NEWS

5.50 ಕೋಟಿ ರೂ. ವೆಚ್ಚದಲ್ಲಿ ಶ್ರೀಪುರುಷ ಕನ್ನಡ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ

ಪಾಲನೆ ನ್ಯೂಸ್

‌ಮಂಡ್ಯ: 5.50 ಕೋಟಿ ರೂ. ವೆಚ್ಚದಲ್ಲಿ ನಗರದ ಸರ್ ಎಂ. ವಿಶ್ವೇಶ್ವರಯ್ಯ ಒಳಾಂಗಣ ಕ್ರೀಡಾಂಗಣದ ಆವರಣದಲ್ಲಿ ‘ಶ್ರೀಪುರುಷ  ಕನ್ನಡ ಭವನ’ ನಿರ್ಮಾಣಕ್ಕೆ ಆದಿಚುಂಚನಗಿರಿ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ದಿವ್ಯ ಸಾನ್ನಿಧ್ಯದಲ್ಲಿ ಕೃಷಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರು ಶಂಕುಸ್ಥಾಪನೆ ನೆರವೇರಿಸಿದರು‌.

ಕನ್ನಡದ ಐಕ್ಯತೆಯ ಧ್ಯೋತಕವಾಗಿ ನಮ್ಮ ಸಾಹಿತ್ಯ, ಸಂಸ್ಕೃತಿ, ಪರಂಪರೆಯನ್ನು ಬಿಂಬಿಸುವ ಹಾಗೂ ನಾಡು-ನುಡಿಯ ಬಗೆಗಿನ ಅಭಿಮಾನವನ್ನು ಜನ ಮನದಲ್ಲಿ ಮೂಡಿಸುವ ನಿಟ್ಟಿನಲ್ಲಿ ಸರ್ವೆ ನಂ 2 ರಲ್ಲಿ 0.13ಗುಂಟೆ ಸರ್ಕಾರಿ ಜಮೀನನ್ನು ಕನ್ನಡ ಭವನ ನಿರ್ಮಿಸುವ ಉದ್ದೇಶಕ್ಕಾಗಿ ಜಾಗವನ್ನು ಗುರುತಿಸಲಾಗಿದೆ.

ಈ ಸಂದರ್ಭದಲ್ಲಿ ಮಂಡ ವಿಧಾನಸಭಾ ಕ್ಷೇತ್ರದ ಶಾಸಕರಾದ ರವಿಕುಮಾರ್, ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ದರ್ಶನ್ ಪುಟ್ಟಣ್ಣಯ್ಯ, ಮುಡಾ ಅಧ್ಯಕ್ಷರಾದ ಬಿ.ಪಿ.ಪ್ರಕಾಶ್, ಜಿಲ್ಲಾಧಿಕಾರಿ ಡಾ. ಕುಮಾರ, ಜಿಪಂ ಸಿಇಒ ಕೆ. ಆರ್. ನಂದಿನಿ, ಪೊಲೀಸ್ ವರಿಷ್ಠಾಧಿಕಾರಿ ಡಾ. ವಿ.ಜೆ.ಶೋಭಾರಾಣಿ ಹಾಗೂ ಇತರೆ ಗಣ್ಯರು ಉಪಸ್ಥಿತರಿದ್ದರು.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

32 ಕಿಲೋಮೀಟರ್ ಶ್ರೀಲಂಕಾದಿಂದ ಭಾರತಕ್ಕೆ ಈಜುವ ಮೂಲಕ ಐಟಿ ವೃತ್ತಿಪರ ದಂಪತಿ ಇತಿಹಾಸ

ಅಂಕೇಗೌಡರ ‘ಪುಸ್ತಕ ಮನೆ’ಗೆ ಸರ್ಕಾರದ ಆಸರೆ: ಶಾಸಕ ಗೂಳಿಗೌಡ ಮನವಿಗೆ ಸಚಿವ ತಂಗಡಗಿ ಸ್ಪಂದನೆ

ಕುವೆಂಪು ವಿಶ್ವಮಾನವ ಧರ್ಮಕ್ಕೆ ಚಾಲನೆ

Leave a Comment