NEWS

ಪಾಂಡವಪುರ ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿಗಳ ಅನಿರೀಕ್ಷಿತ ಭೇಟಿ

ಪಾಲನೆ ನ್ಯೂಸ್

ಮಂಡ್ಯ: ಮಾನ್ಯ ಜಿಲ್ಲಾಧಿಕಾರಿಗಳು ಇಂದು ಪಾಂಡವಪುರ ತಾಲ್ಲೂಕು ಕಚೇರಿಗೆ ಅನಿರೀಕ್ಷಿತ ಭೇಟಿ ನೀಡಿ ಕಚೇರಿಯ ವಿವಿಧ ಶಾಖೆಗಳ ಕಾರ್ಯನಿರ್ವಹಣೆ, ಕಡತ ವಿಲೇವಾರಿ, ಸಿಬ್ಬಂದಿಗಳ ಹಾಜರಾತಿ ಹಾಗೂ ಸಾರ್ವಜನಿಕ ಸೇವೆಗಳ ಅನುಷ್ಠಾನವನ್ನು ಪರಿಶೀಲಿಸಿದರು.

ಇ-ಆಫೀಸ್‌ನಲ್ಲಿನ ಬಾಕಿ ಕಡತಗಳನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡುವಂತೆ ಹಾಗೂ ಆದಾಯ, ಜಾತಿ, ನಿವಾಸ, ವಂಶವೃಕ್ಷ, ಭೂಹಿಡುವಳಿ ಪ್ರಮಾಣಪತ್ರ ಸೇರಿದಂತೆ ಎಲ್ಲಾ ಸೇವೆಗಳನ್ನು ಸಕಾಲ ಯೋಜನೆಯಡಿ ನಿಗದಿತ ಅವಧಿಯಲ್ಲಿಯೇ ಒದಗಿಸುವಂತೆ ಕಟ್ಟುನಿಟ್ಟಾಗಿ ಸೂಚಿಸಿದರು. ವಿಳಂಬವಾದಲ್ಲಿ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

ನಂತರ ಉಪ ವಿಭಾಗಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ಸಭೆ ನಡೆಸಿ ಸಾರ್ವಜನಿಕ ಸೇವೆಗಳ ತ್ವರಿತ ವಿತರಣೆ ಹಾಗೂ ಸರ್ಕಾರದ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಕುರಿತು ಸೂಚನೆ ನೀಡಿದರು.

✅ ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿಗಳು ಹಾಗೂ ತಹಶೀಲ್ದಾರ್, ಪಾಂಡವಪುರ ಸೇರಿದಂತೆ ಕಚೇರಿ ಸಿಬ್ಬಂದಿಗಳು ಹಾಜರಿದ್ದರು.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ವ್ಯಾಲೆಂಟಿನಾ ಇವಾನೋವ್ ವಿರುದ್ಧ ಸುಲಭ ಜಯ‌ ಭಾರತಕ್ಕೆ ಮಣಿದ ಕಿವೀಸ್ ಬಿಜೆಕೆ ಕಪ್ ಟೆನಿಸ್

ಒಗ್ಗಟ್ಟಿನಿಂದ ಕೆಲಸ ಮಾಡಿದರೆ ನಾಡಿಗೆ ಹಿತ

ಮಹಿಳೆಯರ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಲು ವಿಶೇಷ ರಂಗೋಲಿ ಸ್ಪರ್ಧಾ

Leave a Comment