ಪಾಲನೆ ನ್ಯೂಸ್

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯ ವಿಶೇಷ ತ್ವರಿತ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ಅಧಿಕಾರಿಗಳಿಗೆ ಮುತ್ತಿಗೆ ಹಾಕಿದ ಪ್ರಕರಣದ ತನಿಖೆಯನ್ನು ಎರಡು ತಿಂಗಳೊಳಗೆ ಮುಗಿಸುವಂತೆ ಸುಪ್ರೀಂಕೋರ್ಟ್ ಸೋಮವಾರ ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ನಿರ್ದೇಶಿಸಿದೆ. ತನಿಖೆ ಪೂರ್ಣಗೊಳಿಸಿ ವರದಿಯನ್ನು ಸಂಬಂಧಪಟ್ಟ ಕೋರ್ಟ್ ಮುಂದೆ ಸಲ್ಲಿಸಬೇಕೆಂದು ಸಿಜೆಐ ಸೂರ್ಯ ಕಾಂತ್ ಮತ್ತು ಜಸ್ಟಿಸ್ ಜೋಯ್ತಲ್ಯ ಬಾಗಿ ಅವರ ಪೀಠ ಎನ್‌ಐಗೆ ಸೂಚಿಸಿತು. ಬಂಗಾಳದ ಮಾಲ್ದಾ ಜಿಲ್ಲೆಯಲ್ಲಿ ಏಪ್ರಿಲ್ 1ರಂದು ಹಿಂಸಾಚಾರ ನಡೆದು ಏಳು ನ್ಯಾಯಾಂಗ ಅಧಿಕಾರಿಗಳನ್ನು ಸುಮಾರು ಒಂಬತ್ತು ಗಂಟೆ ಕಾಲ ಕೂಡಿ ಹಾಕಲಾಗಿತ್ತು.
✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn
