ಪಾಲನೆ ನ್ಯೂಸ್
ಮೈಸೂರು: ಮಹಾನಗರ ಪಾಲಿಕೆ ಕಿರಿಯ ಎಂಜಿನಿಯರ್ ಕೆ.ಆರ್. ಚಂದ್ರಶೇಖರ್ ಹಾಗೂ ಸೆಸ್ಕ್ ಎಲೆಕ್ಟಿಕಲ್ ಇನ್‌ಸ್ಪೆಕ್ಟರ್ ಅಲ್ತಾಫ್ ಹುಸೇನ್ ಜಕಾರ್ತಿ ಅವರು ಗುರುವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಇಬ್ಬರೂ ಅಧಿಕಾರಿಗಳ ವಿರುದ್ದ ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಹಾಗೂ ಸಿಬ್ಬಂದಿ ಬುಧವಾರ ಚಂದ್ರಶೇಖರ್ ಹಾಗೂ ಜಕಾರ್ತಿ ಅವರ ಕಚೇರಿ, ಮನೆ ಸೇರಿದಂತೆ 7 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಲಾಯಿತು.

ಮೈಸೂರು ಮಹಾನಗರ ಪಾಲಿಕೆ ಹಾಗೂ ತಿ. ನರಸೀಪುರ ಪುರಸಭೆಯಲ್ಲಿ ಕಿರಿಯ ಎಂಜಿನಿಯರ್ ಆಗಿರುವ ಕೆ.ಆರ್. ಚಂದ್ರಶೇಖರ್ ಅವರಿಗೆ ಸಂಬಂಧಪಟ್ಟ ಮೈಸೂರಿನ ವಿಜಯನಗರದ ಮನೆ, ಕೆ.ಜಿ. ಕೊಪ್ಪಲು ಮನೆ, ತಿ. ನರಸೀಪುರ ಕಚೇರಿ ಸೇರಿದಂತೆ 4 ಕಡೆಗಳಲ್ಲಿ ಲೋಕಾಯುಕ್ತ ಪೊಲೀಸರು ಶೋಧ ನಡೆಸಿದರು. ಈ ವೇಳೆ ಅಪಾರ ಪ್ರಮಾಣದ ಆಸ್ತಿ, ಚಿನ್ನಾಭರಣ ಹಾಗೂ 60 ಲಕ್ಷ ರೂ. ನಗದು ಪತ್ತೆಯಾಗಿದೆ.
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಎಲೆಕ್ನಿಕಲ್ ಇನ್ಸ್‌ಪೆಕ್ಟರ್ ಅಲ್ತಾಫ್ ಹುಸೇನ್ ಜಕಾರ್ತಿ ಅವರಿಗೆ ಸಂಬಂಧಪಟ್ಟ ಎರಡು ಮನೆ ಹಾಗೂ ಕಚೇರಿಗಳಲ್ಲಿ ಶೋಧ ನಡೆಸಿದ್ದು, ಆಸ್ತಿ ಹಾಗೂ ಚಿನ್ನಾಭರಣಗಳ ಮಾಹಿತಿ ಸಂಗ್ರಹಿಸಲಾಗಿದೆ.
✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn
