NEWS

ನಿಮ್ಹಾನ್ಸ್ ಆಸ್ಪತ್ರೆಗೆ ಶಂಕು

100 ಕೋಟಿ ರೂ. ವೆಚ್ಚದ ವರುಣಾ ಕ್ಷೇತ್ರದಲ್ಲಿ ಅನುಷ್ಠಾನ

ಪಾಲನೆ ನ್ಯೂಸ್

ಮೈಸೂರು: ಜಿಲ್ಲೆಯ ವರುಣಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 323.04 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ನೆರವೇರಿಸಿದರು.

ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಕುಪ್ಯ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ವರುಣಾ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗಾಗಿ ಮೂರುಬಾರಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. 2024ರಲ್ಲಿ 501 ಕೋಟಿ ರೂ. ವೆಚ್ಚದ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ, 2025ರಲ್ಲಿ 1108 ಕೋಟಿ ರೂ. ವೆಚ್ಚದ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಹಾಗೂ ಇಂದು 323 ಕೋಟಿ ಸೇರಿದಂತೆ ಒಟ್ಟು 1932 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳನ್ನು ವರುಣಾ ವಿಧಾನಸಭಾ ಕ್ಷೇತ್ರ ಒಂದರಲ್ಲೇ ಹಮ್ಮಿಕೊಳ್ಳಲಾಗಿದೆ ಎಂದರು.

ಸರ್ಕಾರವು ಪಂಚ ಗ್ಯಾರಂಟಿ ಯೋಜನೆಗಳಿಗಾಗಿ 1,15,000 ಕೋಟಿ ರೂ. ವೆಚ್ಚ ಮಾಡಲಾಗಿದ್ದು, ಇದರ ಜೊತೆಗೆ ಅಭಿವೃದ್ಧಿ ಕಾಮಗಾರಿಗಳಿಗೂ ಸಹ ಒತ್ತು ನೀಡಲಾಗುತ್ತಿದೆ. ಮೈಸೂರು ಜಿಲ್ಲೆ ಒಂದರಲ್ಲೇ 10 ಸಾವಿರ ಕೋಟಿ ರೂ. ಅಭಿವೃದ್ಧಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದ್ದು ಜಿಲ್ಲೆಯ ಅಭಿವೃದ್ಧಿಗೆ ಸದಾ ಬದ್ಧನಾಗಿದ್ದೇನೆ ಎಂದರು.

ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಮಾತನಾಡಿ, ವರುಣ ಕ್ಷೇತ್ರದಲ್ಲಿ ನಿಮ್ಹಾನ್ಸ್ ಆಸ್ಪತ್ರೆ ಮಾದರಿಯಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಆಸ್ಪತ್ರೆ ನಿರ್ಮಾಣ ಮಾಡಲಾಗುತ್ತಿದೆ ಎಂದರು.

ವಿಧಾನ ಪರಿಷತ್ ಶಾಸಕ ಯತೀಂದ್ರ ಸಿದ್ದರಾಮಯ್ಯ ಮಾತನಾಡಿ, ಪ್ರತಿ ವರ್ಷ ನೂರಾರು ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗುತ್ತಿರುವುದು ಸರ್ಕಾರದಿಂದ ಜನಪರ ಕೆಲಸಗಳಿಗೆ ಸಾಕ್ಷಿ ಎಂದರು.

321.46 ಕೋಟಿ ರೂ. ವೆಚ್ಚದ 154 ಕಾಮಗಾರಿಗಳ ಶಂಕುಸ್ಥಾಪನೆ. 1.58 ಕೋಟಿ ರೂ. ವೆಚ್ಚದ 3 ಕಾಮಗಾರಿಗಳ ಉದ್ಘಾಟನೆ.

