NEWS

2028ರಲ್ಲಿ ಮತ್ತೆ ಎಚ್‌ಡಿಕೆ‌ ಮುಖ್ಯಮಂತ್ರಿ ಆಗುತ್ತಾರೆ : ಜಿ.ಡಿ.ಹರೀಶ್‌ ಗೌಡ

ಪಾಲನೆ ನ್ಯೂಸ್

ಹುಣಸೂರು: 2028ರಲ್ಲಿ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ಮತ್ತೆ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಯಾಗಲಿದ್ದಾರೆ. ಅದೇ ರೀತಿ ಭವಿಷ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವುದು ಪಕ್ಕಾ ಎಂದು ಶಾಸಕ ಜಿ.ಡಿ.ಹರೀಶ್‌ ಗೌಡ ಹೇಳಿದರು.

ಹಿರಿಕ್ಯಾತನಹಳ್ಳಿಯಲ್ಲಿ ನಡೆದ ಶ್ರೀ ಮಲೆ ಮಹದೇಶ್ವರ ದೇವಾಲಯ ಉದ್ಘಾಟನಾ ಸಮಾ ರಂಭದಲ್ಲಿ ಮಾತನಾಡಿದ ಅವರು, ಜಾ.ದಳದ ಸಂಘಟನೆಗಾಗಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿ ರುವ ನಿಖಿಲ್ ಕುಮಾರಸ್ವಾಮಿ ಮುಂದೆ ಮುಖ್ಯ ಮಂತ್ರಿ ಆಗಲಿದ್ದಾರೆಎಂದುವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಕನಿಷ್ಠ ರಸ್ತೆ ಗುಂಡಿ ಮುಚ್ಚಲೂ ಆಗದ ಸ್ಥಿತಿ ನಿರ್ಮಾಣವಾಗಿದೆ. ದೇವರಾಜ ಅರಸು ಅವರು ಶಾಸಕರಾಗಿದ್ದ ಕ್ಷೇತ್ರದಲ್ಲಿ ಶಾಸಕನಾಗಿ ಆಯ್ಕೆಯಾಗಿರುವುದು ನನ್ನ ಅದೃಷ್ಟ, ತಂಬಾಕು ಬೆಳೆಗಾರರ ಸಮಸ್ಯೆ ಪರಿಹಾರದ ಬಗ್ಗೆ ಮತ್ತೊಮ್ಮೆ ದಿಲ್ಲಿಗೆ ನಿಯೋಗ ಕೊಂಡೊಯ್ಯಲಾಗುವುದು ಎಂದರು.

ಹುಣಸೂರಿನಲ್ಲಿ ಫೆ. 17ರಂದು ಜನರೊಂದಿಗೆ ಜನತಾದಳ ಕಾರ್ಯಕ್ರಮ ಆಯೋಜಿಸಿದ್ದು, ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು. ಮುಂದೆ ಜಿ.ಪಂ., ತಾ.ಪಂ., ಗ್ರಾ.ಪಂ. ಚುನಾವಣೆಗಳು ಬರುತ್ತಿದ್ದು, ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರಿಗೆ ಅವಕಾಶ ಕಲ್ಪಿಸಲಾಗುವುದು ಎಂದರು.‌

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಪಾಂಡವಪುರ ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿಗಳ ಅನಿರೀಕ್ಷಿತ ಭೇಟಿ

ಧೋನಿ ಅಸಮಾಧಾನ

ರೈಲುಹಳಿ ಮೇಲೆ ಕೆಟ್ಟು ನಿಂತ ಬಿಎಂಟಿಸಿ

Leave a Comment