NEWS

400 ಕೆವಿ ಸಾಮರ್ಥ್ಯದ ವಿದ್ಯುತ್ ಉಪಕೇಂದ್ರ ಸ್ಥಾಪನೆ ಸ್ಧಳ ಪರಿಶೀಲನೆ

ಪಾಲನೆ ನ್ಯೂಸ್

ಮಂಡ್ಯ:  ಮಳವಳ್ಳಿ ತಾಲ್ಲೂಕು ಬಿ.ಜಿ.ಪುರ ಹೋಬಳಿಯ ಹೆಬ್ಬಣಿ ಗ್ರಾಮದ ಸರ್ವೆ ನಂ. 122ರಲ್ಲಿ 400 ಕೆ.ವಿ. ಉಪಕೇಂದ್ರ ಸ್ಥಾಪನೆಗೆ ಗುರುತಿಸಲಾದ ಸ್ಥಳವನ್ನು ಜಿಲ್ಲಾಧಿಕಾರಿ ಪರಿಶೀಲಿಸಿದರು.

ಸ್ಥಳ ಪರಿಶೀಲನೆಯ ಸಂದರ್ಭದಲ್ಲಿ ಜಾಗದ ವಿಸ್ತೀರ್ಣ, ಭೂಸ್ವರೂಪ, 400 ಕೆ.ವಿ. ಉಪಕೇಂದ್ರ ಸ್ಥಾಪನೆಗೆ ಅಗತ್ಯವಿರುವ ತಾಂತ್ರಿಕ ಅನುಕೂಲತೆಗಳು, ಸಂಪರ್ಕ ರಸ್ತೆ ಸೌಲಭ್ಯ, ಭದ್ರತಾ ವ್ಯವಸ್ಥೆಗಳು ಹಾಗೂ ಭವಿಷ್ಯ ವಿಸ್ತರಣೆಯ ಸಾಧ್ಯತೆಗಳ ಕುರಿತು ಸಂಬಂಧಿಸಿದ ಅಧಿಕಾರಿಗಳಿಂದ ಮಾಹಿತಿ ಪಡೆದು ಸಮಗ್ರವಾಗಿ ಅವಲೋಕನ ನಡೆಸಲಾಯಿತು.

ಈ 400 ಕೆ.ವಿ. ಉಪಕೇಂದ್ರ ಸ್ಥಾಪನೆಯಾದಲ್ಲಿ ಮಂಡ್ಯ ಜಿಲ್ಲೆಯ ಎಲ್ಲಾ ತಾಲ್ಲೂಕುಗಳು ಹಾಗೂ ಗ್ರಾಮಗಳಿಗೆ ಉತ್ತಮ ಗುಣಮಟ್ಟದ, ನಿರಂತರ ಹಾಗೂ ವಿಶ್ವಾಸಾರ್ಹ ವಿದ್ಯುತ್ ಪೂರೈಕೆ ಸಾಧ್ಯವಾಗಲಿದೆ. ಕೃಷಿ ಚಟುವಟಿಕೆಗಳು, ಕೈಗಾರಿಕೆಗಳು, ವಾಣಿಜ್ಯ ಕ್ಷೇತ್ರ ಮತ್ತು ಗೃಹ ಬಳಕೆಗೆ ಅಗತ್ಯವಿರುವ ವಿದ್ಯುತ್ ಸರಬರಾಜು ಇನ್ನಷ್ಟು ಸುಧಾರಣೆಯಾಗಲಿದೆ.

ಸಾರ್ವಜನಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಯೋಜನೆಯನ್ನು ಶೀಘ್ರ ಹಾಗೂ ಸಮಯಬದ್ಧವಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸ್ಥಳ ಪರಿಶೀಲನೆ ವೇಳೆ ಕಾ.ವಿ.ಪ್ರ.ನಿ.ನಿ. ಕಾರ್ಯಪಾಲಕ ಅಭಿಯಂತರರು (ಯೋಜನೆಗಳ ವಿಭಾಗ), ಉಪವಿಭಾಗಾಧಿಕಾರಿ,ತಹಸೀಲ್ದಾರ್  ಹಾಗೂ ಇನ್ನಿತರೆ ಸಂಬಂಧಿಸಿದ ಅಧಿಕಾರಿಗಳು ಹಾಜರಿದ್ದರು.

ಪಾಲನೆ.ಇನ್‌ ವಾಟ್ಸ್‌ ಆಪ್‌ ಗುಂಪಿಗೆ ಸೇರಿರಿ

Related posts

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಭಾರತ ಕಿರುಚಿತ್ರ ಸ್ಪರ್ಧೆ-2026

ಕುಸುಮ್-ಸಿ: ಮಂಡ್ಯ ಜಿಲ್ಲೆಯ ಮೊದಲ ಕಾಮಗಾರಿಗೆ ಚಾಲನೆ

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಯಾವುದೇ ಲೋಪ ಉಂಟಾಗದಂತೆ ಪಾರದರ್ಶಕವಾಗಿ ನಡೆಸಿ

Leave a Comment