NEWS

೧೭ರಂದು ಕೌಶಲ್ಯಾಧಾರಿತ ಉದ್ಯಮಶೀಲತಾಅಭಿವೃದ್ಧಿ ತರಬೇತಿ ಕಾರ್ಯಕ್ರಮ

ಪಾಲನೆ ನ್ಯೂಸ್


ರಾಮನಗರ : ಕೌಶಲ್ಯಾಭಿವೃದ್ಧಿ ಉದ್ಯಮಶೀತೆ ಮತ್ತು ಜೀವನೋಪಾಯ ಇಲಾಖೆಯ ಪ್ರಾಯೋಜಕತ್ವದಲ್ಲಿ ಬೆಂಗಳೂರು ದಕ್ಷಿಣ (ರಾಮನಗರ) ಜಿಲ್ಲಾ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್) ವತಿಯಿಂದ ಸ್ವಂತ ಉದ್ಯೋಗ ಸ್ಥಾಪಿಸಲು ಇಚ್ಚಿಸುವವರಿಗಾಗಿ ೪-ವಾರಗಳ (ಬ್ಯೂಟಿಷಿಯನ್) ಕೌಶಲ್ಯಾಧಾರಿತ ಉದ್ಯಮಶೀಲತಾ ಅಭಿವೃದ್ಧಿ ತರಬೇತಿಯನ್ನು ಇದೇ ಫೆ.೧೭ ರಂದು ಆಯೋಜಿಸಲಾಗಿದ್ದು, ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.


ಬ್ಯೂಟಿಷಿಯನ್ ಉದ್ಯಮ ಸ್ಥಾಪಿಸಲು ಅನುಸರಿಸುವ ಕ್ರಮಗಳು, ತರಬೇತಿ, ಸ್ವಂತ ಉದ್ಯಮ ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗ ಯೋಜನೆಗಳು, ಬ್ಯಾಂಕ್ ವ್ಯವಹಾರ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ ಹಾಗೂ ಉದ್ಯಮ ನಿರ್ವಹಣೆ, ಇತ್ಯಾದಿ ವಿಷಯಗಳ ಕುರಿತು ತರಬೇತಿ ನೀಡಲಾಗುವುದು.


ಫೆ. ೧೨ರೊಳಗೆ ಅರ್ಜಿ ಸಲ್ಲಿಸಬೇಕು. ೨೧ರಿಂದ ೩೫ ವರ್ಷದೊಳಗಿನ ಅಭ್ಯರ್ಥಿಗಳಾಗಿದ್ದು, ಎಸ್.ಎಸ್.ಎಲ್.ಸಿ. ಪಾಸಾಗಿರಬೇಕು. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದ ಮಹಿಳೆಯರಿಗೆ ಹಾಗೂ ಯುವನಿಧಿ ಮಹಿಳಾ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.


ಜಂಟಿ ನಿರ್ದೇಶಕರ ಕಚೇರಿ, ಕೊಠಡಿ ಸಂಖ್ಯೆ ನಂ. ೨೦೮, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಿಡಾಕ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ, ಕಂದಾಯ ಭವನ, ಬೆಂಗಳೂರು ದಕ್ಷಿಣ ಜಿಲ್ಲೆ, ರಾಮನಗರ-೫೬೨೧೫೯. ಈ ಕಚೇರಿಯಲ್ಲಿ ಅರ್ಜಿ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗೆ ೭೦೯೦೨೯೯೮೪೩, ೭೭೬೦೧೪೫೭೮೪ ಮೊಬೈಲ್ ನಂಬರನ್ನು ಸಂಪರ್ಕಿಸುವAತೆ ಬೆಂಗಳೂರು ದಕ್ಷಿಣ ಜಿಲ್ಲೆಯ ಸಿಡಾಕ್‌ನ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಶಂಕರಾಚಾರ್ಯರು ಜಗತ್ತಿಗೆ ಮಾನವಿಯತೆ ಸಂದೇಶ ಸಾರಿದ್ದಾರೆ : ಗಂಗಾಧರ ಸ್ವಾಮಿ

ಆಶಾ ಕಾರ್ಯಕರ್ತೆಯರಿಗೆ ಗೌರವಧನ ನೀಡಿ

ಬಾಲ್ಯ ವಿವಾಹವು ಒಂದು ಸಾಮಾಜಿಕ ಪಿಡುಗು: ಡಾ. ಕುಮಾರ

Leave a Comment