NEWS

ಸರ್ಕಾರದ  ಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ಮುಟ್ಟಿಸುವಲ್ಲಿ ಸರ್ಕಾರಿ ನೌಕರರ ಪಾತ್ರ ಹೆಚ್ಚು : ಡಾ.ಕುಮಾರ

ಸರ್ಕಾರಿ ನೌಕರರು ಜಿಲ್ಲೆಗೆ ಉತ್ತಮ ಹೆಸರು ಬರುವಂತೆ ಕಾರ್ಯ ನಿರ್ವಹಿಸುತ್ತಿದ್ದಾರೆ

ಪಾಲನೆ ನ್ಯೂಸ್

ಮಂಡ್ಯ: ಜಿಲ್ಲೆಯ ಸರ್ಕಾರಿ ನೌಕರರು ಜಿಲ್ಲೆಗೆ ಉತ್ತಮ ಹೆಸರು ತರುವಂತಹ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಅವರು ಅಧಿಕಾರಿಗಳನ್ನು ಶ್ಲಾಘಿಸಿದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು ಜಿಲ್ಲಾ ಶಾಖೆ ವತಿಯಿಂದ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸರ್ಕಾರಿ ನೌಕರರ ಕುಂದು ಕೊರತೆಗಳ ಸಭೆ ಹಾಗೂ ಮಂಡ್ಯ ಜಿಲ್ಲೆಯ ಡಿ.ಡಿ.ಓ ಗಳಿಗೆ ಹಾಗೂ ಸಂಬಂಧಪಟ್ಟ ವಿಷಯ ನಿರ್ವಾಹಕರುಗಳಿಗೆ HRMS 2.0 ತಂತ್ರಾಂಶ ಮತ್ತು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಕುರಿತ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ರಾಜ್ಯ ಸರ್ಕಾರ ನಡೆಸಿದ ಶೈಕ್ಷಣಿಕ ಮತ್ತು ಸಾಮಾಜಿಕ ಸಮೀಕ್ಷೆಯಲ್ಲಿ ಜಿಲ್ಲೆಯ ಎಲ್ಲಾ ಶಿಕ್ಷಕರು ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದರಿಂದ ರಾಜ್ಯದಲ್ಲಿಯೇ ಅತಿ ಹೆಚ್ಚು ಸಮೀಕ್ಷೆ ಮಾಡಿದ ಜಿಲ್ಲೆ ಮಂಡ್ಯ ಎಂಬ ಹೆಗ್ಗಳಿಕೆ ಜಿಲ್ಲೆಗೆ ಬಂದಿತು ಎಂದರು.

ಸರ್ಕಾರದ ಯಾವುದೇ ಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ಮುಟ್ಟಿಸುವಲ್ಲಿ ಸರ್ಕಾರಿ ನೌಕರರ ಪಾತ್ರ ಹೆಚ್ಚಿದೆ. ಜಿಲ್ಲಾ ಮಟ್ಟದ ಅಧಿಕಾರಿಗಳು ಸಲಹೆ ಸೂಚನೆಗಳನ್ನು ನೀಡಬಹುದು ಆದರೆ ತಳಮಟ್ಟದ ಅಧಿಕಾರಿಗಳು ಸರಿಯಾಗಿ ಕಾರ್ಯ ನಿರ್ವಹಿಸಿದಾಗ ಮಾತ್ರ ಸರ್ಕಾರದ ವಿವಿಧ ಯೋಜನೆಗಳು ಯಶಸ್ಸು ಕಾಣಲು ಸಾಧ್ಯ ಎಂದು ಹೇಳಿದರು.

ಜಿಲ್ಲೆಯಲ್ಲಿ 18 ಸಾವಿರಕ್ಕೂ ಹೆಚ್ಚು ಸರ್ಕಾರಿ ನೌಕರರು ಇದ್ದಾರೆ ಆರೋಗ್ಯ ಸಂಜೀವಿನಿ ಯೋಜನೆ ಅಡಿ ಬಾಕಿ ಇರುವ ಮೊತ್ತವನ್ನು ಶೀಘ್ರವಾಗಿ ವಿಲೇವಾರಿ ಮಾಡುವ ಕ್ರಮವಹಿಸಲಾಗುವುದು. ಸಮೀಕ್ಷೆ ನಡೆಸಿದ ಎಲ್ಲಾ ಶಿಕ್ಷಕರಿಗೆ ಸರ್ಕಾರದಿಂದ ನೀಡಲಾಗುವ ಗೌರವ ಧನ ರೂ.7.63 ಕೋಟಿ ಹಣ ಜಿಲ್ಲಾ ಖಜಾನೆಗೆ ಬಂದಿದೆ. ಸಮೀಕ್ಷೆ ನಡೆಸಿದ ಎಲ್ಲಾ ಶಿಕ್ಷಕರಿಗೂ ತಾಲೂಕು ವಾರು ಹಣವನ್ನು ತಹಶೀಲ್ದಾರ್ ನೇತೃತ್ವದಲ್ಲಿ ನೀಡಲು ಸಮಯ ಹೆಚ್ಚಾಗುವುದರಿಂದ ಸ್ವತಂ ನಾನೇ 2500 ಕ್ಕೂ ಹೆಚ್ಚು ಸಹಿಗಳನ್ನು ಮಾಡಿ ಈವರೆಗೆ 7 ಕೋಟಿ ಗೌರವದನವನ್ನು ಜಿಲ್ಲೆಯಲ್ಲಿ ಸಮೀಕ್ಷೆ ನಡೆಸಿದ ಶಿಕ್ಷಕರ ಖಾತೆಗೆ ವರ್ಗಾಯಿಸಲಾಗಿದೆ ಎಂದರು.

ತಾಂತ್ರಿಕ ದೋಷ ಉಂಟಾದ ಕಾರಣ ಉಳಿದ ರೂ.63 ಲಕ್ಷವನ್ನು ಪತಿಸಲು ಸಾಧ್ಯವಾಗಿಲ್ಲ ಒಂದು ವಾರದೊಳಗೆ ಸದರಿ ಮೊತ್ತವನ್ನು ಅರ್ಹರಿಗೆ ತಲುಪಿಸುವ ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯ ಸರ್ಕಾರಿ ನೌಕರರು ಒಗ್ಗಟ್ಟಿನಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೆಲಸವನ್ನು ಪ್ರೀತಿಸದ ಹೊರತು ಕೆಲಸ ನಮ್ಮನ್ನು ಪ್ರೀತಿಸುವುದಿಲ್ಲ ಎಂದು ತಿಳಿಸಿದರು.

Related posts

ಕೊನೆ ಎಸೆತದಲ್ಲಿ ಗೆದ್ದು ಬೀಗಿದ ದ.ಆಫ್ರಿಕಾ

ಮದ್ದೂರು ತಾಲ್ಲೂಕಿನ ಚೊಟ್ಟನಹಳ್ಳಿಯ ಶ್ರೀ ಮಲೈ ಮಹದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಮಾರ್ಚ್‌ 9

ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ಸೂಚನೆ

Leave a Comment