NEWS

ಚೌಟ್ರಿ ಮಾಲೀಕ ಬಾಲ್ಯವಿವಾಹಕ್ಕೆ ಹೊಣೆಗಾರನಲ್ಲ ಹೊಣೆಗಾರನಲ್ಲ

ಪಾಲನೆ ನ್ಯೂಸ್

ಬೆಂಗಳೂರು: ಕಲ್ಯಾಣ ಮಂಟಪವನ್ನು ಬಾಡಿಗೆ ನೀಡುವ ಸಂದರ್ಭದಲ್ಲಿ ವಧು-ವರರ ವಯಸ್ಸಿನ ದಾಖಲೆಗಳನ್ನು ಪರಿಶೀಲಿಸಬೇಕು ఎంబ ಕಟ್ಟುನಿಟ್ಟಿನ ನಿಯಮಗಳು ಇಲ್ಲ ಎಂದಿರುವ ಹೈಕೋರ್ಟ್, ಬಾಲ್ಯವಿವಾಹಕ್ಕೆ ಸಹಕರಿಸಿದ ಆರೋಪದಲ್ಲಿ ಕಲ್ಯಾಣ ಮಂಟಪ ಮಾಲೀಕನ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದುಪಡಿಸಿದೆ.

ಬಾಲಕಿಯ ವಿವಾಹ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣ ರದ್ದುಗೊಳಿಸುವಂತೆ ಕೋರಿ ವಿಜಯಪುರದ ಹುಸೇನ್ ಪ್ಯಾಲೇಸ್ ಮಾಲೀಕ ಅಬ್ದುಲ್ ಹಮೀದ್ ಎಂಬುವರು ಸಲ್ಲಿಸಿದ್ದ ಅರ್ಜಿಯನ್ನು ಕಲಬುರಗಿ ಪೀಠದಲ್ಲಿ ಪುರಸ್ಕರಿಸಿರುವ ನ್ಯಾಯಮೂರ್ತಿ ಕೆ.ರಾಜೇಶ್ ರೈ ಅವರಿದ್ದ ಏಕಸದಸ್ಯ ಪೀಠ, ಈ ಆದೇಶ ನೀಡಿದೆ. ಸಂತ್ರಸ್ತೆ ಪಾಲಕರು ಮದುವೆ ಹಾಲ್ ಬುಕ್ ಮಾಡಿದ್ದಾರೆ.

ದೂರು ಮತ್ತು ಚಾರ್ಜ್ ಶೀಟ್‌ನಲ್ಲಿರುವ ಅಂಶಗಳನ್ನು ಗಮನಿಸಿದರೆ, ಅರ್ಜಿದಾರರ ವಿರುದ್ಧ ಬಲವಾದ ಸಾಕ್ಷ್ಯಗಳಿಲ್ಲ. ಇಂತಹ ಸ್ಥಿತಿಯಲ್ಲಿ ವಿಚಾರಣೆ ಮುಂದುವರಿಸುವುದು ನ್ಯಾಯಾಂಗ ಪ್ರಕ್ರಿಯೆಯ ದುರುಪಯೋಗವಾಗುತ್ತದೆ ಎಂದು ತಿಳಿಸಿರುವ ಕೋರ್ಟ್, ಪ್ರಕರಣ ರದ್ದುಪಡಿಸಿದೆ.‌

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ. ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

2000 ಬೋಧಕ ಹುದ್ದೆ ಭರ್ತಿಗೆ ಅಸ್ತು

ಚಿನ್ನದ ಬೆಲೆಯಲ್ಲಿ ಕುಸಿತ

ಪ್ರವಾಸಿ ತಾಣಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ

Leave a Comment