NEWS

ಗ್ರಾಮ ಪಂಚಾಯತ್ ನೌಕರರ ಅನುಮೋದನೆಯ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ

ಪಾಲನೆ ನ್ಯೂಸ್

ಮಂಡ್ಯ: ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್ ಗಳಲ್ಲಿ ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 651 ನೌಕರರು ಹುದ್ದೆಗೆ ನಿಗಧಿಪಡಿಸಿದ ವಿದ್ಯಾರ್ಹತೆ ಹೊಂದಿಲ್ಲದ ಕಾರಣದಿಂದ ಅನುಮೋದನೆ ನೀಡಲಾಗಿರಲಿಲ್ಲ. ಇಂತಹ ನೌಕರರನ್ನು ಸರ್ಕಾರದ ಆದೇಶದಂತೆ ಒಂದು ಬಾರಿ ಜಿಲ್ಲಾ ಪಂಚಾಯತ್ ನಿಂದ ಅನುಮೋದನೆಗೆ ಒಳಪಡಿಸುವ ಬಗ್ಗೆ ಅಗತ್ಯ ದಾಖಲಾತಿಗಳನ್ನು ಪರಿಶೀಲಿಸಿ ಅರ್ಹರಿರುವ ನೌಕರರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಕಸಲಾಗಿದೆ ಎಂದು ಜಿ.ಪಂ. ಸಿಇಓ ನಂದಿನಿ ಕೆ.ಆರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸರ್ಕಾರದ ಆದೇಶ ಸಂಖ್ಯೆ:ಕೆ.ಪಿ.ಆರ್.ಸಿ/ಜಿಪಿಎ/450/2023, ದಿನಾಂಕ:18-11-2023ರಂತೆ ನೌಕರರ ಅನುಮೋದನೆ ಪ್ರಕ್ರಿಯೆ ಕೈಗೊಳ್ಳಲು ಹಾಗೂ ಅನುಮೋದನೆ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸಲು ಒಟ್ಟು ನಾಲ್ಕು ಹಂತಗಳಲ್ಲಿ ನೌಕರರ ದಾಖಲಾತಿಗಳ ಪರಿಶೀಲನಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿತ್ತು. ನಂತರ ತಾಲ್ಲೂಕುವಾರು ಪ್ರಸ್ತಾವನೆಗಳನ್ನು ಪ್ರತ್ಯೇಕ ಪರಿಶೀಲನಾ ಸಮಿತಿಯಿಂದ ಪರಿಶೀಲಿಸಿ, ನಡವಳಿಯಲ್ಲಿ ದಾಖಲಿಸಿ ಅಂತಿಮವಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳ ತಂಡದಿಂದ ಮರುಪರಿಶೀಲನೆಗೆ ಒಳಪಡಿಸಿ ಅರ್ಹ ನೌಕರರ ಅನುಮೋದನೆಯ ತಾತ್ಕಾಲಿಕ ಪಟ್ಟಿಯನ್ನು ಸಿದ್ದಪಡಿಸಲಾಗಿದ್ದು ಪಟ್ಟಿಯನ್ನು ಜಿಲ್ಲಾ ಪಂಚಾಯತ್ ಮತ್ತು ಜಿಲ್ಲೆಯ ಎಲ್ಲಾ ತಾಲ್ಲೂಕು ಪಂಚಾಯತ್ ಗಳ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ ಎಂದು ತಿಳಿಸಲಾಗಿದೆ.

ಗ್ರಾ.ಪಂ. ಸಿಬ್ಬಂದಿಗಳ ಅನುಮೋದನೆ ಸಂಬಂಧ ಪ್ರಕಟಿಸಲಾಗಿರುವ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆಯನ್ನು ಸಲ್ಲಿಸಲು ದಿನಾಂಕ:03-01-2026ರಿಂದ 23-01-2026ರವರೆಗೆ, ರಜಾ ದಿನಗಳನ್ನು ಹೊರತು ಪಡಿಸಿ 15 ದಿನಗಳ ಕಾಲವಕಾಶ ಕಲ್ಪಿಸಲಾಗಿದ್ದು, ಸಂಬಂಧಪಟ್ಟ ನೌಕರರು ಆಯಾ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಕ್ತ ದಾಖಲಾತಿಗಳೊಂದಿಗೆ ಆಕ್ಷೇಪಣೆಯನ್ನು ಸಲ್ಲಿಸಬಹುದಾಗಿರುತ್ತದೆ ಎಂದು ಜಿ.ಪಂ. ಸಿಇಓ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಗಾಲ್ಫ್: ನೀರಜ್‌ ಶೆಟ್ಟಿ, ಕ್ರಿಶಾ ನಿಚಾನಿ ಚಾಂಪಿಯನ್

ಪ್ರತಿ 10 ಗ್ರಾಂ ಚಿನ್ನದ ಬೆಲೆ ₹900 ಇಳಿಕೆ

ಗ್ರಾಹಕರು ಗೃಹ ಬಳಕೆಯ ಸಿಲಿಂಡರ್‌ ಅಕ್ರಮವಾಗಿ ಮಾರಾಟ

Leave a Comment