NEWS

ಕಬ್ಬು ಸರಬರಾಜು ಮಾಡಿದ ರೈತರಿಗೆ ಒಂದು ಬಾರಿ ಆರ್ಥಿಕ ನೆರವು : ಡಾ. ಕುಮಾರ

ಪಾಲನೆ ನ್ಯೂಸ್

‌ಮಂಡ್ಯ: 2025-26 ಹಂಗಾಮಿನಲ್ಲಿ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಕೆ ಮಾಡಿದ ರೈತರಿಗೆ ಕಾರ್ಖಾನೆಗಳು ಪಾವತಿಸಬೇಕಾದ ಎಫ್.ಆರ್. ಪಿ (FRP) ದರ ಹೊರತುಪಡಿಸಿ ಹೆಚ್ಚುವರಿಯಾಗಿ ರಾಜ್ಯ ಸರ್ಕಾರದಿಂದ ರೂ 50 ಹಣವನ್ನು ಪಾವತಿಸಲು ತೀರ್ಮಾನಿಸಲಾಗಿದೆ ಹಾಗೂ ಸಕ್ಕರೆ ಕಾರ್ಖಾನೆ ವತಿಯಿಂದ ಸಹ ಪ್ರತಿ ಟನ್ ಗೆ ರೂ 50 ಹಣವನ್ನು ಹೆಚ್ಚುವರಿಯಾಗಿ ಪಾವತಿಸಲಾಗುತ್ತದೆ ಎಂದು ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಂಗಾಮಿನಲ್ಲಿ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ನಿಗದಿಪಡಿಸಿರುವ ಹೆಚ್ಚುವರಿ ಕಬ್ಬಿನ ಬೆಲೆಯನ್ನು ಬಿಡುಗಡೆ ಮಾಡುವ ಕುರಿತು ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರೈತರಿಗೆ ಒಟ್ಟಾಗಿ ಪ್ರತಿ ಟನ್ ಗೆ ರೂ 100 ಹಣ ಪಾವತಿ ಮಾಡಲು ಕ್ರಮ ವಹಿಸಲಾಗಿದೆ.
2025-26 ಸಾಲಿನ ಹಂಗಾಮಿ ಕಬ್ಬು ಸರಬರಾಜು ಮಾಡಿದ ರೈತರಿಗೆ ಒಟ್ಟು 10 ಕೋಟಿ ಆರ್ಥಿಕ ನೆರವು ಮಂಡ್ಯ ಜಿಲ್ಲೆ ಅಲ್ಲಿ ಸರ್ಕಾರದ ಕಡೆ ಇಂದ ನೀಡಲಾಗುತ್ತಿದೆ ಎಂದು ಅವರು ಹೇಳಿದರು.

ಸದರಿ ಆದೇಶದಂತೆ ಅನುದಾನ ಬಿಡುಗಡೆ ಮಾಡಲು ಅಗತ್ಯ ಕ್ರಮವಹಿಸಲಾಗುವುದು ಎಂದು ಸಭೆಯಲ್ಲಿ ತಿಳಿಸಿದರು. ಸಭೆಯಲ್ಲಿ ಆಹಾರ ಮತ್ತು ನಾಗರೀಕ ‌ ಸರಬರಾಜು ಇಲಾಖೆಯ ಉಪ ನಿರ್ದೇಶಕರು ಪ್ರತೀಕ ಹೆಗ್ಡೆ ಹಾಗೂ ಸಕ್ಕರೆ ಕಾರ್ಖಾನೆಯ ಅಧಿಕಾರಿಗಳು, ಜಿಲ್ಲಾ ಖಜಾನೆ ಅಧಿಕಾರಿ ಉಪಸ್ಥಿತರಿದ್ದರು.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ನುಡಿಭಾರತಿ ಸೌಹಾರ್ದ ಸಹಕಾರಿ ಸಂಘದವರು 2026 ರ ಕ್ಯಾಲೆಂಡರ್ ನ ಬಿಡುಗಡೆ ಮಾಡಿದರು

ಗಿಲ್ಲಿಗೆ ಸಿಎಂ ಅಭಿನಂದನೆ

Karnataka Politics | ಅಧಿವೇಶನ ಬಳಿಕ ಸಂದೇಶ: ಡಿಕೆಶಿ ಬಣ ವಿಶ್ವಾಸ

Leave a Comment