NEWS

ಸಂಪರ್ಕ ಸೇತುವಾದ ಕೃಷಿಕ ಸಮಾಜಕ್ಕೆ ಸ್ವಂತ ಕಟ್ಟಡಕ್ಕೆ ಅನುದಾನ: ದಿನೇಶ್ ಗೂಳೀಗೌಡ ಭರವಸೆ

ಪಾಲನೆ ನ್ಯೂಸ್

ಮಂಡ್ಯ: ಕೃಷಿಕರಿಗೆ ಸರ್ಕಾರದಿಂದ ದೊರೆಯಬೇಕಾದ ಸವಲತ್ತುಗಳ ಬಗ್ಗೆ ಸರ್ಕಾರ ಕೃಷಿ ಇಲಾಖೆ ಹಾಗೂ ಕೃಷಿಕರ ಸಂಪರ್ಕ ಕೊಂಡಿಯಾಗಿ ಸೇವೆ ಸಲ್ಲಿಸುತ್ತಾ ರಾಜ್ಯದಾದ್ಯಂತ ಇರುವ ಕೃಷಿಕ ಸಮಾಜಗಳು ಸ್ವಂತ ಕಟ್ಟಡ ನಿರ್ಮಿಸಿಕೊಳ್ಳುವ ಅವಶ್ಯಕತೆ ಇದೆ ಎಂದು ಕರ್ನಾಟಕ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷರು ಹಾಗೂ ಮಂಡ್ಯ ಜಿಲ್ಲಾ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳೀಗೌಡ ಅಭಿಪ್ರಾಯಪಟ್ಟರು.

ಶ್ರೀರಂಗಪಟ್ಟಣ ತಾಲೂಕು ಕೃಷಿಕ ಸಮಾಜದ ಕಟ್ಟಡ ನಿರ್ಮಾಣಕ್ಕೆ ಅನುದಾನ ಕೋರಿ ಮಂಡ್ಯ ಜಿಲ್ಲಾ ಕೃಷಿಕ ಸಮಾಜದ ಉಪಾಧ್ಯಕ್ಷರು ಹಾಗೂ ಜಿಲ್ಲಾ ಪ್ರತಿನಿಧಿ ಜಿ. ಧನಂಜಯ ದರಸಗುಪ್ಪೆ ಮನವಿ ಸಲ್ಲಿಸಿದ ಸಂದರ್ಭದಲ್ಲಿ ಮಾತನಾಡಿದರು.

ಕೃಷಿಕ ಸಮಾಜದ ಕಟ್ಟಡ ನಿರ್ಮಾಣಕ್ಕೆ ತಮ್ಮ ಅನುದಾನದಲ್ಲಿ ಸಹಕಾರ ನೀಡುವುದಾಗಿ ಇದೇ ಸಂದರ್ಭದಲ್ಲಿ ಭರವಸೆ ನೀಡಿದರಲ್ಲದೇ, ಸದರಿ ಅನುದಾನ ಬಳಸಿಕೊಂಡು ಕೃಷಿಕ ಭವನ ನಿರ್ಮಾಣ ಮಾಡಿ, ಕೃಷಿಕರಿಗೆ ಅನುಕೂಲವಾದ ತರಬೇತಿ, ಕಾರ್ಯಾಗಾರ, ತಾಂತ್ರಿಕ ಬೇಸಾಯ, ಸಾವಯವ ಕೃಷಿ ಪದ್ಧತಿ ಅಳವಡಿಕೆ ಬಗ್ಗೆ ಮಾಹಿತಿ ನೀಡುವ ಕೃಷಿ, ತೋಟಗಾರಿಕೆ, ಹೈನುಗಾರಿಕೆ, ರೇಷ್ಮೆ, ಮೀನುಗಾರಿಕೆ ಇನ್ನಿತರೇ ಕೃಷಿಯಾಧರಿತ ಕಾರ್ಯಕ್ರಮ ಹಮ್ಮಿಕೊಳ್ಳಬೇಕೆಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ, 10ಟಿವಿ ಕೃಷ್ಣ, ಅಭಿ ಕೆ., ಎಂ. ಕೆ. ರಾಜು ಹಾಗೂ ಇತರರು ಉಪಸ್ಥಿತರಿದ್ದರು.

ಪಾಲನೆ.ಇನ್‌ ವಾಟ್ಸ್‌ ಆಪ್‌ ಗುಂಪಿಗೆ ಸೇರಿರಿ.

Related posts

ಆಪ್ತ ಸಂವಾದದಲ್ಲಿ ಸಂಜಯ್ ಗುಬ್ಬಿ: ಶಾಲೆಗೆ ಬಂದ ಚಿರತೆ ಮತ್ತು ಇತರ ಕಥೆಗಳು ಮಾತುಕತೆ

ತಾಂತ್ರಿಕ ದೋಷ: ವಾಷಿಂಗ್ಟನ್‌ಗೆ ಮರಳಿದ ಟ್ರಂಪ್‌ ಅವರ ಏ‌ರ್ ಫೋರ್ಸ್ ಒನ್ ವಿಮಾನ

ಮಂಡ್ಯ ಪೊಲೀಸ್‌ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷ ಡಿ.ಎಸ್. ಶ್ರೀಕಂಠ

Leave a Comment