NEWS

ಸೇನಾ ಪರೀಕ್ಷೆ ವೇಳೆ ಅಕ್ರಮ ನಡೆಸಿರುವ 18 ಮಂದಿ ವಿರುದ್ದ ದೂರು

ಪಾಲನೆ ನ್ಯೂಸ್

ಬೆಂಗಳೂರು: ಸೇನಾ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಆರೋಪದ ಮೇಲೆ ಹರಿಯಾಣದ 18 ಮಂದಿ ವಿರುದ್ದ ಹಲಸೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರ್ಮಿ ಸರ್ವಿಸ್ ಕಾರ್ಪ್‌ಸ್ ಕೇಂದ್ರದಲ್ಲಿ ಭಾನುವಾರ ನಡೆದ ಸಿ ಗ್ರೂಪ್ ಪರೀಕ್ಷೆಯಲ್ಲಿ ಅಕ್ರಮ ಎಸಗಲಾಗಿದೆ ಎಂದು ಕರ್ನಲ್‌ವೊಬ್ಬರು ನೀಡಿದ ದೂರಿನನ್ವಯ 18 ಮಂದಿ ಪುರುಷರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿತರು ಪರೀಕ್ಷೆಯ ವೇಳೆ ಮೊಬೈಲ್ ಫೋನ್ ಮತ್ತು ಎಲೆಕ್ಟ್ರಾನಿಕ್ ಸಾಧನಗಳನ್ನು ಬಳಸುತ್ತಿದ್ದ ವೇಳೆ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದಿದ್ದಾರೆ. ಆರೋಪಿತರಿಂದ 3 ಮೊಬೈಲ್, ಏರ್‌ಪಾಡ್ ಸೇರಿ 12 ಎಲೆಕ್ಟ್ರಾನಿಕ್ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ‌ ನೀಡಿದ್ದಾರೆ.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಎಲ್‌ಪಿಜಿ ಕೊರತೆ ಬಗ್ಗೆ ಜನರು ಗಾಬರಿಪಡುವ ಅಗತ್ಯವಿಲ್ಲ

ಗೃಹಲಕ್ಷ್ಮಿ ಯೋಜನೆಯಡಿ ಜಿಲ್ಲೆಯ ಮಹಿಳೆಯರಿಗೆ ರೂ.2123 ಕೋಟಿ ಅನುದಾನ ಬಿಡುಗಡೆ : ಚಿಕ್ಕಲಿಂಗಯ್ಯ

ಸೈಬರ್ ಅಪಾಯಗಳನ್ನು ಎದುರಿಸಲು ಬ್ಯಾಂಕುಗಳು ಸನ್ನದ್ಧವಾಗಬೇಕು

Leave a Comment