NEWS

ಜ.25 ರಂದು ಅಂತಾರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿ -ಡಾ. ಕುಮಾರ

ಪಾಲನೆ ನ್ಯೂಸ್

ಮ‌ಂಡ್ಯ: ಜನವರಿ 25 ರಂದು ಅಂತಾರಾಷ್ಟ್ರೀಯ ಮತದಾನ ದಿನಾಚರಣೆಯನ್ನು ನಗರದ ಡಿ ದೇವರಾಜ ಅರಸು ಸಭಾಂಗಣದಲ್ಲಿ ಆಯೋಜಿಸಲಾಗಿದ್ದು ಅರ್ಥಪೂರ್ಣವಾಗಿ ಆಚರಿಸಿ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ಹೇಳಿದರು.

ಇಂದು ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಅಂತಾರಾಷ್ಟ್ರೀಯ ಮತದಾನ ದಿನಾಚರಣೆಯ ಸಂಬಂಧ ಪೂರ್ವ ಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಯನ್ನು ಮುದ್ರಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ತಲುಪಿಸಿ ಎಂದು ಹೇಳಿದರು.

ಜ.23 ರಂದು ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಮತದಾನ ಪ್ರತಿಜ್ಞಾವಿಧಿ ಬೋಧನೆ

ಜನವರಿ 23 ರಂದು ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಮತದಾನ ಪ್ರತಿಜ್ಞಾ ವಿಧಿಯನ್ನು ಬೋಧನೆ ಮಾಡಲಾಗುವುದು. ಅಂತರಾಷ್ಟ್ರೀಯ ಮತದಾರ ದಿನಾಚರಣೆಯ ಪ್ರಯುಕ್ತ ಏರ್ಪಡಿಸಿಲಾಗಿದ್ದ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನವನ್ನು ನೀಡಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಮತದಾನ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು.

ಉಪವಿಭಾಗಾಧಿಕಾರಿ ಶಿವಮೂರ್ತಿ, ಚುನಾವಣಾ ತಹಸೀಲ್ದಾರ್ ರವಿಶಂಕರ್, ಹಿಂದುಳಿದ ವರ್ಗದ ಇಲಾಖೆಯ ಜಿಲ್ಲಾಧಿಕಾರಿ ಮಂಜುಳಾ, ಮುಜುರಾಯಿ ತಹಸೀಲ್ದಾರ್ ತಮ್ಮೆಗೌಡ, ನಗರಸಭಾ ಪೌರಾಯುಕ್ತೆ ಪಂಪಶ್ರೀ, ಮಂಡ್ಯ ತಹಶೀಲ್ದಾರ್ ವಿಶ್ವನಾಥ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಇಲಾಖೆಯಿಂದಲೇ ಮಂಡ್ಯದಲ್ಲಿ ಕೈಗಾರಿಕೆ

ಎಲ್ಲರ ಸಹಕಾರದಲ್ಲಿ ಕ.ಸಾ.ಪ. ಕಾರ್ಯಕ್ರಮ : ಕೆ.ಟಿ. ಹನುಮಂತು

ಪ್ರಸ್ತುತ ಭಾರತದಲ್ಲಿ ರಾಜಕೀಯ ಅಸ್ಪೃಶ್ಯತೆ ತೊಲಗಿಸಿ, ಮುಖ್ಯಮಂತ್ರಿ ಪ್ರಧಾನ ಮಂತ್ರಿ-ವೆಂಕಟಗಿರಿಯಯ್ಯ

Leave a Comment