ಸಂಸದ ಸುನೀಲ್ ಬೋಸ್ ಮಾತನಾಡಿ, ಸಂಗೊಳ್ಳಿ ರಾಯಣ್ಣ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡವರು ಬಾಬೂ ಜಗಜೀವನರಾಮ್ ಅವರು ಕಾರ್ಮಿಕರ ಅಭಿವೃದ್ದಿಗಾಗಿ ಕಾರ್ಮಿಕ ವಿಮೆ ತಂದರು. ಸಮಾಜದಲ್ಲಿ ಹಿಂದುಳಿದ ವರ್ಗದವರ ಅಭಿವೃದ್ಧಿಗೆ ದುಡಿದವರು. ಇಂತಹ ಮಹಾನ್ ಚೇತನಗಳ ಪುತ್ಥಳಿಯನ್ನು ಅನಾವರಣಗೊಳಿಸಿರುವುದು ಸಂತೋಷದ ವಿಷಯವಾಗಿದೆ ಎಂದರು.

ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಎಚ್. ಸಿ. ಮಹದೇವಪ್ಪ, ಉನ್ನತ ಶಿಕ್ಷಣ ಸಚಿವ ಡಿ. ಸುಧಾಕರ್, ರಾಜ್ಯ ಗ್ಯಾರಂಟಿ ಯೋಜನೆ ಅಧ್ಯಕ್ಷ ಎಚ್.ಎಂ. ರೇವಣ್ಣ, ವಿಧಾನ ಪರಿಷತ್ ಶಾಸಕ ಡಿ. ತಿಮ್ಮಯ್ಯ, ಕೆ.ಆರ್. ನಗರ ಶಾಸಕ ರವಿಶಂಕರ್, ಮೈಸೂರು ಪೇಂಟ್ಸ್ ಆ್ಯಂಡ್ ವಾರ್ನಿಷ್ ಅಧ್ಯಕ್ಷ ಗಣೇಶ್, ಕುಪ್ಯ ಗ್ರಾಮ ಪಂಚಾಯತಿ ಅಧ್ಯಕ್ಷೆ ನಂದಿನಿ, ಉಪಾಧ್ಯಕ್ಷೆ ಪದ್ಮ, ಮಾಜಿ ಅಧ್ಯಕ್ಷರಾದ ಕುಪ್ಯ ರಾಘವೇಂದ್ರ, ಗವಿಸಿದ್ದಯ್ಯ, ಯಶೋಧ ಮಹದೇವಸ್ವಾಮಿ, ಕುಪ್ಯ ಭಾಗಮ್ಮ, ಕೆ.ಸಿ. ಪ್ರಭಾಕರ್, ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ರಮೇಶ್, ಜಿಪಂ ಮಾಜಿ ಸದಸ್ಯ ಕೆಂಪಯ್ಯನಹುಂಡಿ ಮಹದೇವ, ರಂಗಸಮುದ್ರ ಗ್ರಾಪಂ ಅಧ್ಯಕ್ಷೆ ಸುಜಾತ ರಂಗಸ್ವಾಮಿ, ಪುರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ತುಂಬಲ ಪ್ರಕಾಶ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಕೆಂಪಯ್ಯನಹುಂಡಿ ಮಹದೇವಣ್ಣ, ರಂಗಸಮುದ್ರ ಮಂಜುನಾಥ್, ಕುಪ್ಯ ಜಯರಾಂ ಸೇರಿದಂತೆ ಇನ್ನಿತರೆ ಗಣ್ಯರು ಹಾಜರಿದ್ದರು.‌

ಪಾಲನೆ.ಇನ್‌ ವಾಟ್ಸ್‌ ಆಪ್‌ ಗುಂಪಿಗೆ ಸೇರಿರಿ.

Related posts

ಮೊದಲು ನ್ಯಾಯ ಬೇಡಿ ಬಂದವರಿಗೆ ನ್ಯಾಯ ನೀಡುವುದನ್ನು ಕಲಿತುಕೊಳ್ಳಿ : ಡಾ.ನಾಗಲಕ್ಷ್ಮೀ

ವರನಟ ಡಾ. ರಾಜ್‌ಕುಮಾರ್ ಅವರಿಗೆ ಮರಣೋತ್ತರ ‘ಭಾರತ ರತ್ನ’ ನೀಡಲು ಮನವಿ ಮಾಡಿ

ವಿವಿಧ ಇಲಾಖೆಗಳ ಹುದ್ದೆಗಳಿಗೆ ಶೇ.17ರಿಂದ ಶೇ.15ಕ್ಕೆ ಸೀಮಿತಗೊಳಿಸಲಾಗಿದೆ

Leave a Comment