NEWS

17 ಮಂದಿ ಸಾವು ; 18 ಮಂದಿ ಗಾಯ

ಪಾಲನೆ ನ್ಯೂಸ್

ನಾಗ್ವುರ: ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯ ಪಟಾಕಿ ಘಟಕದಲ್ಲಿ ಸಂಭವಿಸಿದ ಸ್ಪೋಟದಲ್ಲಿ 21 ಮಂದಿ ಸಾವನ್ನಪ್ಪಿದ ದುರ್ಘಟನೆ ಬೆನ್ನಲ್ಲೇ ಮಹಾರಾಷ್ಟ್ರದ ನಾಗುರ ಜಿಲ್ಲೆಯ ಸ್ಪೋಟಕ ಕಾರ್ಖಾನೆಯಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದ ಭಾರೀ ಸ್ಫೋಟದಲ್ಲಿ ಕನಿಷ್ಠ 17 ಜನರು ಸಾವನ್ನಪ್ಪಿದ್ದು, 18 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಟೋಲ್ ತಹಸಿಲ್‌ನ ರೌಲ್ದಾಂವ್ ಎಂಬಲ್ಲಿರುವ ಗಣಿಗಾರಿಕೆ ಮತ್ತು ಕೈಗಾರಿಕಾ ಸ್ಫೋಟಕ ತಯಾರಕ ಕಾರ್ಖಾನೆ ಎಸ್‌ಬಿಎಲ್ ಎನರ್ಜಿ ಲಿಮಿಟೆಡ್‌ನಲ್ಲಿ ಈ ಘಟನೆ ನಡೆದಿದೆ. ಗಾಯಾಳುಗಳನ್ನು ನಾಗುರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಎಸ್‌ಬಿಎಲ್ ಎನರ್ಜಿ ಲಿಮಿಟೆಡ್ ಪ್ರತಿನಿಧಿಗಳು ಪ್ರತಿಕ್ರಿಯಿಸಿ, ಕಾರ್ಖಾನೆಯ ಡಿಟೋನೇಟರ್ ಪ್ಯಾಕಿಂಗ್ ಘಟಕದಲ್ಲಿ ಬೆಳಿಗ್ಗೆ 7ರಿಂದ 7.15ರ ನಡುವೆ ಸ್ಫೋಟ ಸಂಭವಿಸಿದೆ ಎಂದು ತಿಳಿಸಿದ್ದಾರೆ. ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್‌ಡಿಆರ್‌ಎಫ್) ತಂಡ ಸ್ಥಳಕ್ಕೆ ಧಾವಿಸಿ, ರಕ್ಷಣಾ ಕಾರ್ಯಾಚರಣೆ ನಡೆಸಿತು.

ಜಿಲ್ಲಾಧಿಕಾರಿ ವಿಪಿನ್ ಇಟಂಕರ್ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಹರ್ಷ್ ಪೋದರ್‌ ಸ್ಥಳದಲ್ಲಿದ್ದು ಪರಿಹಾರ ಪರಿಹಾರ ಘೋಷಿಸಿದ ಪ್ರಧಾನಿ ಸ್ಫೋಟದಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಮೃತರ ಕುಟುಂಬ ಗಳಿಗೆ ತಲಾ 2 ಲಕ್ಷ ರೂ. ಮತ್ತು ಗಾಯಾಳುಗಳಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 50,000 ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಕಾರ್ಯಗಳ ಮೇಲ್ವಿಚಾರಣೆ ನಡೆಸಿದರು. ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯ ಪಟಾಕಿ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ 21 ಮಂದಿ ಸಾವನ್ನಪ್ಪಿದ ಒಂದು ದಿನದ ನಂತರ ಈ ಘಟನೆ ನಡೆದಿದೆ.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಗ್ರಾಮ ಒನ್ ಕೇಂದ್ರಗಳ ಸ್ಥಾಪನೆಗೆ ಅರ್ಜಿ ಅಹ್ವಾನ

ಪಶ್ಚಿಮ ಬಂಗಾಳದಲ್ಲಿ ಶೇ. 92.72ರಷ್ಟು ಮತದಾನ

ಮಾರ್ಚ್ 11 ರಂದು ಜಿಲ್ಲಾ ಮಟ್ಟದ ಕ್ರೀಡಾಕೂಟ -2026

Leave a Comment