NEWS

ಮಂಡ್ಯದಲ್ಲಿ ಸೌಹಾರ್ದ ಸಹಕಾರಿ ಸಂಘಗಳ ಸಿಇಒಗಳ ಸಭೆ

ಪಾಲನೆ NEWS

ಮಂಡ್ಯ: ಕರ್ನಾಟಕ ರಾಜ್ಯ ಸಂಯುಕ್ತ ಸೌಹಾರ್ದ ಸಹಕಾರಿ ವತಿಯಿಂದ ಆಯೋಜಿಸಲಾಗಿದ್ದ ಮಂಡ್ಯ ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಸಭೆ ಡಿಸೆಂಬರ್‌ 10ರ ಬೆಳಿಗ್ಗೆ ಮಂಡ್ಯ ಜಿಲ್ಲಾ ಸೌಹಾರ್ದ ಸಹಕಾರಿ ಸಂಘಗಳ ಒಕ್ಕೂಟದ ಕಚೇರಿಯಲ್ಲಿ ನಡೆಯಿತು.  

ಸಭೆಯ ಅಧ್ಯಕ್ಷತೆಯನ್ನು ಮಂಡ್ಯ ಸೌಹಾರ್ದ ಜಿಲ್ಲಾ ಸೌಹಾರ್ದ ಸಹಕಾರಿ ಸಂಘಗಳ ಒಕ್ಕೂಟ ನಿ. ಅಧ್ಯಕ್ಷರಾದ   ಬಿ.ಟಿ ಗುರುರಾಜ್ ಶೆಟ್ಟಿ ವಹಿಸಿದ್ದರು. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಪ್ರಾಂತೀಯ ವಿಭಾಗೀಯ ಅಧಿಕಾರಿ ಗುರುಪ್ರಸಾದ್ ಬಂಗೇರ, ಮಂಡ್ಯ ಜಿಲ್ಲಾ ಸೌಹಾರ್ದ ಸಹಕಾರಿ ಸಂಘಗಳ ಒಕ್ಕೂಟ ನಿ. ಉಪಾಧ್ಯಕ್ಷ ಎಸ್. ಸಿದ್ದಲಿಂಗಯ್ಯ, ನಿರ್ದೇಶಕ  ವೆಂಕಟೇಶ ಗೌಡ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಮಂಡ್ಯ ಜಿಲ್ಲಾ ಅಭಿವೃದ್ಧಿ ಅಧಿಕಾರಿ ಬಲರಾಮ್ ಎನ್., ಮಂಡ್ಯ ಜಿಲ್ಲೆಯ ಎಲ್ಲಾ ಸೌಹಾರ್ದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಭಾಗವಹಿಸಿ  ಸಭೆಯನ್ನು ಯಶಸ್ವಿಗೊಳಿಸಿದರು.

Related posts

ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಕುವೆಂಪು ವಿಶ್ವಮಾನವ ಧರ್ಮಕ್ಕೆ ಚಾಲನೆ

ಕಳೆದ ಮೂರು ವರ್ಷಗಳಲ್ಲಿ 3 ಸಾವಿರ ರೈತರು ಆತ್ಮಹತ್ಯೆ : ನಿಖಿಲ್ ಕುಮಾರಸ್ವಾಮಿ

Leave a Comment