NEWS

ಜಿಲ್ಲೆಯಲ್ಲಿ 18 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಭಾಗಿ

ಬುದ್ಧಿವಂತರಾದಾಗ ಮಾತ್ರ ಬದುಕಲು ದಾರಿ ದೊರೆಯುತ್ತದೆ: ಎನ್.ಚಲುವರಾಯಸ್ವಾಮಿ

ಪಾಲನೆ ನ್ಯೂಸ್

ಮಂಡ್ಯ: ಜಿಲ್ಲೆಯಲ್ಲಿ ಸದರಿ ವರ್ಷ 18 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಜಿಲ್ಲೆಯಲ್ಲಿ 18 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಭಾಗಿಯಾಗಲಿದ್ದಾರೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರು ಹೇಳಿದರು.

ಶಾಲಾ ಶಿಕ್ಷಣ ಇಲಾಖೆ, ಮಂಡ್ಯ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ವಿಜಯ ಕರ್ನಾಟಕ ಮೈಸೂರು ಆವೃತ್ತಿಯ ಸಹಯೋಗದಲ್ಲಿ  ಆಯೋಜಿಸಿದ್ದ “ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ಎದುರಿಸುವುದು ಹೇಗೆ? ಪ್ರೇರಣದಾಯಿ ಕಾರ್ಯಗಾರ ಹಾಗೂ ಸ್ಪೂರ್ತಿ ಸಿಂಚನ ಕಾರ್ಯಾಗಾರ”ವನ್ನು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಈಗಾಗಲೇ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿಗಳಿಗೆ ನಡೆಸಲಾದ ಪೂರ್ವ ಸಿದ್ಧತಾ ಪರೀಕ್ಷೆಯಲ್ಲಿ ನಾಲ್ಕುವರೆ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಶೇ. 50ಕ್ಕಿಂತ ಕಡಿಮೆ ಅಂಕಗಳನ್ನು ಪಡೆದಿದ್ದಾರೆ. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಪೂರಕವಾಗುವ 13 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಪುಸ್ತಕಗಳನ್ನು ನೀಡಲಾಗಿದೆ ಎಂದು ತಿಳಿಸಿದರು.

ಹಿಂದೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪಾಸ್ ಆದರೆ ಸಾಕಾಗಿತ್ತು ಅವರಿಗೆ ಅನೇಕ ಅವಕಾಶಗಳು ಲಭಿಸುತ್ತಿತ್ತು ಆದರೆ ಇಂದಿನ ಪರಿಸ್ಥಿತಿಯಲ್ಲಿ ಶೇ. 90 ಕ್ಕಿಂತ ಹೆಚ್ಚಿನ ಅಂಕಗಳು ಲಭಿಸಿದರೂ ಅವಕಾಶಗಳು ಸಿಗುವುದು ಕಷ್ಟವಾಗಿದೆ. ಸ್ಪರ್ಧಾತ್ಮಕ ಯುಗದಲ್ಲಿ ಸ್ಪರ್ಧೆ ಹೆಚ್ಚಿದೆ ಹಾಗಾಗಿ ವಿದ್ಯಾರ್ಥಿಗಳು ನೂರಕ್ಕೆ ನೂರು ಅಂಕ ಗಳಿಸಬೇಕು ಎಂದು ಹೇಳಿದರು.

ಕೇವಲ ಅಂಕಗಳಿಂದ ವಿದ್ಯಾರ್ಥಿಗಳು ಬದುಕಿನಲ್ಲಿ ಯಶಸ್ಸು ಕಾಣಲು ಸಾಧ್ಯವಿಲ್ಲ. ಬುದ್ಧಿವಂತರಾದಾಗ ಮಾತ್ರ ಬದುಕಲು ದಾರಿ ದೊರೆಯುತ್ತದೆ. ವಿದ್ಯಾರ್ಥಿ ದೆಸೆಯಲ್ಲಿ ಅನೇಕ ಸಾಧನೆಗಳನ್ನು ಮಾಡುವ ಅವಕಾಶ ಮತ್ತು ಸಾಮರ್ಥ್ಯ ಇದೆ. ತಲೆಗೆ ಕೆಲಸ ಕೊಡಿ. ಎಲ್ಲರೂ ನೂರಕ್ಕೆ ನೂರು ಅಂಕಗಳನ್ನು ಗಳಿಸಬೇಕು ಬುದ್ಧಿವಂತರಾಗಬೇಕು. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಭಾಗವಹಿಸುವಂತಹ ಪ್ರವೃತ್ತಿ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಪಾಲನೆ.ಇನ್‌ ವಾಟ್ಸ್‌ ಆಪ್‌ ಗುಂಪಿಗೆ ಸೇರಿರಿ.

Related posts

ನಾರಿ ಶಕ್ತಿಗೆ ಕಾನೂನಿನ ಅರಿವು ಅಗತ್ಯ: ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀ ಸುಬ್ರಹ್ಮಣ್ಯ ಜೆ.ಎನ್ ಅಭಿಪ್ರಾಯ

ಸಕ್ಕರೆ ನಗರಿಯಲ್ಲಿ ಹೂವಿನ ಲೋಕ: ಕೆ.ಆ‌ರ್.ನಂದಿನಿ

ಸುಪ್ರೀಂ ಕೋರ್ಟ್‌ನಲ್ಲಿ ಸಮ್ಮಾನ್ ಸಮರೋಹ್ (ವಿಶೇಷ ಲೋಕ ಅದಾಲತ್)

Leave a Comment