NEWS

5.5 ಕೋಟಿ ರೂ. ವೆಚ್ಚದಲ್ಲಿ ಕನ್ನಡ ಭವನ ನಿರ್ಮಾಣ

ಜ. 30 ರಂದು ಕನ್ನಡ ಭವನ ಕಟ್ಟಡದ ಶಂಕುಸ್ಥಾಪನೆ

ಪಾಲನೆ ನ್ಯೂಸ್

ಮಂಡ್ಯ: ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅರ್ಥಪೂರ್ಣ ಮತ್ತು ಯಶಸ್ವಿಯಾಗಿ ಆಯೋಜನೆ ಮಾಡಿದ ಸವಿ ನೆನಪಿಗಾಗಿ ಸಮ್ಮೇಳನದಲ್ಲಿ ವಿವಿಧ ಮೂಲಗಳಿಂದ ಸಂಗ್ರಹಿಸಿದ ಹಣದ ಉಳಿತಾಯ 2.5 ಕೋಟಿ ರೂ. ಹಾಗೂ ಮುಖ್ಯಮಂತ್ರಿಗಳ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆಯಡಿ 3 ಕೋಟಿ ರೂ. ಸೇರಿ ಒಟ್ಟು 5.5 ಕೋಟಿ ರೂ. ವೆಚ್ಚದಲ್ಲಿ ಕನ್ನಡ ಭವನ ನಿರ್ಮಾಣ ಸಂಬಂಧ ಕಟ್ಟಡ ಕಾಮಗಾರಿಗೆ ಜನವರಿ 30 ರಂದು ಬೆಳಿಗ್ಗೆ 8.30 ಗಂಟೆಗೆ  ಕಟ್ಟಡ ಶಂಕುಸ್ಥಾಪನೆ ನೆರವೇರಲಿದೆ.

ಕನ್ನಡದ ಐಕ್ಯತೆಯ ಧ್ಯೋತಕವಾಗಿ ನಮ್ಮ ಸಾಹಿತ್ಯ – ಸಂಸ್ಕೃತಿ – ಪರಂಪರೆಯನ್ನು ಬಿಂಬಿಸುವ ಹಾಗೂ ನಾಡು-ನುಡಿಯ ಬಗೆಗಿನ ಅಭಿಮಾನವನ್ನು ಜನ ಮನದಲ್ಲಿ ಮೂಡಿಸುವ ನಿಟ್ಟಿನಲ್ಲಿ ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು 2024 ರ ಡಿಸೆಂಬರ್ 20, 21 ಮತ್ತು 22 ರವರೆಗೆ ಆಚರಿಸಲಾಯಿತು.

ಸಾಹಿತ್ಯಾಸಕ್ತರ ಸಹಕಾರದಿಂದ ಕಾರ್ಯಕ್ರಮ ಜರುಗಿದ್ದು, ಹಲವು ಅಪಸ್ವರ, ಕೇಂದ್ರ ಕಸಾಪ ಏಕಪಕ್ಷೀಯ ನಡೆ ನಡುವೆ ಸಮ್ಮೇಳನ ಜನ ಜಾತ್ರೆಯಾದ ಬಗ್ಗೆ ಟೀಕೆಗಳೂ ವ್ಯಕ್ತವಾದವು. ಸಮ್ಮೇಳನದ ಒಟ್ಟು ಆಶಯ ಕಡೆಗಣನೆಯಾಗಿರುವುದು ವಿಷಾದನೀಯ.

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸವಿ ನೆನಪಿಗಾಗಿ ಕನ್ನಡ ಭವನವೊಂದನ್ನು ನಿರ್ಮಿಸಬೇಕು ಎಂಬ ಅಭಿಲಾಷೆಯನ್ನು ಜನಪ್ರತಿನಿಧಿಗಳು, ಸಾಹಿತ್ಯಾಸಕ್ತರು ಹಾಗೂ ಮಂಡ್ಯದ ಜನತೆ ವ್ಯಕ್ತ ಪಡಿಸಿದ್ದು, ಅದು ಮುಹೂರ್ತ ಒದಗಿ ಬಂದಿರುವುದು ಸಂತಸದ ಸಂಗತಿಯಾಗಿದೆ.

ಈ ಸಂಬಂಧ ಮಂಡ್ಯ ನಗರದ ಸರ್. ಎಂ. ವಿಶ್ವೇಶ್ವರಯ್ಯ ಒಳಾಂಗಣ ಕ್ರೀಡಾಂಗಣದ ಆವರಣದಲ್ಲಿ, ಸರ್ವೆ ನಂ. 2 ರಲ್ಲಿ 0.13ಗುಂಟೆ ಸರ್ಕಾರಿ ಜಮೀನನ್ನು ಕನ್ನಡ ಭವನ ನಿರ್ಮಿಸುವ ಉದ್ದೇಶಕ್ಕಾಗಿ ಜಾಗವನ್ನು ಗುರುತಿಸಲಾಗಿದೆ.

ಡಾ. ನಿರ್ಮಲಾನಂದನಾಥ ಸ್ವಾಮೀಜಿ ದಿವ್ಯ ಸಾನ್ನಿಧ್ಯದಲ್ಲಿ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಮತ್ತು ಎಲ್ಲಾ ಜನಪ್ರತಿನಿಧಿಗಳು, ಸಾಹಿತ್ಯಾಸಕ್ತರು, ಸಾರ್ವಜನಿಕರ ಸಮ್ಮುಖದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಪಾಲನೆ.ಇನ್‌ ವಾಟ್ಸ್‌ ಆಪ್‌ ಗುಂಪಿಗೆ ಸೇರಿರಿ.

Related posts

ಭೂ ಕಬಳಿಕೆದಾರರಿಗೆ ಸಚಿವ ಸಿಆರ್‌ಎಸ್ ರಕ್ಷಣೆ

ಟಿ-20 ವಿಶ್ವಕಪ್ ಫೈನಲ್‌ಗೆ ಲಗ್ಗೆ ಇಟ್ಟ ಭಾರತ

ಒತ್ತುವರಿ ತೆರವುಗೊಳಿಸಲು ಜಿಲ್ಲಾಧಿಕಾರಿಗಳ ಆದೇಶ

Leave a Comment