NEWS

ಮಹಾಂತೇಶ್​​ ಬೀಳಗಿ ಪುತ್ರಿಗೆ ಸರ್ಕಾರಿ ನೌಕರಿ: ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚೈತನ್ಯಾ ಬೀಳಗಿ ಅವರಿಗೆ ನೇಮಕಾತಿ ಆದೇಶ ಪತ್ರವನ್ನು ಹಸ್ತಾಂತರಿಸಿದರು

ಪಾಲನೆ ನ್ಯೂಸ್

ಬೆಂಗಳೂರು: ಇತ್ತೀಚಿಗೆ ಭೀಕರ ಕಾರು ಅಪಘಾತದಲ್ಲಿ ಮೃತಪಟ್ಟ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ‌ ಅವರ ಪುತ್ರಿ ಚೈತನ್ಯಾ ಬೀಳಗಿ ಅವರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ಕೆಲಸ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ.

ಚೈತನ್ಯಾ ಬೀಳಗಿ ಅವರಿಗೆ ಕರ್ನಾಟಕ ಸರ್ಕಾರದ ಸಚಿವಾಲಯದಲ್ಲಿ ಸಹಾಯಕಿ(ಪ್ರಥಮ ದರ್ಜೆ ಸಹಾಯಕ) ಉದ್ಯೋಗ ನೀಡಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚೈತನ್ಯಾ ಬೀಳಗಿ ಅವರಿಗೆ ನೇಮಕಾತಿ ಆದೇಶ ಪತ್ರವನ್ನು ಹಸ್ತಾಂತರಿಸಿದರು.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ‌ ಅವರು ಸೇವೆಯಲ್ಲಿರುವಾಗಲೇ ನಿಧನ ಹೊಂದಿದ ಹಿನ್ನೆಲೆಯಲ್ಲಿ ಅವರ ಪುತ್ರಿ ಚೈತನ್ಯಾ ಎಮ್. ಬೀಳಗಿ ಅವರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗದ ನೇಮಕಾತಿ ಪತ್ರವನ್ನು ಹಸ್ತಾಂತರಿಸಿ, ತಂದೆಯಂತೆಯೇ ಸಮಾಜಮುಖಿಯಾಗಿ ಕರ್ತವ್ಯ ನಿರ್ವಹಿಸುವಂತೆ ಶುಭ ಕೋರಿದೆ ಎಂದು ತಿಳಿಸಿದ್ದಾರೆ.

ಈ ವೇಳೆ ಸಚಿವರಾದ ಎಚ್. ಕೆ. ಪಾಟೀಲ್, ಎಂ. ಬಿ. ಪಾಟೀಲ್, ಶಿವಾನಂದ ಪಾಟೀಲ್, ಕಾಂಗ್ರೆಸ್ ಪಕ್ಷದ ಮುಖ್ಯ ಸಚೇತಕರಾದ ಅಶೋಕ್ ಪಟ್ಟಣ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಉಪಸ್ಥಿತರಿದ್ದರು.

ಕಳೆದ ವರ್ಷ ನವೆಂಬರ್ 25ರಂದು ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ ಬಳಿ ಸಂಭವಿಸಿದ ಕಾರು ಅಪಘಾತದಲ್ಲಿ ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮಹಾಂತೇಶ್ ಬೀಳಗಿ ಅವರು ಮೃತಪಟ್ಟಿದ್ದರು.

ಪಾಲನೆ.ಇನ್‌ ವಾಟ್ಸ್‌ ಆಪ್‌ ಗುಂಪಿಗೆ ಸೇರಿರಿ.

Related posts

ತಾಲಿಬಾನ್ ಉಗ್ರರ ಹತ್ಯೆ

ರೈತರ ಬಗೆಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ನಿರ್ಲಕ್ಷ ಜಿಲ್ಲಾಧಿಕಾರಿ ಕಚೇರಿ ಮುಂದೆ ರೈತರ ಪ್ರತಿಭಟನೆ

ತಾನೂ ಗುಂಡು ಹಾರಿಸಿಕೊಂಡು ತರಗತಿಯಲ್ಲೇ ಸಹಪಾಠಿಗೆ ಗುಂಡಿಕ್ಕಿ ಕೊಂದ ವಿದ್ಯಾರ್ಥಿ

Leave a Comment