ಪಾಲನೆ ನ್ಯೂಸ್

ಬೆಂಗಳೂರು: ಕೆ.ಆರ್. ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಹೈಕೋರ್ಟ್ ಬಿಗ್ ಶಾಕ್ ಕೊಟ್ಟಿದೆ. ಪ್ರಕರಣ ರದ್ದು ಕೋರಿದ್ದ ಎಚ್.ಡಿ. ರೇವಣ್ಣ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಸುನಿಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ. ಎಚ್.ಡಿ. ರೇವಣ್ಣ ಪರ ವಕೀಲರು ವಾದ ಮಂಡನೆಗೆ ಕಾಲಾವಕಾಶ ಕೋರಿದ್ದರು. ಹಿರಿಯ ವಕೀಲರು ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿದ್ದಾರೆಂಬ ಕಾರಣ ನೀಡಿ ಮನವಿ ಮಾಡಿದ್ದರು. ಎಚ್.ಡಿ. ರೇವಣ್ಣ ಪರ ವಕೀಲರ ಮನವಿಗೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತು. ಎಚ್.ಡಿ. ರೇವಣ್ಣ ವಿರುದ್ಧ ದೋಷಾರೋಪ ಹೊರಿಸದಂತೆ ನೀಡಿದ್ದ ಮಧ್ಯಂತರ ತಡೆಯಾಗ್ಞೆಯನು ಕೋರ್ಟ್ ತೆರವು ಮಾಡಿದೆ.
✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn
