NEWS

ಜಿಲ್ಲಾಧಿಕಾರಿಗಳು ಕೆ.ಆರ್. ಪೇಟೆ ಇಂದಿರಾ ಕ್ಯಾಂಟೀನ್ ಅನಿರೀಕ್ಷಿತ ಪರಿಶೀಲನೆ

ಪಾಲನೆ ನ್ಯೂಸ್

ಮಂಡ್ಯ: ಕ್ಯಾಂಟೀನ್‌ನ ಸ್ವಚ್ಛತೆ, ಆರೋಗ್ಯ ಹಾಗೂ ಆಹಾರ ಸುರಕ್ಷತಾ ಮಾನದಂಡಗಳ ಅನುಷ್ಠಾನವನ್ನು ಪರಿಶೀಲಿಸಿದರು.

ಸಾರ್ವಜನಿಕರಿಗೆ ವಿತರಿಸಲಾಗುತ್ತಿರುವ ಆಹಾರದ ಗುಣಮಟ್ಟ, ಪ್ರಮಾಣ ಹಾಗೂ ವಿತರಣೆ ವ್ಯವಸ್ಥೆ ಕುರಿತು ಪರಿಶೀಲನೆ ನಡೆಸಿದರು.

ಆಹಾರ ತಯಾರಿಕೆ ಮತ್ತು ವಿತರಣೆಯಲ್ಲಿ ಸರ್ಕಾರದ ನಿಗದಿತ ಮಾರ್ಗಸೂಚಿಗಳ ಕಟ್ಟುನಿಟ್ಟಿನ ಪಾಲನೆ ಕುರಿತು ಪರಿಶೀಲಿಸಿದರು.

ಕ್ಯಾಂಟೀನ್ ಸಿಬ್ಬಂದಿಗಳ ಹಾಜರಾತಿ, ಕರ್ತವ್ಯ ನಿರ್ವಹಣೆ ಹಾಗೂ ಶಿಸ್ತು ಪಾಲನೆ ಕುರಿತು ಮಾಹಿತಿ ಪಡೆದರು.

ಕ್ಯಾಂಟೀನ್‌ಗೆ ಆಗಮಿಸಿದ ಸಾರ್ವಜನಿಕರೊಂದಿಗೆ ಸಂವಾದ ನಡೆಸಿ, ಸೇವೆಯ ಗುಣಮಟ್ಟದ ಕುರಿತು ಅಭಿಪ್ರಾಯಗಳನ್ನು ಸ್ವೀಕರಿಸಿದರು.

ಪರಿಶೀಲನೆಯ ನಂತರ, ಆಹಾರದ ಗುಣಮಟ್ಟ ಮತ್ತು ಸ್ವಚ್ಛತೆಯನ್ನು ನಿರಂತರವಾಗಿ ಕಾಪಾಡುವುದು, ಸಾರ್ವಜನಿಕರಿಗೆ ಸಕಾಲಿಕ ಹಾಗೂ ಸಮರ್ಪಕ ಆಹಾರ ಒದಗಿಸುವುದು ಮತ್ತು ಸರ್ಕಾರದ ಮಾರ್ಗ ಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಂಬಂಧಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಮಾನ್ಯ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.

ಪಾಲನೆ.ಇನ್‌ ವಾಟ್ಸ್‌ ಆಪ್‌ ಗುಂಪಿಗೆ ಸೇರಿರಿ.

Related posts

ವಿಧಾನ ಸೌಧದ ಮರ ಕತ್ತರಿಸಿದ ರೈತ! ತನ್ನ ಮರ ಕಡಿದಿದ್ದಕ್ಕೆ ಶ್ರೀಗಂಧ ರೆಂಬೆ ಕಟ್

ಸಮಗ್ರ ನಾಗರಿಕ ಸೇವಾ ಕೇಂದ್ರಗಳ ಮೂಲಕ ಇ-ಸ್ವತ್ತು ಅರ್ಜಿ

ಪುನೀತ್‌ರಾಜ್‌ಕುಮಾರ್‌ರವರ ಹುಟ್ಟು ಹಬ್ಬದ ಅಂಗವಾಗಿ ರಕ್ತದಾನ ಶಿಬಿರ

Leave a Comment