NEWS

ಗ್ರಾಮೀಣ ಸಮುದಾಯದವರಿಗೆ ವರವಾದ ಶಿಕ್ಷಣ

ಉಮ್ಮಡಹಳ್ಳಿ ಯಲ್ಲಿ ಶಿಕ್ಷಣ ಪೌಂಡೇಶನ್, ಗ್ರಾಮೀಣ ಅಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯಿಂದ ತರಬೇತಿ

ಪಾಲನೆ ನ್ಯೂಸ್

ಮಂಡ್ಯ: ಉಮ್ಮಡಹಳ್ಳಿ ಗ್ರಾಮದಲ್ಲಿ ಶಿಕ್ಷಣ ಪೌಂಡೇಶನ್ ಸಂಸ್ಥೆ ಹಾಗೂ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಉಚಿತವಾಗಿ ಕಂಪ್ಯೂಟರ್ ತರಬೇತಿಯನ್ನು ಮಾಡುತ್ತಿದ್ದು 350ಕ್ಕೂ ಹೆಚ್ಚು ಮಂದಿ ತರಬೇತಿ ಪಡೆದುಕೊಳ್ಳಲು ನೊಂದಾಣಿ ಆಗಿರುತ್ತಾರೆ.

ಇತ್ತೀಚಿನ ದಿನಗಳಲ್ಲಿ ಕಂಪ್ಯೂಟರ್ ಜ್ಞಾನ ಇದ್ದರೆ ಮಾತ್ರ ಉದ್ಯೋಗ ಪಡೆಯಲು ಸಾಧ್ಯ ಎನ್ನುವಂತಾಗಿದ್ದು, ಗ್ರಾಮೀಣ ಪ್ರದೇಶದ ಯುವಕರಿಗೆ ವಿದ್ಯಾರ್ಥಿಗಳಿಗೆ ಸಮುದಾಯದವರಿಗೆ ಸ್ವಸಹಾಯ ಸಂಘದ ಮಹಿಳೆಯರಿಗೆ ಎಲ್ಲರಿಗೂ ಅನುಕೂಲವಾಗುವಂತೆ ಶಿಕ್ಷಣ ಪೌಂಡೇಶನ್ ಸಂಸ್ಥೆಯಿಂದ ಹಾಗೂ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ಮುಂದಾಗಿದೆ.

ಮಂಡ್ಯ ತಾಲೂಕಿನ ಉಮ್ಮಡಹಳ್ಳಿ ಗ್ರಾಮ ಪಂಚಾಯಿತಿಯ ಕಟ್ಟಡದಲ್ಲಿ ಶಿಕ್ಷಣ ಪೌಂಡೇಶನ್ M.D.I.C ಕೇಂದ್ರವನ್ನು 4 ತಿಂಗಳ ಹಿಂದೆ ಆರಂಭ ಮಾಡಿದ್ದಾರೆ.

ಹತ್ತು ಹೊಸ ಕಂಪ್ಯೂಟರ್ಗಳು, 20 ಚೇರ್, 55 ಇಂಚ್ ಟಿವಿ, ಒಂದು ಪ್ರಿಂಟರ್ ನೀಡಿದ್ದು, ಒಬ್ಬರು ನುರಿತ ಸಾಫ್ಟ್ವೇರ್  ಟ್ರೈನರ್ ರನ್ನು ನೇಮಿಸಿದ್ದಾರೆ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಪಡೆಯುತ್ತಿದ್ದು 9 ಬ್ಯಾಚ್ ಗಳ ವಿದ್ಯಾರ್ಥಿಗಳು ತರಬೇತಿಯನ್ನು ಪಡೆದುಕೊಂಡಿದ್ದಾರೆ.

ಹಾಗೂ ಇದೇ ನಿಟ್ಟಿನಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ AI ತರಬೇತಿಯನ್ನು ಕೂಡ ನೀಡಲಾಗುತ್ತಿದೆ ಸ್ವಸಹಾಯ ಸಂಘ ಸಂಘದ ಮಹಿಳೆಯರು ಅಂಗನವಾಡಿ ಕಾರ್ಯಕರ್ತೆಯರು ಡಿಜಿಟಲ್ ಶಿಕ್ಷಣ ಹಾಗೂ ಬೇಸಿಕ್ ಕಂಪ್ಯೂಟರ್ ತರಬೇತಿಯನ್ನು ಪಡೆಯುತ್ತಿದ್ದಾರೆ.

ಮಂಡ್ಯ ತಾಲೂಕಿನ ಎಲ್ಲಾ ಗ್ರಂಥಾಲಯ ಮೇಲ್ವಿಚಾರಕರು ಕೂಡ ಬೇಸಿಕ್ ಕಂಪ್ಯೂಟರ್ ತರಬೇತಿಯನ್ನು ಪಡೆದುಕೊಂಡು ತಮ್ಮ ತಮ್ಮ ಅರಿವು ಕೇಂದ್ರಗಳಲ್ಲಿ ಮಕ್ಕಳಿಗೆ ಹಾಗೂ ಸಮುದಾಯದವರಿಗೆ ಬೇಸಿಕ್ ಕಂಪ್ಯೂಟರ್ ಶಿಕ್ಷಣವನ್ನು ನೀಡಲಿದ್ದಾರೆ.

ಪಾಲನೆ.ಇನ್‌ ವಾಟ್ಸ್‌ ಆಪ್‌ ಗುಂಪಿಗೆ ಸೇರಿರಿ.

Related posts

ಹೊರಗೆ ಎರಡು ರೈಲುಗಳ ನಡುವೆ ಭೀಕರ ಅಪಘಾತದಲ್ಲಿ 14 ಮಹಿಳೆಯರ ಸಾವು

ಓದುಗರ ಬೇಡಿಕೆ ಮೇಲೆ ಹಾಗೂ ಓದುಗರ ಆಸಕ್ತಿ ಮೇರೆಗೆ ಪುಸ್ತಕ ಖರೀದಿ ಮಾಡಲು ಅಗತ್ಯ ಕ್ರಮವಹಿಸಿ – ಡಾ ಕುಮಾರ

37ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಜಾಗೃತಿ ಮಾಸಾಚರಣೆ: 2026

Leave a Comment