ಪಾಲನೆ ನ್ಯೂಸ್
ಮಳವಳ್ಳಿ: ಜಾತ್ಯತೀತ ಜನತಾ ದಳದ ಮೇಲೆ ಜನರು ತೋರಿರುವ ಪ್ರೀತಿ-ವಾತ್ಸಲ್ಯಕ್ಕೆ ಬೆಲೆ ಕಟ್ಟಲಾಗದು ಎಂದು ಜಾ.ದಳ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರ ಸ್ವಾಮಿ ಅಭಿಪ್ರಾಯಪಟ್ಟರು.
ತಾಲ್ಲೂಕಿನ ಹುಲ್ಲೇಗಾಲ ಗ್ರಾಮದಲ್ಲಿ ಶ್ರೀ ಬಸವೇಶ್ವರ ಸ್ವಾಮಿ ದೇವಾಲಯದ ವಿಮಾನ ಗೋಪುರ ಮತ್ತು ಕಳಸ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಸೋಮವಾರ ರಾತ್ರಿ ಭಾಗವಹಿಸಿ ಬಸವೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿ, ಅಭಿಮಾನಿಗಳಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, 2018ರಲ್ಲಿ ಮಂಡ್ಯ ಜಿಲ್ಲೆಯಿಂದ ಏಳು ಜನ ಶಾಸಕರನ್ನು ಆಯ್ಕೆ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಲು ನೆರವಾಗಿದ್ದನ್ನು ಪಕ್ಷ ಸದಾ ಸ್ಮರಿಸುತ್ತದೆ ಎಂದರು.

ಮಾಡುವ ಮೂಲಕ ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಮತ್ತೆ ಮುಖ್ಯಮಂತ್ರಿ ಆಗಬೇಕೆಂದು ರಾಜ್ಯದ ಉದ್ದಗಲಕ್ಕೂ ಮತದಾರರು ಅಪೇಕ್ಷೆ ಹುಲ್ಲೇಗಾಲ ಗ್ರಾಮದಲ್ಲಿ ನಡೆದ ಶ್ರೀ ಬಸವೇಶ್ವರ ಸ್ವಾಮಿ ದೇವಾಲಯದ ವಿಮಾನ ಗೋಪುರ ಮತ್ತು ಕಳಸ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ನಿಖಿಲ್ ಕುಮಾರಸ್ವಾಮಿ ಮಾತನಾಡಿದರು.
ಮುಂದಿನ ವಿಧಾನಸಭಾ ಚುನಾವಣೆಯಲ್ಲಿಯೂ ಜಿಲ್ಲೆಯ ಏಳೂ ಕ್ಷೇತ್ರಗಳಲ್ಲಿಯೂ ಜಾ.ದಳ ಅಭ್ಯರ್ಥಿಗಳ ಗೆಲುವಿಗೆ ಕೆಲಸ ಮಾಡಬೇಕು. ಕುಮಾರ ಸ್ವಾಮಿ ಅವರು ಮುಖ್ಯಮಂತ್ರಿ ಆಗಿ ಮತ್ತಷ್ಟು ಜನಪರ ಕೆಲಸ ಮಾಡಲು ನೆರವಾಗಬೇಕು ಎಂದು ಮನವಿ ಮಾಡಿದರು.
ಅದ್ದೂರಿ ಮೆರವಣಿಗೆ:
ಗ್ರಾಮಕ್ಕೆ ಆಗಮಿಸಿದ ನಿಖಿಲ್ ಅವರನ್ನು ಗ್ರಾಮದ ಹೊರವಲಯದಿಂದ ಎತ್ತಿನಗಾಡಿ ಯಲ್ಲಿ ಮೆರವಣಿಗೆ ಮೂಲಕ ಕರೆತರಲಾ ಯಿತು. ಈ ನಡುವೆ ಅಭಿಮಾನಿಗಳು ಮಾರ್ಗದ ಉದ್ದಕ್ಕೂ ಜೆಸಿಬಿ ಯಂತ್ರದ ಮೇಲೆ ನಿಂತು ಹೂ ಮಳೆ ಸುರಿಸಿದರು.
ಗ್ರಾಮದಲ್ಲಿ ಜನರು ತೋರಿದ ಪ್ರೀತಿ, ಅಭಿ ಮಾನ ಕಂಡು ನಿಖಿಲ್ ಕುಮಾರಸ್ವಾಮಿ ಸಂಭ್ರಮ ವ್ಯಕ್ತಪಡಿಸಿದರು.
ಸೆಲ್ಪಿಗೆ ಮುಗಿಬಿದ್ದ ಅಭಿಮಾನಿಗಳು:
ನಿಖಿಲ್ ಕುಮಾರಸ್ವಾಮಿ ಗ್ರಾಮಕ್ಕೆ ಆಗ ಮಿಸಿದ್ದರಿಂದ ಯುವಕರು ಸೆಲ್ಲಿ ತೆಗೆದು ಕೊಳ್ಳಲು ಮುಗಿಬಿದ್ದರು. ನೂಕು ನುಗ್ಗಲಿ ದ್ದರೂ ಮಹಿಳೆಯರು ಮತ್ತು ಮಕ್ಕಳು ನಿಖಿಲ್ ಜತೆಗೆ ಸೆಲ್ಪಿ ಕ್ಲಿಕ್ಕಿಸಿಕೊಳ್ಳುತ್ತಿದ್ದ ದೃಶ್ಯ ಕಂಡು ಬಂದಿತು.
ಮಾಜಿ ಶಾಸಕ ಕೆ.ಅನ್ನದಾನಿ, ಜಾ.ದಳ ಯುವ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವಿ ಕಂಸಾಗರ, ಗ್ರಾಮದ ಮುಖಂಡರು ಹಾಜರಿದ್ದರು.
✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn
