NEWS

ಪರಿಸರವನ್ನು ಸ್ವಚ್ಛತೆಯಿಂದ ನೋಡಿಕೊಳ್ಳುವುದು ಸಾಮಾಜಿಕ ಜವಾಬ್ದಾರಿ‌ – ಡಾ. ಕುಮಾರ

ಪಾಲನೆ ನ್ಯೂಸ್

ನಗರವನ್ನು ಪ್ಲಾಸ್ಟಿಕ್ ಮುಕ್ತ ನಗರಿ ಆಗುವಂತೆ ಕ್ರಮ ವಹಿಸಿ

    ಮಂಡ್ಯ: ಸ್ವಚ್ಛ ಸರ್ವೇಕ್ಷಣ ಅಭಿಯಾನ ಒಂದು ದಿನಕ್ಕೆ ಸೀಮಿತವಾಗದೆ ಪ್ರತಿನಿತ್ಯ ಪ್ರತಿಯೊಬ್ಬ ನಾಗರಿಕನು ಕೂಡ ಪರಿಸರವನ್ನು ಸ್ವಚ್ಛತೆಯಿಂದ ನೋಡಿಕೊಳ್ಳುವುದು ಸಾಮಾಜಿಕ ಜವಾಬ್ದಾರಿ ಎಂದು ಜಿಲ್ಲಾಧಿಕಾರಿಗಳಾದ ಡಾ. ಕುಮಾರ ರವರು ತಿಳಿಸಿದರು.

    ಶ್ರೀ ಶಿವಕುಮಾರ ಸ್ವಾಮೀಜಿಯವರ ಜ್ಞಾನ ಕೇಂದ್ರ ಶಾಲೆಯ ಪಾರ್ಕ್ ಮುಂಭಾಗ ನಗರ ಸಭೆ ವತಿಯಿಂದ ಸ್ವಚ್ಛ ಸರ್ವೇಕ್ಷಣ ಅಭಿಯಾನ ಕಾರ್ಯಕ್ರಮವನ್ನು ಆಯೋಜಿಸಿಲಾಗಿದೆ. ಸ್ವಚ್ಛ ಸರ್ವೇಕ್ಷಣ ಅಭಿಯಾನದ ಬಗ್ಗೆ ತರಬೇತಿಯನ್ನು ನೀಡಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವಂತಹ ಕಾರ್ಯಕ್ರಮಗಳನ್ನು ಮಾಡಲಾಗಿದೆ ಎಂದು ಅವರು ತಿಳಿಸಿದರು.

    ಸ್ವಚ್ಛತೆಯ ಬಗ್ಗೆ ಎಲ್ಲಾ ಅಧಿಕಾರಿಗಳು ಸಕ್ರಿಯವಾಗಿ ಸ್ವಚ್ಛತೆಯ ಅರಿವು ಮೂಡಿಸುವ ಸಲುವಾಗಿ ಚಿತ್ರಗಳನ್ನು ಬರೆದು ಅರಿವು ಮೂಡಿಸಿದ್ದಾರೆ.
    ಮನಸ್ಸು ಶುದ್ಧವಾಗಿದ್ದರೆ ಮಾತ್ರ ಸಮಾಜವನ್ನು ಶುದ್ಧವಾಗಿಸಲು ಸಾಧ್ಯ. ಕಸವನ್ನು ರಸ್ತೆಯ ಬದಿ ಹಾಕಬಾರದು ಮನೆಗಳಲ್ಲಿ ಹಸಿ ಕಸ ಒಣ ಕಸವನ್ನು ವಿಂಗಡಿಸಬೇಕು ಮತ್ತು ಬಹಳ ಮುಖ್ಯವಾಗಿ ಪ್ಲಾಸ್ಟಿಕ್ ಅನ್ನು ಬಳಸಬಾರದು ಮನೆಯ ಮುಂಭಾಗದಲ್ಲಿ ಗಿಡಮರಗಳನ್ನು ಬಳಸಬೇಕು ಎಂದು ಹೇಳಿದರು.

    ಕಾರ್ಯಕ್ರಮದಲ್ಲಿ ನಗರಸಭೆ ಪೌರಾಯುಕ್ತರು ಪಂಪಶ್ರೀ, ನಗರಾಭಿವೃದ್ಥಿ ಕೋಶದ ಯೋಜನಾಧಿಕಾರಿ ನರಸಿಂಹಮೂರ್ತಿ ಹಾಗೂ ಗಣ್ಯರು ಉಪಸ್ಥಿತರಿದ್ದರು.

    ✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
    https://chat.whatsapp.com/H1gUYgrzvnQGZAhIQSGMHn

    Related posts

    ಮಳವಳ್ಳಿ ಬಸ್ ನಿಲ್ದಾಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಿಶೇಷ ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ

    ಡಾ. ಬಾಬು ಜಗಜೀವನ್ ರಾಂ ರವರ ಆದರ್ಶ ಹಾಗೂ ಚಿಂತನೆಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು

    ಯುವಜನತೆಯು ಜ್ಞಾನ ಕೌಶಲ್ಯಗಳನ್ನು ಬೆಳೆಸಿಕೊಳ್ಳಿ ಮತ್ತು ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಿ – ಎನ್.ಚಲುವರಾಯಸ್ವಾಮಿ

    Leave a Comment