NEWS

ಈ ಬಾರಿ ಐಪಿಎಲ್ ಪಂದ್ಯಗಳು ನಡೆಯುವ ದಿನ ಕ್ರಿಕೆಟ್ ಪಂದ್ಯದ ಟಿಕೆಟ್ ಹೊಂದಿರುವ ಅಭಿಮಾನಿಗಳಿಗೆ ಮೆಟ್ರೋ ಉಚಿತ

ಪಾಲನೆ ನ್ಯೂಸ್

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತ ಮುತ್ತಲಿನಲ್ಲಿ ಸಂಚಾರ ಸಿಕ್ಕು ಹಾಗೂ ಪಾರ್ಕಿಂಗ್ ಸಮಸ್ಯೆ ನಿವಾರಣೆಗೆ ಪಂದ್ಯಗಳ ವೀಕ್ಷಣೆಗೆ ಆಗಮಿಸುವ ಪ್ರೇಕ್ಷಕರು ಸಾರ್ವಜನಿಕ ಸಾರಿಗೆ ಬಳಸುವಂತೆ ಕೆಎಸ್‌ಸಿಎ ಕರೆ ನೀಡಿದೆ. ಈ ಬಾರಿ ಐಪಿಎಲ್ ಪಂದ್ಯಗಳು ನಡೆಯುವ ದಿನ ಬಿಎಂಆ‌ರ್ ಸಿಎಲ್‌ ಸಹ ನೆರವು ನೀಡಲಿದ್ದು, ಕ್ರಿಕೆಟ್ ಪಂದ್ಯದ ಟಿಕೆಟ್ ಹೊಂದಿರುವ ಅಭಿಮಾನಿಗಳು ಮೆಟ್ರೋಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಕುರಿತು ಆರ್‌ಸಿಬಿ ಫ್ರಾಂಚೈಸಿ ಹಾಗೂ ಬಿಎಂಆರ್‌ಸಿಎಲ್ ಮುಂದಿನ ದಿನಗಳಲ್ಲಿ ಮಾಹಿತಿ ನೀಡಲಿದೆ.

ಪಂದ್ಯದ ದಿನ ಪ್ರತಿ ಮೂರೂವರೆ ನಿಮಿಷಕ್ಕೊಂದು ಮೆಟ್ರೋ ಹಾಗೂ ಫೀಡರ್ ಬಸ್ ಸೇವೆಗೆ ಮನವಿ ಮಾಡಲಾಗಿದೆ. ಮಹಿಳೆಯರು, ಮಕ್ಕಳ ಆಗಮನ-ನಿರ್ಗಮನಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡುತ್ತಿದ್ದು, ಜನಸಂದಣಿ ನಿಯಂತ್ರಣಕ್ಕೆ ಸಾಮಾಜಿಕ ಜಾಲತಾಣದಲ್ಲಿ ಜಾಗೃತಿ ಮೂಡಿಸಲಾಗುವುದು ಎಂದು ಕೆಎಸ್‌ಸಿಎ ಕಾರ್ಯದರ್ಶಿ ಸಂತೋಷ್ ಮೆನನ್ ಮಾಹಿತಿ ನೀಡಿದರು. ಕ್ರೀಡಾಂಗಣ 32 ಸಾವಿರ ಆಸನ ಸಾಮರ್ಥ್ಯ ಹೊಂದಿದ್ದು, ಟಿಕೆಟ್‌ ಮಾರಾಟ ಪ್ರಕ್ರಿಯೆ ಸಂಪೂರ್ಣವಾಗಿ ಆರ್‌ಸಿಬಿ ಫ್ರಾಂಚೈಸಿ ನಿರ್ಧರಿಸಲಿದೆ.‌

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಮಹದೇವಪುರ ಬಹು ಗ್ರಾಮ ನೀರು ಸರಬರಾಜು ಯೋಜನೆಯ ನೀರು ಶುದ್ಧಿಕರಣ ಘಟಕ ಪರಿಶೀಲಿಸಿದ ಜಿ. ಪಂ. ಸಿಇಓ

ಮೇ 01 ರಂದು 2570ನೇ ಭಗವಾನ್ ಬುದ್ಧ ಜಯಂತಿ ಕಾರ್ಯಕ್ರಮ

ಸಿರಿಧಾನ್ಯಗಳನ್ನು ಬಳಸಿ ಪೌಷ್ಟಿಕಾಂಶವನ್ನು ಹೆಚ್ಚಿಸುವ  ಆರೋಗ್ಯಕರವಾದ  ಶುಚಿಯಾದ ರುಚಿಕರವಾದ ಅಡಿಗೆ ತಯಾರಿಸಬಹುದು

Leave a Comment