ಪಾಲನೆ ನ್ಯೂಸ್
530 ಭೂಸ್ವಾಧೀನ ಕೇಸಲ್ಲಿ ಸರ್ಕಾರದ ಪರ ತೀರ್ಪು
ಬೆಂಗಳೂರು: ಭೂಸ್ವಾಧೀನ ಪ್ರಕರಣಗಳಲ್ಲಿ ಕರ್ನಾ ಟಕ ರಾಜ್ಯದ ಪರ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ಮೂ ಲಕ ರಾಜ್ಯ ಸರ್ಕಾರ ಸಲ್ಲಿಸಿದ್ದ ಕೃಷ್ಣಾ ಮೇಲ್ದಂಡೆ ಯೋಜನೆ, ಸಿಂಗಟಾ ಲೂರು ಏತ ನೀರಾವರಿ ಯೋಜನೆ, ರಾಜ್ಯ ಹೆದ್ದಾರಿ ಯೋಜನೆಗಳು ಸೇರಿ ಪ್ರಮುಖ ಅಭಿವೃದ್ಧಿ ಯೋಜನೆಗಳಿಗೆ ಸಂಬಂಧಿಸಿದ 530 ಭೂಸ್ವಾಧೀನ ಪ್ರಕರಣಗಳ ಮೇಲ್ಮನವಿಗಳನ್ನು ಎತ್ತಿ ಹಿಡಿದಿದೆ. ಈ ತೀರ್ಪು ರಾಜ್ಯದ ಆರ್ಥಿಕ ಸ್ಥಿತಿಗತಿಗಳ ಮೇಲೆವ್ಯಾಪಕ ಪರಿಣಾಮ ಬೀರುವಂತದ್ದಾಗಿದ್ದು, ಕರ್ನಾಟಕ ಸರ್ಕಾರದ ಯಶಸ್ವಿ ಕಾನೂನು

ಸವಾಲಿನ ಫಲವಾಗಿ ಪಣದಲ್ಲಿದ್ದ ಹತ್ತು ಸಾವಿರ ಕೋಟಿ ರು. ಹಣ ಉಳಿಸಲು ಅತ್ಯಮೂಲ್ಯವಾದ ಅವಕಾಶ ನೀಡಿದೆ ಎಂದು ಕಂದಾಯ ಇಲಾಖೆ ತಿಳಿಸಿದೆ. ರಾಜ್ಯ ಸರ್ಕಾರ ವಿವಿಧ ಭಾಗಗಳಲ್ಲಿ ಮೂಲಸೌಕರ್ಯಯೋಜನೆಗಳಿಗಾಗಿ ಭೂಸ್ವಾಧೀನ ಪಡಿಸಿಕೊಂಡಿತ್ತು. ಈ ವೇಳೆ ಭೂಸ್ವಾಧೀನ ಅಧಿಕಾರಿಗಳು ನೀಡಿದ ಪರಿಹಾರಕ್ಕಿಂತ ಹೆಚ್ಚಿನ ಪರಿಹಾರಕ್ಕಾಗಿ ಭೂ ಮಾಲೀಕರು ದಾವೆ ಸಲ್ಲಿಸಿದ್ದರು. ಹೆಚ್ಚಿನ ಪ್ರಕರಣ ಗಳಲ್ಲಿ ಕೋರ್‌ಗಳು ಸರಿಯಾದ ಮಾರುಕಟ್ಟೆ ಮೌಲ್ಯ ಅಥವಾ ಮಾರ್ಗಸೂಚಿ ಮೌಲ್ಯ ಪರಿಗಣಿ ಸದೆ ಅತಿಯಾದ ಮತ್ತು ಸಂಶಯಾಸ್ಪದ ಪರಿಹಾರ ವೃದ್ಧಿಯನ್ನು ಮಂಜೂರು ಮಾಡಿದ್ದವು.
✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn
