ಪಾಲನೆ ನ್ಯೂಸ್
ಮಂಡ್ಯ: ಎಸ್ಸೆಸ್ಸೆಲ್ಸಿ ಪೂರ್ವಸಿದ್ಧತಾ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಶಾಲಾ ಶಿಕ್ಷಣ ಇಲಾಖೆ, ಅಕ್ರಮ ತಡೆಗೆ ಹೊಸ ಕ್ರಮ ಅಳವಡಿಸಿಕೊಂಡಿದೆ. ಶಾಲೆಗಳಿಗೆ ಪ್ರಶ್ನೆಪತ್ರಿಕೆ ಕಳುಹಿಸುವುದು, ಪರೀಕ್ಷಾ ದಿನ ವಿದ್ಯಾರ್ಥಿಗಳು ಶಾಲೆಗೆ ಹಾಜರಾಗುವ ಸಮಯ ಮತ್ತು ಪರೀಕ್ಷೆಗಳ ಸಮಯವನ್ನೇ ಬದಲಾವಣೆ ಮಾಡಿ ಆದೇಶ ಹೊರಡಿಸಿದೆ.
ಪ್ರಶ್ನೆಪತ್ರಿಕೆ ಸೋರಿಕೆ ತಡೆಗಟ್ಟಲು ಪರೀಕ್ಷಾ ಸಮಯ ಬದಲು
ಪ್ರಸ್ತುತ ಪ್ರಥಮ ಭಾಷೆ ವಿಷಯಗಳಿಗೆ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.15ರವರೆಗೆ ಪರೀಕ್ಷೆ ನಡೆಯಲಿದೆ. ಉಳಿದ ವಿಷಯಗಳಿಗೆ ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆವರೆಗೆ ಸಮಯ ನಿಗದಿ ಮಾಡಲಾಗಿದ್ದು, ಈಗ 10 ಗಂಟೆ ಬದಲಿಗೆ 11 ಗಂಟೆಗೆ ಪರೀಕ್ಷೆ ಆರಂಭಿಸಲಿದೆ. ವಿದ್ಯಾರ್ಥಿಗಳು ಬೆಳಗ್ಗೆ 9 ಗಂಟೆಗೆ ಶಾಲೆಗೆ ಹಾಜರಾಗಬೇಕು.
ಹೊಸ ನಿಯಮಗಳೇನು?: ಜ.27ರಿಂದ ಫೆ.2ರವರೆಗೆ ಎರಡನೇ

ಪೂರ್ವಸಿದ್ಧತಾ ಪರೀಕ್ಷೆ ಮತ್ತು ಫೆ.23ರಿಂದ 28ರವರೆಗೆ ಮೂರನೇ ಪೂರ್ವಸಿದ್ಧತಾ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಗಳಿಗೆ ಪ್ರಸ್ತುತ ಬೆಳಗ್ಗೆ 7 ಗಂಟೆಗೆ ಪ್ರೌಢಶಾಲಾ ಮುಖ್ಯ ಶಿಕ್ಷಕರ ಶಾಲಾ ಲಾಗಿನ್‌ಗೆ ಕಳುಹಿಸುತ್ತಿರುವ ಪ್ರಶ್ನೆಪತ್ರಿಕೆಗಳನ್ನು ಬೆಳಗ್ಗೆ 9.30ಕ್ಕೆ ಕಳುಹಿಸಲು ನಿರ್ಧರಿಸಲಾಗಿದೆ. ಈ ಎರಡೂ ಪರೀಕ್ಷೆಗಳನ್ನು ಶಾಲಾ ಶಿಕ್ಷಣ ಇಲಾಖೆ ಆಯುಕ್ತಾಲಯದ ಹಂತದಲ್ಲಿ ಪ್ರೌಢ ಶಿಕ್ಷಣ ನಿರ್ದೇಶಕರು, ಧಾರವಾಡ ಮತ್ತು ಕಲಬುರಗಿ ಅಪರ ಆಯುಕ್ತಾಲಯದ ನಿರ್ದೇಶಕರನ್ನು ಪರೀಕ್ಷಾ ಮೇಲ್ವಿಚಾರಣೆಗೆ ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ. ಆಯಾ ವಿಭಾಗದ ವಿಭಾಗೀಯ ಸಹ ನಿರ್ದೇಶಕರಿಗೆ ಪರೀಕ್ಷೆಯ ಮೇಲುಸ್ತುವಾರಿ ಜವಾಬ್ದಾರಿ ನೀಡಲಾಗಿದೆ.
ಪಾಲನೆ.ಇನ್ ವಾಟ್ಸ್ ಆಪ್ ಗುಂಪಿಗೆ ಸೇರಿರಿ.


