NEWS

ಬ್ಯಾಂಕ್ ವ್ಯವಸ್ಥಾಪಕರುಗಳಿಗೆ ಹಣಕಾಸು ಸೇರ್ಪಡೆ ಕುರಿತು ಒಂದು ದಿನದ ಕಾರ್ಯಗಾರ ಆಯೋಜನೆ

ಪಾಲನೆ ನ್ಯೂಸ್

ಮಂಡ್ಯ: ಇಂದು ಜಿಲ್ಲಾ ಪಂಚಾಯಿತಿಯ ಕಾವೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಯೋಜನೆಯಡಿ ಜಿಲ್ಲಾ ಮಟ್ಟದ ಬ್ಯಾಂಕ್ ವ್ಯವಸ್ಥಾಪಕರುಗಳಿಗೆ ಹಣಕಾಸು ಸೇರ್ಪಡೆ ಕುರಿತು ಒಂದು ದಿನದ ಕಾರ್ಯಗಾರ ಆಯೋಜಿಸಲಾಗಿತ್ತು. ಸದರಿ ಕಾರ್ಯಕ್ರಮವನ್ನು ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿಲ್ಲಾ ಪಂಚಾಯತ್. ಮಂಡ್ಯ ರವರು ಗಿಡಕ್ಕೆ ನೀರೆರೆಯುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಎನ್ .ಎಲ್,ಆರ್.ಎಂ ಯೋಜನೆಯಡಿ ರಚನೆಗೊಂಡಿರುವ ಸ್ವ-ಸಹಾಯ ಗುಂಪುಗಳಿಗೆ ವಿವಿಧ ಚಟುವಟಿಕೆ ಕೈಗೊಳ್ಳಲು ಈಗಾಗಲೇ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ಮೂಲಕ ಸಮುದಾಯ ಬಂಡವಾಳ ನಿಧಿ ವಿತರಿಸಲಾಗುತ್ತಿದ್ದು, ಹೆಚ್ಚಿನ ಮಟ್ಟದಲ್ಲಿ ಚಟುವಟಿಕೆ/ಉದ್ದಿಮೆಗಳನ್ನು ಕೈಗೊಳ್ಳಲು ಬ್ಯಾಂಕ್ ಗಳ ಮೂಲಕ ಹೆಚ್ಚುವರಿ ಸಾಲ ಸೌಲಭ್ಯ ವ್ಯವಸ್ಥೆ ಕಲ್ಪಿಸಿಕೊಡುವಂತೆ ತಿಳಿಸಿದರು.

ಸ್ವ-ಸಹಾಯ ಗುಂಪುಗಳು ಉತ್ಪಾದಿಸುವ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟಿ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ವಿವಿಧ ರೀತಿಯ ಮೇಳಗಳನ್ನ (ಕೃಷಿ ಮೇಳ, ಸರಸ್ ಮೇಳ, ಮಾಸಿಕ ಸಂತೆ) ಆಯೋಜಿಸುವ ಮೂಲಕ ಮಹಿಳೆಯರು ಆರ್ಥಿಕವಾಗಿ ಸಬಲೀಕರಣ ಹೊಂದಲು ಯೋಜನೆಯ ಮೂಲಕ ಅನುಕೂಲಗಳನ್ನ ನೀಡಲಾಗುತ್ತಿದೆ ಎಂದು ತಿಳಿಸಿದರು.

ದುರ್ಬಲವರ್ಗದ ಮಹಿಳೆಯರು, ಒಂಟಿ ಮಹಿಳೆಯರು, ವಿಶೇಷಚೇತನ ಮಹಿಳೆಯರು ಹಾಗೂ ಇತರೇ ಎಲ್ಲಾ ವರ್ಗದ ಗ್ರಾಮೀಣ ಮಹಿಳೆಯರಿಗೆ ಬ್ಯಾಂಕ್ ಅಧಿಕಾರಿಗಳು ಸಾಮಾಜಿಕ ಭದ್ರತಾ ಯೋಜನೆಗಳಾದ PMJJBY, PMSBY ಹಾಗೂ APY ವಿಮೆ ಯೋಜನೆಗಳ ಕುರಿತು ಮಾಹಿತಿ, ಮಾರ್ಗದರ್ಶನ ನೀಡಿ, ವಿಮಾ ಸೌಲಭ್ಯಗಳನ್ನ ಕಲ್ಪಿಸುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿಗಳಾದ ಶ್ರೀ ಅಭಿಶೇಕ್ ಗೋಸ್ವಾಮಿ – ಎನ್.ಐ.ಆರ್.ಡಿ.ಪಿ.ಆರ್ ಹೈದರಾಬಾದ್ ರವರು, ಎಲ್ಲಾ ತಾಲ್ಲೂಕಿನ ಕಾರ್ಯ ನಿರ್ವಾಹಕ ಅಧಿಕಾರಿಗಳು, ಸಹಾಯಕ ಯೋಜನಾಧಿಕಾರಿ, ತಾಲ್ಲೂಕಿನ ಬ್ಯಾಂಕ್ ಅಧಿಕಾರಿಗಳು, ಜಿಲ್ಲಾ ಹಾಗೂ ತಾಲ್ಲೂಕಿನ ಎನ್.ಆರ್.ಎಲ್.ಎಂ ಸಿಬ್ಬಂದಿಗಳು ಹಾಜರಿದ್ದರು.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಎಪಿಎಂಸಿ ಪರ ಸುಪ್ರೀಂ ಕೋರ್ಟ್ ತೀರ್ಪು

ರಸ್ತೆಗಳ ಮೂಲೆಗಳಲ್ಲಿ ಕಸ ಹಾಕುವವರಿಗೆ ದಂಡ

5 ವರ್ಷವೂ ಸಿದ್ದರಾಮಯ್ಯ ಸಿಎಂ – ಡಾ.ಯತೀಂದ್ರ ಸಿದ್ದರಾಮಯ್ಯ

Leave a Comment