ಪಾಲನೆ ನ್ಯೂಸ್
ಮಂಡ್ಯ: ಎಂ. ಶ್ರೀನಿವಾಸ್ ಹುಟ್ಟು ಹಬ್ಬದ ಹಿನ್ನೆಲೆ ಹನಕೆರೆ ಎಂ. ಶ್ರೀನಿವಾಸ್ ಪ್ರತಿಷ್ಠಾನ ವತಿಯಿಂದ ಕರ್ನಾಟಕ ಸಂಘದ ಸಹಕಾರದೊಂದಿಗೆ ಅಭಿನಂದನಾ ಗ್ರಂಥ ಬಿಡುಗಡೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಫೆ. 2ರಂದು ಸಂಜೆ 4 ಗಂಟೆಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಡಿ. ಶಿವರಾಜು ಕೀಲಾರ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಂ.ಶ್ರೀನಿವಾಸ್ ಅವರ ಹುಟ್ಟು ಹಬ್ಬದ ಅಂಗವಾಗಿ ‘ಶ್ರೀನಿಧಿ’ ಎಂ. ಶ್ರೀನಿವಾಸ್ ಅಭಿನಂದನಾ ಗ್ರಂಥ, ಪ್ರಗತಿಪರ ರೈತ ಶಿವು ಬನ್ನಹಳ್ಳಿ ಅವರಿಗೆ ಅರಸಮ್ಮ ಮೆಣಸೇಗೌಡ ಕೃಷಿ ಪ್ರಶಸ್ತಿ ಹಾಗೂ ಸಾಹಿತಿ ಡಾ. ಎಸ್. ತುಕಾರಾಮ್ ಅವರಿಗೆ ಎಂ. ಶ್ರೀನಿವಾಸ್ ಸಮಾಜ ಸೇವಾ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.
ಕೃಷಿ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ಪಿ. ರವಿಕುಮಾರ್‌ಗೌಡ ಅಧ್ಯಕ್ಷತೆ ವಹಿಸುವರು. ವಿಶ್ವ ಒಕ್ಕಲಿಗ ಮಠದ ಪೀಠಾಧ್ಯಕ್ಷ ಡಾ. ನಿಶ್ಚಲಾನಂದನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಡಾ. ಎಸ್. ಶಿವರಾಮು, ಲೋಕೇಶ್ ಚಂದಗಾಲು ಸಂಪಾದಕತ್ವದ ‘ಶ್ರೀನಿಧಿ’ ಅಭಿನಂದನಾ ಗ್ರಂಥವನ್ನು ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ಆದಾಯ ತೆರಿಗೆ ಇಲಾಖೆಯ ಮುಖ್ಯ ಆಯುಕ್ತ ಜಯರಾಂ ರಾಯಪುರ ಬಿಡುಗಡೆ ಮಾಡುವರು ಎಂದು ಹೇಳಿದರು.
ಮಾಜಿ ಶಾಸಕ ಎಂ. ಶ್ರೀನಿವಾಸ್ ಅವರನ್ನು ಮಾಜಿ ಸಚಿವ ಸಿ. ಎಸ್. ಪುಟ್ಟರಾಜು ಅಭಿನಂದಿಸಲಿದ್ದಾರೆ. ಶಾಸಕರು ಹಾಗೂ ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಪಿ. ಎಂ. ನರೇಂದ್ರಸ್ವಾಮಿ ಹಾಗೂ ಒಕ್ಕಲಿಗರ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ. ಎಸ್. ಆತ್ಮಾನಂದ ಪ್ರಶಸ್ತಿ ಪ್ರದಾನ ಮಾಡುವರು.
ಮುಖ್ಯ ಅತಿಥಿಗಳಾಗಿ ಶಾಸಕ ಹಾಗೂ ಸೆಸ್ಕ್ ಅಧ್ಯಕ್ಷ ಎ. ಬಿ. ರಮೇಶ್ ಬಂಡಿಸಿದ್ದೇಗೌಡ, ಶಾಸಕರಾದ ಕೆ. ಎಂ. ಉದಯ್, ದರ್ಶನ್ ಪುಟ್ಟಣ್ಣಯ್ಯ, ಮಧು ಜಿ.ಮಾದೇಗೌಡ, ಮಾಜಿ ಸಚಿವ ಕೆ. ಸಿ. ನಾರಾಯಣಗೌಡ, ವಿಧಾನಪರಿಷತ್ ಮಾಜಿ ಸದಸ್ಯರಾದ ಬಿ. ರಾಮಕೃಷ್ಣ, ಮರಿತಿಬ್ಬೇಗೌಡ, ಕೆ. ಟಿ. ಶ್ರೀಕಂಠೇಗೌಡ ಉಪಸ್ಥಿತರಿರುವರು. ನಿವೃತ್ತ ಪ್ರಾಂಶುಪಾಲರಾದ ಡಾ. ಮ. ರಾಮಕೃಷ್ಣ ಪ್ರಶಸ್ತಿ ಪುರಸ್ಕೃತರ ಕುರಿತು, ಡಾ. ಎಸ್. ಬಿ. ಶಂಕರಗೌಡ ಎಂ. ಶ್ರೀನಿವಾಸ್ 75- ನುಡಿ ಹಾರೈಕೆ ಅರ್ಪಿಸಲಿದ್ದಾರೆ. ಪ್ರಶಸ್ತಿ ಪುರಸ್ಕೃತ ರಿಗೆ ತಲಾ 25 ಸಾವಿರ ರೂ. ನಗದು ನೀಡಲಾಗುವುದು ಎಂದು ವಿವರಿಸಿದರು.

ಗೋಷ್ಠಿಯಲ್ಲಿ ಕರ್ನಾಟಕ ಸಂಘದ ಅಧ್ಯಕ್ಷ ಡಾ. ಜಯಪ್ರಕಾಶ್‌ಗೌಡ, ಪ್ರತಿಷ್ಠಾನದ ಕಾರ್ಯದರ್ಶಿ ಹಾಗೂ ಕರ್ನಾಟಕ ಸಂಘದ ನಿರ್ದೇಶಕ ಎಚ್. ಎನ್. ನಾಗಪ್ಪ, ಟ್ರಸ್ಟಿಗಳಾದ ಮಂಜುಳ ಉದಯಶಂಕರ್, ಸಿ. ಎಚ್. ಶಿವರುದ್ರಪ್ಪ, ಕೋಶಾಧ್ಯಕ್ಷ ಎಚ್. ಎನ್. ರಾಮಚಂದ್ರ, ಉಪಾಧ್ಯಕ್ಷ ತಗ್ಗಹಳ್ಳಿ ವೆಂಕಟೇಶ್, ಕರ್ನಾಟಕ ಸಂಘದ ಕಾರ್ಯದರ್ಶಿ ಲೋಕೇಶ್ ಚಂದಗಾಲು, ಮಾರ್ಗದರ್ಶಕ ಡಾ. ಎಸ್. ಬಿ. ಶಂಕರಗೌಡ ಇದ್ದರು.
ಪಾಲನೆ.ಇನ್ ವಾಟ್ಸ್ ಆಪ್ ಗುಂಪಿಗೆ ಸೇರಿರಿ.


