NEWS

ಪಂಜಿನ ಮೆರವಣಿಗೆ ಮಾಡಿದ ರೈತ ಸಂಘದವರು

ಪಾಲನೆ ನ್ಯೂಸ್

ಮದ್ದೂರು: ನಗರಸಭೆ ವ್ಯಾಪ್ತಿಯಿಂದ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ ಹಾಗೂ ಸೋಮನಹಳ್ಳಿ ಗ್ರಾಮ ಪಂಚಾಯಿತಿಗಳನ್ನು ಕೈ ಬಿಡುವಂತೆ ಒತ್ತಾಯಿಸಿ ಗ್ರಾಮಸ್ಥರು, ರೈತ ಸಂಘದ ಬೆಂಬಲದೊಂದಿಗೆ ಗುರುವಾರ ರಾತ್ರಿ ಪಂಜಿನ ಮೆರವಣಿಗೆ ನಡೆಸಿದರು.

ರೈತಪರ ಹೋರಾಟಗಾರ್ತಿ ಸುನಂದಾ ಜಯರಾಮ್‌ ನೇತೃತ್ವದಲ್ಲಿ ಶಿವಪುರದ ಧ್ವಜ ಸತ್ಯಾಗ್ರಹ ಸೌಧದ ಆವರಣದಿಂದ ಪ್ರಮುಖ ಬೀದಿಗಳಲ್ಲಿ ನಡೆದ ಮೆರವಣಿಗೆಯಲ್ಲಿ ಮಹಿಳೆ ಯರು ಒಳಗೊಂಡಂತೆ ನೂರಾರು ಗ್ರಾಮಸ್ಥರು ಪಾಲ್ಗೊಂಡಿದ್ದರು. ಕ್ಷೇತ್ರದ ಶಾಸಕ ಕೆ.ಎಂ. ಉದಯ್ ಹಾಗೂ ವಿಧಾನ ಪರಿಷತ್‌ ಸದಸ್ಯ ದಿನೇಶ್ ಗೂಳಿಗೌಡ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ಮದ್ದೂರು ನಗರಸಭೆ ವ್ಯಾಪ್ತಿಯಿಂದ ನಾಲ್ಕು ಗ್ರಾಮ ಪಂಚಾಯ್ತಿಗಳನ್ನು ಕೈಬಿಡಬೇಕು ಎಂದು ಆಗ್ರಹಪಡಿಸಿದರು.

ನಂತರ ಪ್ರವಾಸಿ ಮಂದಿ ರದ ಬಳಿ ಪ್ರತಿಭಟನಾಕಾರರ ಉದ್ದೇಶಿಸಿ ಮಾತನಾಡಿದ ಸುನಂದ ಜಯರಾಮ್, ಗೆಜ್ಜಲಗೆರೆ ಸೇರಿದಂತೆ ನಾಲ್ಕು ಗ್ರಾಮ ಪಂಚಾ ನಗರಸಭೆ ವ್ಯಾಪ್ತಿಯಿಂದ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ ಹಾಗೂ ಸೋಮನಹಳ್ಳಿ ಗ್ರಾಮ ಪಂಚಾಯಿತಿಗಳನ್ನು ಕೈ ಬಿಡುವಂತೆ ಒತ್ತಾಯಿಸಿ ಗ್ರಾಮಸ್ಥರು, ರೈತ ಸಂಘದ ಬೆಂಬಲದೊಂದಿಗೆ ಗುರುವಾರ ರಾತ್ರಿ ಪಂಜಿನ ಮೆರವಣಿಗೆ ನಡೆಸಿದರು.

ಯಿತಿಗಳನ್ನು ಮದ್ದೂರು ನಗರಸಭೆ ವ್ಯಾಪ್ತಿಗೆ ಸೇರ್ಪಡೆ ಮಾಡುವ ವಿಚಾರದಲ್ಲಿ ಶಾಸಕ ಉದಯ್ ಗ್ರಾಮಸ್ಥರ ಅಭಿಪ್ರಾಯ ಸಂಗ್ರಹಿ ಸದೆ ಏಕ ಪಕ್ಷೀಯ ನಿರ್ಧಾರ ಕೈಗೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮುಂದಿನ ದಿನಗಳಲ್ಲಿ ನಮ್ಮ ಭೂಮಿ ಮತ್ತು ನಮ್ಮ ಗ್ರಾಮವನ್ನು ಉಳಿಸಿಕೊಳ್ಳುವಲ್ಲಿ ಯಾವ ರೀತಿಯ ಹೋರಾಟಕ್ಕೂ ಸಿದ್ಧರಿದ್ದೇವೆ, ಶಾಸಕ ಉದಯ್ ಇದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಮೆರವಣಿಗೆಯಲ್ಲಿ ಗ್ರಾಪಂ ಮಾಜಿ ಅಧ್ಯಕ್ಷೆ ರಾಧ, ರೈತ ಮುಖಂಡರಾದ ಲಿಂಗಪ್ಪಾಜಿ, ಜಿ.ಎಚ್‌. ವೀರಪ್ಪ, ಜಿ.ಕೆ. ಗುರುಮೂರ್ತಿ, ಮೋಹನ್, 2. .ರಾಮಲಿಂಗಯ್ಯ ಮುಖಂಡರಾದ ಜಿ .ಟಿ. ಚಂದ್ರ ಶೇಖರ್‌ಸೇರಿ ಗ್ರಾಮದ ಮುಖಂಡರು ಪಾಲ್ಗೊಂಡಿದ್ದರು.‌

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಮಂಡ್ಯ ನಗರದ ವಾಹನದಟ್ಟಣೆ ಕುರಿತು ವರದಿ ಸಿದ್ಧಪಡಿಸಲು ಸೂಚನೆ: ಡಾ.ಕುಮಾರ

‘ಇ-ಟಿಂಗ್ ಮತ್ತು ಇ-ನೋಸ್’ ನಿಂದ ತಿರುಪತಿ ತುಪ್ಪದ ಗುಣಮಟ್ಟ ಪರೀಕ್ಷೆ

ಆಧಾ‌ರ್ ಬದಲು ಸ್ಮಾರ್ಟ್‌ ಕಾರ್ಡ್

Leave a Comment