NEWS

ಅನಿಲ್ ಅಂಬಾನಿ ಮನೆ ಜಪ್ತಿ

ಪಾಲನೆ ನ್ಯೂಸ್

ಮುಂಬೈ: ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಮುಂಬೈನಲ್ಲಿರುವ 3,716 ಕೋಟಿ ರೂ. ಮೌಲ್ಯದ ‘ಅಬೋಡ್’ ನಿವಾಸ ವನ್ನು ಜಾರಿ ನಿರ್ದೇಶನಾಲಯ (ಇಡಿ) ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ.

ಅನಿಲ್ ಅಂಬಾನಿ ಅವರ ಸಮೂಹ ಸಂಸ್ಥೆಗಳಲ್ಲಿ ಒಂದಾದ ರಿಲಯನ್ಸ್ ಕಮ್ಯುನಿಕೇಷನ್ಸ್ (ಆ‌ರ್ ಕಾಂ) ವಿರುದ್ದ ಬ್ಯಾಂಕ್ ಸಾಲದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು, ಅನಿಲ್ ಅಂಬಾನಿಗೆ ಸೇರಿದ ಬಂಗಲೆಯನ್ನು ಜಪ್ತಿ ಮಾಡಿದ್ದಾರೆ. ಅವರ ಮುಂಬೈನ ಪಾಲಿಹಿಲ್ ಪ್ರದೇಶದಲ್ಲಿರುವ 17 ಅಂತಸ್ತಿನ, 66 ಮೀ.ಎತ್ತರದ ಈ ಐಷಾರಾಮಿ ಆಸ್ತಿಯ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್‌ಎ) ತಾತ್ಕಾಲಿಕ ಜಪ್ತಿ ಆದೇಶವನ್ನು ಹೊರಡಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಜಪ್ತಿ ಮಾಡಲಾದ ಆಸ್ತಿಯ ಮೌಲ್ಯ 15,700 ಕೋಟಿ ರೂಪಾಯಿಗೆ ತಲುಪಿದೆ ಎಂದು ಹೇಳಲಾಗಿದೆ. ಈ ಜಪ್ತಿ, ಆರ್ ಕಾಂನಿಂದ ಹಣಕಾಸು ಅಕ್ರಮಗಳು ಮತ್ತು ಸಾಲದ ಹಣದ ದುರ್ಬಳಕೆ ಆರೋಪಗಳ ಕುರಿತು ಇಡಿ ನಡೆಸುತ್ತಿರುವ ತನಿಖೆಯ ಭಾಗವಾಗಿದೆ.‌

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

38 ವರ್ಷಗಳ ಬಳಿಕ ಮರುಮುದ್ರಣವಾಗಲಿದೆ ‘ಕರ್ಣಾಟ ಭಾರತ ಕಥಾಮಂಜರಿ’ ಕೃತಿ

ಪಾಂಡವಪುರ ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿಗಳ ಅನಿರೀಕ್ಷಿತ ಭೇಟಿ

ವೆನೆಜುವೆಲಾ: 6ನೇ ತೈಲ ಟ್ಯಾಂಕ‌ರ್ ವಶಕ್ಕೆ ಪಡೆದ ಅಮೆರಿಕ

Leave a Comment