NEWS

ಜೆಡಿಎಸ್ ಶಾಸಕ ಎಚ್‌.ಡಿ. ರೇವಣ್ಣ ವಿರುದ್ಧದ ವಿಚಾರಣೆ ಮುಂದುವರಿಯಲಿ

ಪಾಲನೆ ನ್ಯೂಸ್

ಬೆಂಗಳೂರು: ಅತ್ಯಾಚಾರ ಸಂತ್ರಸ್ತೆ ಅಪಹರಣ ಆರೋಪದಲ್ಲಿ ಜೆಡಿಎಸ್ ಶಾಸಕ ಎಚ್‌.ಡಿ. ರೇವಣ್ಣ ವಿರುದ್ಧದ ವಿಚಾರಣೆ ಮುಂದುವರಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹೈಕೋರ್ಟ್ ಸೂಚಿಸಿದೆ. ಆರೋಪಪಟ್ಟಿ ರದ್ದು ಕೋರಿ ರೇವಣ್ಣ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಸ್. ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು. ತಡೆಯಾಜ್ಞೆ ತೆರವು ಮಾಡಿರುವುದರಿಂದ ಜನಪ್ರತಿನಿಧಿಗಳ ನ್ಯಾಯಾಲಯ ವಿಚಾರಣೆ ಆರಂಭಿಸಿದೆ ಎಂದು ಸರ್ಕಾರಿ ಅಭಿಯೋಜಕರು ತಿಳಿಸಿದರು. ಇದನ್ನು ಆಲಿಸಿದ ನ್ಯಾಯಪೀಠ, ವಿಚಾರಣಾ ನ್ಯಾಯಾಲಯವು ಕಾನೂನು ಪ್ರಕಾರ ಮುಂದುವರಿಯಲಿ ಎಂದು ತಿಳಿಸಿತು.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

‘ಬಾಬಾ ಸಾಹೇಬ್ ಸಮತೆಯೆಡೆಗೆ ನಡಿಗೆ’ ಆಶಯದ ರಂಗಾಯಣ ಬೆಳ್ಳಿಹಬ್ಬ

ಆದಿಚುಂಚನಗಿರಿಯಲ್ಲಿ ಗಂಗಾಧರೇಶ್ವರ ಸ್ವಾಮಿ ರಥೋತ್ಸವ

ಕೀಲಾರದಲ್ಲಿ ರಾಜಸೂಯ ಯಾಗ ಪೌರಾಣಿಕ ನಾಟಕ ಪ್ರದರ್ಶನ

Leave a Comment