NEWS

ಮಳವಳ್ಳಿ ತಾಲ್ಲೂಕಿನಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಪ್ರಜಾಸೌಧದ ಶಿಲಾನ್ಯಾಸ ಕಾರ್ಯಕ್ರಮದ ನಿಮಿತ್ತ  ಮಳವಳ್ಳಿ ತಾಲ್ಲೂಕಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ

ಪಾಲನೆ ನ್ಯೂಸ್

ಮಂಡ್ಯ: ಮಳವಳ್ಳಿ ತಾಲ್ಲೂಕಿನಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಪ್ರಜಾಸೌಧದ ಶಿಲಾನ್ಯಾಸ ಕಾರ್ಯಕ್ರಮದ ನಿಮಿತ್ತ ದಿನಾಂಕ: 19/12/2025 ರಂದು ಮಳವಳ್ಳಿ ತಾಲ್ಲೂಕಿಗೆ ಭೇಟಿ

1.‌ ಕರ್ನಾಟಕ ಸರ್ಕಾರದ ಸನ್ಮಾನ್ಯ ಮುಖ್ಯಮಂತ್ರಿಗಳು ದಿನಾಂಕ: 21/12/2025 ರಂದು ಮಳವಳ್ಳಿ ತಾಲ್ಲೂಕಿನಲ್ಲಿ ನೂತನವಾಗಿ ರೂ. 16 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಪ್ರಜಾಸೌಧದ ಶಿಲಾನ್ಯಾಸ ಕಾರ್ಯಕ್ರಮವನ್ನು ನೆರವೇರಿಸಲಿರುತ್ತಾರೆ.

2. ಈ ಹಿನ್ನೆಲೆಯಲ್ಲಿ ದಿನಾಂಕ: 19/12/2025 ರಂದು ಜಿಲ್ಲಾಧಿಕಾರಿಗಳು ನೂತನ ಕಟ್ಟಡ ನಿರ್ಮಾಣದ ಜಾಗವನ್ನು ಪರಿಶೀಲಿಸಿದರು.

3. ಹಾಗೂ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಯಾವುದೇ ಅಡಚಣೆಯಾಗದಂತೆ ಸೂಕ್ತ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ತಹಶೀಲ್ದಾರ್ ರವರಿಗೆ ಸೂಚಿಸಿದರು.

4. ಮಾನ್ಯ ಮುಖ್ಯಮಂತ್ರಿಗಳ ಆಗಮನದ ಹಿನ್ನೆಲೆಯಲ್ಲಿ ಭದ್ರತೆಯಲ್ಲಿ ಯಾವುದೇ ಲೋಪದೋಷ ಉಂಟಾಗದಂತೆ ಸೂಕ್ತ ಪ್ರೊಟೊಕಾಲ್ ವ್ಯವಸ್ಥೆ ಮಾಡುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.

Related posts

ಚಾಮನಹಳ್ಳಿಯಲ್ಲಿ ಒಂದು ತಿಂಗಳ ‘ಚರ್ಮವಾದ್ಯ ತರಬೇತಿ’ ಕಾರ್ಯಾಗಾರಕ್ಕೆ ಚಾಲನೆ

ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಬೇಕು

ಜ.26 ರಂದು ಗಾಂಧಿಭವನ ಉದ್ಘಾಟನೆ ಸಮಾರಂಭ

Leave a Comment