ್ಲಿ ಅವ್ಯವಹಾರ: ವಿಜಯೇಂದ್ರ ಆರೋಪ

ಪ್ರಧಾನಿ ನರೇಂದ್ರ ಮೋದಿ‌ ವಿಶ್ವನಾಥನ ದರ್ಶನ

Leave a Comment