ಕ್ಯಾಂಪಸ್‌ಗಳಲ್ಲಿ ಮೊಬೈಲ್ ಬಳಕೆ ನಿಷೇಧ? ಕ್ಯಾಂಪಸ್‌ಗಳನ್ನು ಮಾದಕ ವಸ್ತು ಮುಕ್ತ ಮಾಡಲು ಸಿಎಂ ಸೂಚನೆ
ಪಾಲನೆ ನ್ಯೂಸ್
ಬೆಂಗಳೂರು: ಶೀಘ್ರದಲ್ಲೇ ರಾಜ್ಯದ ಶಾಲಾ ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧ ಮಾಡುವ ಸಾಧ್ಯತೆ ಇದೆ. 16 ವರ್ಷದೊಳಗಿನ ಮಕ್ಕಳು ಮೊಬೈಲ್ ಬಳಸುವುದನ್ನು ನಿರ್ಬಂಧ ಮಾಡಲೂ ಕೂಡ ಚಿಂತನೆ ನಡೆದಿದೆ.

ಶನಿವಾರ ನಡೆದ ವಿಶ್ವವಿದ್ಯಾನಿಲಯಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಸುಳಿವು ನೀಡಿದ್ದಾರೆ. ಮೊಬೈಲ್ ಬ್ಯಾನ್ ವಿಚಾರವಾಗಿ ಮುಖ್ಯಮಂತ್ರಿಗಳು ವಿಶ್ವವಿದ್ಯಾನಿಯದ ಕುಲಪತಿಗಳಿಂದಲೂ ಅಭಿಪ್ರಾಯ ಕೇಳಿದ್ದು, ಇದಕ್ಕೆ ಅವರಿಂದಲೂ ಒಪ್ಪಿಗೆ ಸಿಕ್ಕಿದೆ. 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆಗೆ ಕಡಿವಾಣ ಹಾಕಬೇಕಿದ್ದು, ಆಸ್ಟ್ರೇಲಿಯಾ ಸೇರಿ ಅನೇಕ ದೇಶಗಳಲ್ಲಿ ಈ ನಿಯಮ ಜಾರಿ ಮಾಡಿದ್ದಾರೆ.
ಸಾಮಾಜಿಕ ಮಾಧ್ಯಮಗಳು ಹಾಗೂ ಜಾಲತಾಣಗಳಿಂದ ವಿದ್ಯಾರ್ಥಿಗಳು ಹಾಳಾಗುತ್ತಿರುವ ಆರೋಪದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಮೊಬೈಲ್ ಬಳಕೆ ನಿಷೇಧಕ್ಕೆ ಚಿಂತನೆ ನಡೆದಿದೆ ಎನ್ನಲಾಗಿದೆ. ವಿದ್ಯಾರ್ಥಿ ಸಂಘಗಳ ಚುನಾವಣೆಗೆ ಸುಳಿವು: ವಿದ್ಯಾರ್ಥಿ ಸಂಘಗಳ ಚುನಾವಣೆ ಬಗ್ಗೆಯೂ ಸಿಎಂ ಸಿದ್ದರಾಮಯ್ಯ ಸುಳಿವು ನೀಡಿದ್ದಾರೆ.
✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn
