NEWS

ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಕ್ರಮವಹಿಸಿ : ಜಿ.ಪಂ ಸಿಇಓ ಸೂಚನೆ

ಪಾಲನೆ ನ್ಯೂಸ್

ಮಂಡ್ಯ: ಜಿಲ್ಲೆಯಲ್ಲಿ ಮುಂದಿನ ಬೇಸಿಗೆ ಹಂಗಾಮಿನಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಸಂಬಂಧಿತ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ಸೂಚನೆ ನೀಡಿದ್ದಾರೆ.

ಈ ಕುರಿತು ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಸಿ.ಇ.ಓ ರವರು, ಗ್ರಾಮ ಪಂಚಾಯತ್ ಮಟ್ಟದಲ್ಲಿ ಲಭ್ಯವಿರುವ ಕುಡಿಯುವ ನೀರಿನ ಮೂಲಗಳನ್ನು ಪರಿಶೀಲಿಸಿ, ದುರಸ್ಥಿಗೆ ಒಳಪಡುವ ಬೋರ್‌ವೆಲ್‌ಗಳು ಹಾಗೂ ಪೈಪ್‌ಲೈನ್‌ಗಳ ತಕ್ಷಣದ ದುರಸ್ತಿ ಕಾರ್ಯಗಳನ್ನು ಕೈಗೊಳ್ಳುವಂತೆ ನಿರ್ದೇಶಿಸಿದರು.

ನೀರು ಸರಬರಾಜು ವ್ಯವಸ್ಥೆ ಸುಗಮವಾಗಿರುವುದನ್ನು ಖಚಿತಪಡಿಸಿಕೊಳ್ಳಲು ನಿಯಮಿತವಾಗಿ ಮೇಲ್ವಿಚಾರಣೆ ನಡೆಸಬೇಕು ಎಂದು ಹೇಳಿದರು.

ಪ್ರಮುಖ ಸೂಚನೆಗಳು:
• ಗ್ರಾಮವಾರು ಕುಡಿಯುವ ನೀರಿನ ಲಭ್ಯತೆ ಬಗ್ಗೆ ಸಮಗ್ರ ವರದಿ ಸಿದ್ಧಪಡಿಸಬೇಕು.
• ಅಗತ್ಯವಿದ್ದಲ್ಲಿ ಟ್ಯಾಂಕರ್‌ಗಳ ಮೂಲಕ ನೀರು ಪೂರೈಕೆ ಮಾಡುವ ವ್ಯವಸ್ಥೆ ಮಾಡಬೇಕು.
• ನೀರಿನ ಸಂರಕ್ಷಣೆ ಹಾಗೂ ಸಮರ್ಪಕ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು.
• ಶಾಲೆಗಳು, ಅಂಗನವಾಡಿಗಳು ಹಾಗೂ ಸಾರ್ವಜನಿಕ ಆರೋಗ್ಯ ಕೇಂದ್ರಗಳಿಗೆ ಆದ್ಯತೆ ನೀಡಬೇಕು.

ಬೇಸಿಗೆ ಅವಧಿಯಲ್ಲಿ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಎಲ್ಲಾ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸಿಇಓ ಸೂಚಿಸಿದರು.

ಕುಡಿಯುವ ನೀರಿನ ಪೂರೈಕೆಯಲ್ಲಿ ನಿರ್ಲಕ್ಷ್ಯ ತೋರಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಬೇಸಿಗೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗುವ ಸಾಧ್ಯತೆ ಇದೆ. ತಾಪಮಾನ ಹೆಚ್ಚಾದಂತೆ ನೀರಿನ ಮೂಲಗಳು ಒಣಗುವುದು, ಭೂಗರ್ಭ ಜಲಮಟ್ಟ ಕುಸಿಯುವುದು, ಮತ್ತು ನೀರಿನ ಬೇಡಿಕೆ ಹೆಚ್ಚಾಗುವುದು ಸಾಮಾನ್ಯ. ಆದ್ದರಿಂದ ಮಳೆ ಕಡಿಮೆಯಾಗಿ ಕೆರೆ, ಕುಂಟೆ, ಬಾವಿಗಳು ಒಣಗುತ್ತವೆ. ಭೂಗರ್ಭ ಜಲಮಟ್ಟ ಕುಸಿತ – ಅತಿಯಾದ ಬೋರ್‌ವೆಲ್ ಬಳಕೆ. ನೀರಿನ ದುರ್ಬಳಕೆ – ಕೃಷಿ ಮತ್ತು ಗೃಹ ಬಳಕೆಯಲ್ಲಿ ಅತಿಯಾದ ನೀರಿನ ಬಳಕೆ ಮಾಡುವುದರಿಂದ ನೀರಿನ ಅಭಾವ ಹೆಚ್ಚಾಗುತ್ತದೆ ಹಾಗೂ ರೋಗ-ರುಜಿನಗಳು ಹರಡು ಸಾಧ್ಯತೆ ಹೆಚ್ಚಾಗಿರುತ್ತದೆ. ಆದ್ದರಿಂದ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಈ ಸಮಸ್ಯೆಗಳು ಉಂಟಾಗದಂತೆ ಕ್ರಮವಹಿಸಬೇಕಾಗುತ್ತದೆ.
ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತೆಗೆದುಕೊಳ್ಳಬೇಕಾದ ಪ್ರಮುಖ ಕ್ರಮಗಳ ಬಗ್ಗೆ ಸಿ.ಇ.ಓ ರವರು ಈ ಕೆಳಗಿನಂತೆ ತಿಳಿಸಿದರು.

  1. ಸಮಸ್ಯೆ ಇರುವ ಗ್ರಾಮಗಳ ಗುರುತಿಸುವಿಕೆ.
    ಹಿಂದಿನ ವರ್ಷದ ಮಾಹಿತಿ ಪರಿಶೀಲನೆ
    • ಕಳೆದ ಬೇಸಿಗೆಯಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸಿದ ಗ್ರಾಮಗಳ ಪಟ್ಟಿ ಸಿದ್ಧಪಡಿಸುವುದು.
    • ಕಡಿಮೆ ಮಳೆ ದಾಖಲಾಗಿರುವ ಹೋಬಳಿ/ಗ್ರಾಮಗಳನ್ನು ಗುರುತಿಸುವುದು.
    ನೀರಿನ ಮೂಲಗಳ ಸ್ಥಿತಿ ಪರಿಶೀಲನೆ
    • ಬೋರ್‌ವೆಲ್‌ಗಳ ನೀರಿನ ಮಟ್ಟ (Water Level) ಪರಿಶೀಲನೆ.
    • ಓಪನ್ ವೆಲ್, ಕೆರೆ, ಕುಂಟೆ, ಟ್ಯಾಂಕ್‌ಗಳ ನೀರಿನ ಸಂಗ್ರಹ ಮಟ್ಟ ಪರಿಶೀಲನೆ.
    • ಹಾನಿಗೊಳಗಾದ ಪಂಪ್ ಸೆಟ್‌ಗಳು, ಮೋಟಾರ್, ಪೈಪ್‌ಲೈನ್‌ಗಳ ಮಾಹಿತಿ ಸಂಗ್ರಹ.
    ಗ್ರಾಮಸಭೆ/VWSC ಸಮಿತಿ ಸಭೆ
    • ಸ್ಥಳೀಯರ ಅಭಿಪ್ರಾಯ ಪಡೆದು ಸಮಸ್ಯೆ ಇರುವ ವಾರ್ಡ್/ಜನವಸತಿಗಳನ್ನು ಗುರುತಿಸುವುದು.
    • ವಿಶೇಷವಾಗಿ SC/ST ಕಾಲೋನಿ, ಹಳ್ಳಿಯ ದೂರದ ಭಾಗಗಳನ್ನು ಪರಿಶೀಲನೆ.
    ತಕ್ಷಣ ಗ್ರಾಮ ಪಂಚಾಯಿತಿಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳು

ಬೋರ್‌ವೆಲ್ ರಿಪೇರಿ ಮತ್ತು ರೀಚಾರ್ಜ್
• ಕೆಟ್ಟುಹೋಗಿರುವ ಮೋಟಾರ್/ಪಂಪ್‌ಗಳನ್ನು
ಟ್ಯಾಂಕರ್ ಮೂಲಕ ನೀರು ಪೂರೈಕೆ
• ಅಗತ್ಯವಿದ್ದಲ್ಲಿ ಮಾತ್ರ ಟ್ಯಾಂಕರ್‌ಗಳ ನಿಯೋಜನೆ.

• ನೀರಿನ ಗುಣಮಟ್ಟ ಪರೀಕ್ಷೆ (Water Quality Test) ಕಡ್ಡಾಯ.
ಕುಡಿಯುವ ನೀರಿನ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆ ಆದಾರದ ಮೇಲೆ ಪಡೆಯುವುದು, ಅಗತ್ಯವಿದ್ದಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವುದು, ಹೊಸ ಕೊಳವೆ ಬಾವಿಗಳನ್ನು ಕೊರೆಸುವುದು, ಪೈಪ್ ಲೈನ್ ಅಳವಡಿಸುವುದು, ವಿದ್ಯುತ್ ಸಂಪರ್ಕ ಕಲ್ಪಿಸುವುದು ಸೇರಿದಂತೆ ಅಗತ್ಯ ಕಾಮಗಾರಿಗಳನ್ನು ಕಾರ್ಯನಿರ್ವಾಹಕ ಅಧಿಕಾರಿ, ತಹಶಿಲ್ದಾರ್ ಮತ್ತು ಸಹಾಯಕ ಕಾರ್ಯಪಾಲಕ ಅಭಿಯಂತರರು ಜಂಟಿಯಾಗಿ ತಪಾಸಣೆ ನಡೆಸಿ, ತಾಲ್ಲೂಕು ಟಾಸ್ಕ್ ಪೋರ್ಸ್ ಸಮಿತಿಯಲ್ಲಿ ಮಂಡಿಸಿ ಅನುಮೋದನೆ ಪಡೆದು ಸಕ್ಷಮ ಪ್ರಾಧಿಕಾರಕ್ಕೆ ಕಳುಹಿಸಿ ಅನುಮತಿ ಪಡೆದು ನಂತರ ಕ್ರಮವಹಿಸಬೇಕು ಎಂದು ತಿಳಿಸಿದರು. ಈ ಎಲ್ಲಾ ಕಾಮಗಾರಿಗಳನ್ನು ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆಯಲ್ಲಿ ಮಂಡಿಸಿ ಕಡ್ಡಾಯವಾಗಿ ಅನುಮತಿ ಪಡೆಯಬೇಕು ಎಂದು ಕಾರ್ಯಪಾಲಕ ಅಭಿಯಂತರರಿಗೆ ಸೂಚಿಸಿದರು.

ಟ್ರಾನ್ಸ್ ಪಾರ್ಮರ್ ಗಳನ್ನು ಅಳವಡಿಸುವುದು ಹಾಗೂ ಸ್ಥಗಿತವಾಗಿರುವ ಕೊಳವೆ ಬಾವಿಗಳಿಂದ ಟ್ರಾನ್ಸ್ ಪಾರ್ಮರ್ ಗಳನ್ನು ಸ್ಥಳಾಂತರ ಮಾಡುವ ಮೂಲಕ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಲು ಕ್ರಮವಹಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಬೇಸಿಗೆ ಹಿನ್ನೆಲೆಯಲ್ಲಿ ಮಾರ್ಚ್ 2 ರಿಂದ ಸಾರ್ವಜನಿಕ ಸೋಮವಾರದ ಕುಂದು ಕೊರತೆ ಸಭೆಯನ್ನು ತಾಲ್ಲೂಕು ಕೇಂದ್ರಗಳಲ್ಲೇ ಆಯೋಜಿಸುವಂತೆ ಸೂಚಿಸಲಾಗಿದೆ. ಪ್ರತೀ ಸೋಮವಾರ ಕ್ಷೇತ್ರ ಭೇಟಿ ನಡೆಸಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಇನ್ನಿತರೆ ಸಮಸ್ಯೆಗಳ ಬಗ್ಗೆ ಪರಿಶೀಲಿಸಲಾಗುವುದು. ಈ ಸಂದರ್ಭದಲ್ಲಿ ಸಾರ್ವಜನಿಕರ ಕುಂದು ಕೊರತೆಯನ್ನು ಸ್ಥಳದಲ್ಲಿಯೇ ಆಲಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ಸಂದರ್ಭದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಪ್ರಮೋದ್ ಕುಮಾರ್ ಎನ್.ಜಿ. ಹಾಗೂ ಜಿಲ್ಲೆಯ ಎಲ್ಲಾ ಉಪ ವಿಭಾಗಗಳ ಕುಡಿಯುವ ನೀರಿನ ಇಲಾಖೆಯ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.‌

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಫೆಬ್ರವರಿ ಮಾಹೆಯಲ್ಲಿ ಉದ್ಯೋಗ ಮೇಳ ಜಿಲ್ಲೆಯಲ್ಲಿ ಉದ್ಯೋಗ ಆಕಾಂಕ್ಷಿಗಳು ಉದ್ಯೋಗಮೇಳವನ್ನು ಸದುಪಯೋಗಪಡಿಸಿಕೊಳ್ಳಿ – ಕೆ.ಆರ್.ನಂದಿನಿ

ಪಂಚ ಗ್ಯಾರಂಟಿ ಯೋಜನೆಯಡಿ ಐದು ವರ್ಷದಲ್ಲಿ  3 ಲಕ್ಷ ಕೋಟಿ ಹಣವನ್ನು  ಫಲಾನುಭವಿಗಳಿಗೆ ನೀಡಲಾಗುವುದು: ಸಚಿವ ಚಲುವರಾಯ ಸ್ವಾಮಿ

ಮಾಂಡವ್ಯ ಎಕ್ಸಲೆನ್ಸ್: ಸಂಜನಾ ಕೆ.ವೈ. ರಾಜ್ಯಕ್ಕೇ 7ನೇ ಸ್ಥಾನ, ದೀಕ್ಷ ಯು. ರಾಜ್ಯಕ್ಕೇ 10ನೇ ಸ್ಥಾನ

Leave a Comment