NEWS

ಮಾರ್ಚ್ 05 ರಂದು ವಿಕಸಿತ ಭಾರತ ಯುವ ಸಂಪರ್ಕ -2026 ಕಾರ್ಯಕ್ರಮ

ಪಾಲನೆ ನ್ಯೂಸ್

ಮಂಡ್ಯ: ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ, ಮಂಡ್ಯ ವಿಶ್ವವಿದ್ಯಾನಿಲಯ, ಮೈ ಭಾರತ್ ಮಂಡ್ಯ, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಹಯೋಗದಲ್ಲಿ ವಿಕಸಿತ ಭಾರತ ಯುವ ಸಂಪತ್ತು ಜಿಲ್ಲಾಮಟ್ಟದ ಸ್ಪರ್ಧೆ ಮತ್ತು ವಿಕಸಿತ ಭಾರತ ಯುವ ಸಂಪರ್ಕ ಕಾರ್ಯಕ್ರಮ viksit bharat youth parliament -2026 ಕಾರ್ಯಕ್ರಮವನ್ನು ಮಾರ್ಚ್ 5 ರಂದು ಬೆಳಿಗ್ಗೆ 10.30 ಗಂಟೆಗೆ ಮಂಡ್ಯ ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭಾಂಗಣದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾದ ಎಚ್. ಡಿ ಕುಮಾರಸ್ವಾಮಿ ರವರು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸಲಿದ್ದಾರೆ.

ಕೃಷಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ರವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಜಿಲ್ಲಾ ಶಾಸಕರಾದ ಪಿ. ರವಿಕುಮಾರ್ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿಗಳಾದ ಡಾ. ಕುಮಾರ, ಮಂಡ್ಯ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಶಿವಚಿತ್ತಪ್ಪ ಕೆ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾದ ಕೆ.ಆರ್. ನಂದಿನಿ, ಜಿಲ್ಲಾ ಪೊಲೀಸ್ ಅಧಿಕ್ಷಕರಾದ ಡಾ. ಶೋಭಾರಾಣಿ ವಿ. ಜೆ, ಮಂಡ್ಯ ವಿಶ್ವವಿದ್ಯಾಲಯದ ಕುಲಸಚಿವರು( ಆಡಳಿತ) ಕೃಷ್ಣಕುಮಾರ್ ಎಂ.ಪಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಮಾನವ ಧರ್ಮಕ್ಕಿಂತ ಮಿಗಿಲಾದ ಧರ್ಮ ಇನ್ನೊಂದಿಲ್ಲ-ಡಾ.ಕುಮಾರ

ಬಾಲ್ಯವಿವಾಹ ಮುಕ್ತ ಗ್ರಾಮ ಪಂಚಾಯಿತಿಗಳಿಂದ ಪ್ರಶಸ್ತಿಗೆ ಅರ್ಜಿ ಆಹ್ವಾನ

ಗ್ರಾಮ ಒನ್ ಕೇಂದ್ರಗಳ ಸ್ಥಾಪನೆಗೆ ಅರ್ಜಿ ಅಹ್ವಾನ

Leave a Comment