NEWS

2027 ರ ಭಾರತದ ಮೊದಲ ಡಿಜಿಟಲ್ ಜನಗಣತಿ

ಮೊದಲ ಹಂತದ ಮನೆಗಳ ಪಟ್ಟಿ ಗಣತಿ ಏಪ್ರಿಲ್ 16, 2026 ರಿಂದ ಆರಂಭ ಜನಗಣತಿ ಕಾರ್ಯವನ್ನು ಅತ್ಯಂತ ಪರಿಣಾಮಕಾರಿಯಾಗಿ ಆಗಬೇಕು

ಪಾಲನೆ ನ್ಯೂಸ್

ಮಂಡ್ಯ: ಡಾ ಕುಮಾರ 2027 ರ ಜನಗಣತಿಯು ಎರಡು ಹಂತಗಳಲ್ಲಿ ನಡೆಯಲಿದ್ದು ಮೊದಲ ಹಂತದ ಮನೆಗಳ ಪಟ್ಟಿ (House-listing) ಏಪ್ರಿಲ್ 16 ರಿಂದ ಸೆಪ್ಟೆಂಬರ್ 15, 2026 ರವರೆಗೆ ಹಾಗೂ ಜನಸಂಖ್ಯೆ ಎಣಿಕೆ ಫೆಬ್ರವರಿ 2027 ರಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ ಕುಮಾರ ಅವರು ತಿಳಿಸಿದರು.

2027ರ ಜನಗಣತಿ ಸಿದ್ಧತೆಗಳ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕುರಿತು ಬಗ್ಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಮಾತನಾಡಿದರು.

ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳು ಮುಖ್ಯ ಜನಗಣತಿ ಅಧಿಕಾರಿಗಳಾಗಿ ಜವಾಬ್ದಾರಿ ವಹಿಸಲಿದ್ದಾರೆ. 2026ರ ಏಪ್ರಿಲ್‌ನಿಂದ ಸೆಪ್ಟೆಂಬರ್‌ವರೆಗೆ ನಡೆಯಲಿರುವ ಡಿಜಿಟಲ್ ಮನೆಗಳ ಪಟ್ಟಿ ಮತ್ತು ವಸತಿ ಗಣತಿಗಾಗಿ ಅಗತ್ಯ ಸಿಬ್ಬಂದಿ (ಶಿಕ್ಷಕರು, ನೌಕರರು) ನೇಮಕವಾಗಬೇಕು. ಈ ಸಂಬಂಧ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ಅವರು ತಿಳಿಸಿದರು.

ಜನವರಿ 15, 2026 ರೊಳಗೆ ಗಣತಿದಾರರು ಮತ್ತು ಮೇಲ್ವಿಚಾರಕರ ನೇಮಕಾತಿಯನ್ನು ಸಿಎಂಎಂಎಸ್ (CMMS) ಪೋರ್ಟಲ್‌ನಲ್ಲಿ ಪೂರ್ಣಗೊಳಿಸಬೇಕು ಎಂದು ಅವರು ತಿಳಿಸಿದರು. ಜಿಪಿಎಸ್ ಆಧಾರಿತ ಡಿಜಿಟಲ್ ಮ್ಯಾಪಿಂಗ್ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಜನಗಣತಿ ಕಾರ್ಯವನ್ನು ಅತ್ಯಂತ ಪರಿಣಾಮಕಾರಿಯಾಗಿ ಮಾಡಲು ಮಹತ್ವದ ಸುತ್ತೋಲೆಗಳನ್ನು ಸರಿಯಾಗಿ ಅರ್ಥ ಮಾಡಿಕೊಂಡು ಅದರ ಪ್ರಕಾರ ಕೆಲಸ ಮಾಡಬೇಕು ಎಂದು ಹೇಳಿದರು.

ಜನಗಣತಿಗೆ ಅವಶ್ಯಕವಾಗಿರುವ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ನೇಮಕ ಆಗಬೇಕು ಎಂದು ಹೇಳಿದ ಜಿಲ್ಲಾಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಕೆಲಸವನ್ನು ಮಾಡಬೇಕು ಎಂದು ಅವರು ಹೇಳಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಎಸ್. ಶಿವಾನಂದಮೂರ್ತಿ ಅವರು ಮಾತನಾಡಿ ಶಿಕ್ಷಕರು ಮತ್ತು ಇತರ ಇಲಾಖೆ ಸಿಬ್ಬಂದಿಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು. ಸರ್ಕಾರದಿಂದ ಬರುವ ಮಹತ್ವದ ಸುತ್ತೋಲೆಗಳನ್ನು ಸರಿಯಾಗಿ ಅರ್ಥ ಮಾಡಿಕೊಂಡು ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕೆಲಸ ಮಾಡುವಂತೆ ತಿಳಿಸಿದರು.

ಸಭೆಯಲ್ಲಿ ಮಂಡ್ಯ ಉಪವಿಭಾಗಾಧಿಕಾರಿ ಎಂ.ಶಿವಮೂರ್ತಿ, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾಧಿಕಾರಿ ನರಸಿಂಹ ಮೂರ್ತಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಧಿತರಿದ್ದರು.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ. ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ನುಡಿಭಾರತಿ ಸೌಹಾರ್ದ ಸಹಕಾರಿ ಸಂಘದವರು 2026 ರ ಕ್ಯಾಲೆಂಡರ್ ನ ಬಿಡುಗಡೆ ಮಾಡಿದರು

ಬೂದನೂರು ಉತ್ಸವ ಪ್ರಯುಕ್ತ ನಾಳೆ ಹೆಲಿ ಟೂರಿಸಂ

ಏ. 15 ರಂದು ಆದಿಚುಂಚನಗಿರಿಗೆ ಪ್ರಧಾನಮಂತ್ರಿಗಳ ಆಗಮನ

Leave a Comment