NEWS

ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಮಂಡ್ಯ ನ್ಯಾಯಾಲಯ ಸಂಕೀರ್ಣಕ್ಕೆ ಮಂಜೂರಾಗಿರುವ ಜಾಗದ ಮತ್ತು ನ್ಯಾಯಾಧೀಶರ ವಸತಿಸಮುಚ್ಚಗಳ ಪರಿಶೀಲನೆ

ಪಾಲನೆ ನ್ಯೂಸ್

‌ಮಂಡ್ಯ: ಮಂಡ್ಯದ ನ್ಯಾಯಾಧೀಶರಿಗೆ ಸಂಬಂಧಪಟ್ಟಂತೆ ನಗರದ ಮನುಗನಹಳ್ಳಿಯಲ್ಲಿ ವಸತಿಸಮುಚ್ಚಗಳನ್ನು ನಿರ್ಮಾಣ ಮಾಡಲಾಗಿದೆ.  ವಸತಿಸಮುಚ್ಚಗಳ ನಿರ್ಮಾಣಕ್ಕೆ ಹೆಚ್ಚುವರಿಯಾಗಿ ರೂ. 5 ಕೋಟಿ ಪ್ರಾಸ್ತವನೆ ಸಲ್ಲಿಸಲಾಗಿತ್ತು. ಸದರಿ ಜಾಗಕ್ಕೆ ಹೈಕೋರ್ಟ್ ನ್ಯಾಯಮೂರ್ತಿಗಳಾದ ಸುನಿಲ್ ದತ್ ಯಾದವ್ ಅವರು ಭೇಟಿ ನೀಡಿ ಕಟ್ಟಡದ ವಿನ್ಯಾಸ ಮತ್ತು ಉಳಿಕೆ ಕಾಮಗಾರಿಗಳ ವೀಕ್ಷಣೆ ಮತ್ತು ಪಾರ್ಕಿಂಗ್ ವ್ಯವಸ್ಥೆಯನ್ನು ಪರಿಶೀಲನೆ ನಡೆಸಿದರು.

ಮಂಡ್ಯ ಜಿಲ್ಲೆಯಲ್ಲಿ ಇರುವ ಏಳು ಸಿವಿಲ್ ನ್ಯಾಯಾಲಯ ಸಂಕೀರ್ಣಕ್ಕೆ ಸಂಬಂಧಪಟ್ಟಂತೆ ಕೃಷಿ ಇಲಾಖೆಗೆ ಸೇರಿದ 22.12 ಗುಂಟೆ ಜಾಗವನ್ನು ಈಗಾಗಲೇ ಗುರುತಿಸಲಾಗಿದೆ.

ಸದರಿ ಜಾಗದಲ್ಲಿ ನ್ಯಾಯಾಲಯ ಸಂಕೀರ್ಣ ನಿರ್ಮಾಣ ಮಾಡಲು ರೂ. 25 ಕೋಟಿ ವೆಚ್ಚದಲ್ಲಿ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಅವರು ತಿಳಿಸಿದರು.

ಇದೇ ಸಂದರ್ಭದಲ್ಲಿ  ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶರಾದ ಆನಂದ್ ಎಂ, ಮಂಡ್ಯ ತಹಶೀಲ್ದಾರ್ ವಿಶ್ವನಾಥ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಟಿ.ಎಸ್ ಸತ್ಯಾನಂದ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಪಾಲನೆ.ಇನ್‌ ವಾಟ್ಸ್‌ ಆಪ್‌ ಗುಂಪಿಗೆ ಸೇರಿರಿ.

Related posts

ಕರ್ನಾಟಕ ಸಂಘ ಕತಾರ್ ದೋಹಾದಲ್ಲಿ ಭವ್ಯವಾಗಿ ಕಾರ್ಮಿಕ ದಿನಾಚರಣೆ 2026 ಆಚರಣೆ

ಮಹಿಳಾ ದಿನಾಚರಣೆ, ಕಾದಂಬರಿ ಬಿಡುಗಡೆ, ಮಹಿಳಾ ಸಾಧಕಿಯರಿಗೆ ಸನ್ಮಾನ ಇಂದು ಸಂಜೆ

ಮಾ.23 ರಿಂದ ಏ. 5 ರ ವರೆಗೆ ವೈರಮುಡಿ ಬ್ರಹ್ಮೋತ್ಸವ ಆಚರಣೆ

Leave a Comment