NEWS

ರಾಜ್ಯ ಕಂಡ ಧೀಮಂತ ನಾಯಕ ಕೆಂಗಲ್ ಹನುಮಂತಯ್ಯ : ಸಿಎಂ

ವಿಧಾನಸೌಧ ಬಳಿ ಕೆಂಗಲ್ ಪ್ರತಿಮೆಗೆ ಮುಖ್ಯಮಂತ್ರಿ ಮಾಲಾರ್ಪಣೆ

ಪಾಲನೆ ನ್ಯೂಸ್

ಬೆಂಗಳೂರು:‌ ಕೆಂಗಲ್ ಹನುಮಂತಯ್ಯ ಜನ್ಮದಿನದ ಪ್ರಯುಕ್ತ ವಿಧಾನಸೌಧದ ಪಶ್ಚಿಮ ದಿಕ್ಕಿನಲ್ಲಿರುವ ಕೆಂಗಲ್ ಹನುಮಂತಯ್ಯ ಅವರ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ ಮಾಡಿದರು.

ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರು ರಾಜ್ಯ ಕಂಡ ಪ್ರಾಮಾಣಿಕ ಮತ್ತು ಧೀಮಂತ ರಾಜಕಾರಣಿ. ಸುಂದರ ಮತ್ತು ಭವ್ಯವಾದ ವಿಧಾನಸೌಧ ನಿರ್ಮಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕೆಂಗಲ್ ಹನುಮಂತಯ್ಯ ಜನ್ಮದಿನದ ಅಂಗವಾಗಿ ವಿಧಾನ ಸೌಧದ ಪಶ್ಚಿಮ ದಿಕ್ಕಿನಲ್ಲಿರುವ ಕೆಂಗಲ್ ಹನುಮಂತಯ್ಯ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಸುದ್ದಿಗಾರ ರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಕೆಂಗಲ್ ಹನುಮಂತಯ್ಯ ಅವರು ಕರ್ನಾಟಕದ ಏಕೀಕರಣಕ್ಕಾಗಿ ಹೋರಾಡಿದ ನಾಯಕರು. ರೈಲ್ವೆ ಮಂತ್ರಿಯಾಗಿ, ಆಡಳಿತ

ಸುಧಾರಣಾ ಆಯೋಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಸಂವಿಧಾನ ರಚನಾ ಸಮಿತಿಗೆ ಅಮೂಲ್ಯ ಸಲಹೆಗಳನ್ನು ನೀಡಿ ರಾಷ್ಟ್ರ ನಿರ್ಮಾಣಕ್ಕೆ ತಮ್ಮದೇ ಕೊಡುಗೆ ನೀಡಿದ ಧೀಮಂತ ಮತ್ತು ಪ್ರಾಮಾಣಿಕ ರಾಜಕಾರಣಿ ಎಂದರು.

ಕರ್ನಾಟಕದ ಮೊದಲ ಚುನಾಯಿತ ಮುಖ್ಯಮಂತ್ರಿ ಯಾಗಿದ್ದ ಕೆಂಗಲ್ ಹನುಮಂತಯ್ಯ ಅವರು ವಿಧಾನಸೌಧಕ್ಕೆ ಬುನಾದಿ ಹಾಕಿದವರು. ಆದರೆ, ವಿಧಾನಸೌಧದ ಉದ್ಘಾಟನೆ ಸಂದರ್ಭದಲ್ಲಿ ಅವರು ಮುಖ್ಯಮಂತ್ರಿ ಆಗಿರಲಿಲ್ಲ ಎಂಬುದು ನೋವಿನ ಸಂಗತಿ. ಅವರ ಆದರ್ಶ ಮತ್ತು ಸಿದ್ದಾಂತಗಳು ಎಲ್ಲರಿಗೂ ಮಾರ್ಗದರ್ಶಕವಾಗಿದೆ ಎಂದು ಅಭಿಪ್ರಾಯ ಪಟ್ಟರು. ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ ಇದ್ದರು.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಮಂಡ್ಯದಲ್ಲಿ ಪ್ರತಿಭಾ ನಂದಕುಮಾರ್ ಕಾವ್ಯಾನುಸಂಧಾನ ಜನವರಿ 24ಕ್ಕೆ

‘ಬೆಂಗಳೂರು-ಮುಂಬೈ ಸೂಪರ್ ಫಾಸ್ಟ್ ರೈಲು’ ಜೂನ್ ಅಂತ್ಯದೊಳಗೆ ಸಂಚಾರ

ಅಂತರ ರಾಷ್ಟೀಯ ಮಹಿಳಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಸೂಚನೆ

Leave a Comment