NEWS

ಮಳವಳ್ಳಿ ಬಸ್ ನಿಲ್ದಾಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಿಶೇಷ ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ

ಪಾಲನೆ ನ್ಯೂಸ್

ಮಂಡ್ಯ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗಾಗಿ ರಾಜ್ಯ ಸರ್ಕಾರ ರೂಪಿಸಿರುವ ಕಾರ್ಯಕ್ರಮಗಳ ಕುರಿತು ಯೋಜಿಸಲಾಗಿದ್ದ “ಛಾಯಾಚಿತ್ರ ಪ್ರದರ್ಶನ” ಕಾರ್ಯಕ್ರಮಕ್ಕೆ ಮಳವಳ್ಳಿ ತಹಶೀಲ್ದಾರ್ ಲೋಕೇಶ್ ಅವರು ಚಾಲನೆ ನೀಡಿದರು.

ಮಳವಳ್ಳಿ ಬಸ್ ನಿಲ್ದಾಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ  ನಿರ್ಮಿಸಲಾಗಿದ್ದ ಪಂಚ ಗ್ಯಾರಂಟಿ ಯೋಜನೆಗಳು ಹಾಗೂ ಎಸ್.ಸಿ.ಪಿ ಯೋಜನೆಯ ಅರಿವು ಮತ್ತು ಜಾಗೃತಿ ಮೂಡಿಸುವ ಮಳವಳ್ಳಿ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ವಿಶೇಷ ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು  ರಾಜ್ಯ ಸರ್ಕಾರ ಸಾರ್ವಜನಿಕರ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ರೂಪಿಸಿದೆ. ಸರ್ಕಾರಿ ಯೋಜನೆಗಳ ಕುರಿತಾಗಿ ಸಾರ್ವಜನಿಕರಿಗೆ ತಿಳಿಸಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಶ್ರಮಿಸುತ್ತಿದೆ. ರಾಜ್ಯ ಸರ್ಕಾರ ನೀಡಿರುವ ಗ್ಯಾರಂಟಿ ಯೋಜನೆಗಳಿಂದ ಸಾರ್ವಜನಿಕರಿಗೆ ಅನುಕೂಲವಾಗುತ್ತಿದೆ ಎಂದು ಹೇಳಿದರು.

ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಶಕ್ತಿ ಯೋಜನೆ ಸಮರ್ಪಕವಾಗಿ ಸದುಪಯೋಗವಾಗುತ್ತಿದೆ.  ಸರ್ಕಾರಿ ಯೋಜನೆಗಳು ಅರ್ಹರನ್ನು ತಲುಪಬೇಕು.  ಮಳವಳ್ಳಿ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಸರಕಾರದ ವಿವಿಧ ಯೋಜನೆಗಳ ಕುರಿತು ಛಾಯಾಚಿತ್ರಗಳು ಸಮೇತ ಮಾಹಿತಿ ಇರುವ  ಪ್ರದರ್ಶನ ಕಂಡು ಕಣ್ತುಂಬಿಕೊಳ್ಳಬಹುದಾಗಿದೆ ಎಂದು ಹೇಳಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ  ಟಿ.ಕೆ ಹರೀಶ್  ಅವರು ಮಾತನಾಡಿ ಕರ್ನಾಟಕದ ಗ್ಯಾರಂಟಿ ಯೋಜನೆಗಳ ಕುರಿತು ಜನರಿಗೆ ಅರಿವು ಮೂಡಿಸಲು, ಛಾಯಾಚಿತ್ರ ಪ್ರದರ್ಶನವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಆಯೋಜಿಸಲಾಗಿದ್ದು  ಈ ಪ್ರದರ್ಶನಗಳು ‘ಶಕ್ತಿ’, ‘ಗೃಹ ಜ್ಯೋತಿ’, ‘ಗೃಹ ಲಕ್ಷ್ಮಿ’, ‘ಅನ್ನಭಾಗ್ಯ’ ಮತ್ತು ‘ಯುವ ನಿಧಿ’ ಯೋಜನೆಗಳ ಅನುಷ್ಠಾನ ಮತ್ತು ಪ್ರಯೋಜನಗಳನ್ನು ಜನರಿಗೆ ತಿಳಿಸಿಕೊಡುವ ಗುರಿಯನ್ನು ಹೊಂದಿವೆ ಎಂದು ತಿಳಿಸಿದರು.

ಜನರ ಗಮನಸೇಳೆದ ಛಾಯಾಚಿತ್ರಗಳು

ಮಳವಳ್ಳಿ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಆಯೋಜಿಸಲಾಗಿದ್ದ ವಿಶೇಷ ಛಾಯಾಚಿತ್ರಗಳ ಪ್ರದರ್ಶನ  ಸಾರ್ವಜನಿಕ ಗಮನ ಸೆಳೆಯಿತು.

ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಪ್ರತಿಮೆಯ ಎದುರು ಹಾಗೂ ವಿವಿಧ ಛಾಯಾಚಿತ್ರಗಳು ಮುಂದೆ ನಿಂತು ಸಾರ್ವಜನಿಕರು ಸೆಲ್ಫಿ ಕ್ಲಿಕ್ಕಸಿದರು.

ಕಾರ್ಯಕ್ರಮದಲ್ಲಿ ಮಳವಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಾಶ್ ಹಾಗೂ ಕೆ.ಎಸ್‌.ಆರ್.ಟಿ.ಸಿ ಸಿಬ್ಬಂದಿ ವರ್ಗದವರು ಹಾಜರಿದ್ದರು.‌

ಪಾಲನೆ.ಇನ್‌ ವಾಟ್ಸ್‌ ಆಪ್‌ ಗುಂಪಿಗೆ ಸೇರಿರಿ.

Related posts

ಸ್ಮೃತಿ ಪಡೆಗೆ 2ನೇ ಪ್ರಶಸ್ತಿ ತವಕ | ಕ್ಯಾಪಿಟಲ್ಸ್‌ಗೆ ಒಲಿಯುವುದೇ ಲಕ್?

ಎಚ್.ಡಿ.ಕುಮಾರಸ್ವಾಮಿ ಸಚಿವರಾಗಿ ಕಾರ್ಯನಿರ್ವಹಿಸಲು ಮಂಡ್ಯ ಜಿಲ್ಲೆಯ ಜನತೆ ಕಾರಣ : ನಿಖಿಲ್

ರೈತರಿಗೆ ಕಿರುಕುಳ ನೀಡುವ ಖಾಸಗಿ ಫೈನಾನ್ಸಿಯರ್’ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು

Leave a Comment