NEWS

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಾರ್ಚ್ 8 ರಿಂದ ಏಪ್ರಿಲ್ 8 ರವರೆಗೆ ಒಂದು ತಿಂಗಳ ಅಭಿಯಾನ – ಜಿ.ಪಂ.ಸಿಇಒ ಕೆ.ಆರ್.ನಂದಿನಿ.

ಪಾಲನೆ ನ್ಯೂಸ್

ಮಂಡ್ಯ: ಜಿಲ್ಲಾ ಪಂಚಾಯಿತಿಯ KSWAN ನಲ್ಲಿ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರ ಅಧ್ಯಕ್ಷತೆಯಲ್ಲಿ ಎಲ್ಲಾ ತಾಲ್ಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ವಿಡಿಯೋ ಸಂವಾದದ ಮೂಲಕ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಒಂದು ತಿಂಗಳುಗಳ ಕಾಲ ಅಭಿಯಾನ ಮಾದರಿಯಲ್ಲಿ ಮುಟ್ಟಿನ ಕಪ್ ಬಗ್ಗೆ ಮಹಿಳೆಯರಿಗೆ ಅರಿವು ಮತ್ತು ಜಾಗೃತಿ ಮೂಡಿಸಬೇಕು ಎಂದು ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಕೆ.ಆರ್ ನಂದಿನಿ ರವರು ತಿಳಿಸಿದರು.

ಇಂದು ಮಂಡ್ಯ ಜಿಲ್ಲಾ ಪಂಚಾಯಿತಿಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಹಿಳೆಯರಿಗೆ ವೈಯಕ್ತಿಕ ಸ್ವಚ್ಛತೆ, ಶುಚಿತ್ವ, ಆರೋಗ್ಯಕ್ಕೆ ಸಂಬಂಧಿಸಿದಂತೆ ಅರಿವು ಮೂಡಿಸುವುದು ಅವಶ್ಯಕವಾಗಿರುವ ಕಾರಣ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ 18 ರಿಂದ 35 ವಯಸ್ಸಿನೊಳಗಿನ ಗುಂಪು ರಚಿಸಿ, ವೈಯಕ್ತಿಕ ಸ್ವಚ್ಛತೆ, ಶುಚಿತ್ವ, ಋತು ಚಕ್ರ ನೈರ್ಮಲ್ಯ ನಿರ್ವಹಣೆ ಕುರಿತು ಜಾಗೃತಿ ಮೂಡಿಸುವುದು ಹಾಗೂ 35-45 ವಯಸ್ಸಿನೊಳಗಿನ ಮಹಿಳೆಯರಿಗೆ ಮುಟ್ಟಿನ ಕಪ್ ವಿತರಿಸುವುದರ ಜೊತೆಗೆ ಇದರ ಬಳಕೆಯ ಕುರಿತು ತಜ್ಞ ವೈದ್ಯರುಗಳಿಂದ ಮಾಹಿತಿ ನೀಡಲು ಕ್ರಮ ವಹಿಸುವಂತೆ ಸೂಚಿಸಿದರು.

ಅಭಿಯಾನ ಮಾದರಿ: ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ 17 ಗ್ರಾಮ ಪಂಚಾಯಿತಿಗಳನ್ನು ಆಯ್ಕೆ ಮಾಡಲಾಗಿದ್ದು, ಸದರಿ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಆಶಾ/ಅಂಗನವಾಡಿ ಕಾರ್ಯಕರ್ತೆಯರು, ಶಿಕ್ಷಕಿಯರು, ಬಿಸಿಯೂಟದ ಸಿಬ್ಬಂದಿಗಳು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಸ್ವ-ಸಹಾಯ ಸಂಘದ ಮಹಿಳೆಯರಿಗೆ ಮುಟ್ಟಿನ ಕಪ್ ವಿತರಿಸಿ, ಪ್ಯಾಡ್ ಮುಕ್ತ ಗ್ರಾಮ ಪಂಚಾಯಿತಿಗಳನ್ನಾಗಿ ರೂಪಿಸುವಂತೆ ಕ್ರಮ ಕೈಗೊಳ್ಳಲು ಸೂಚಿಸಿದರು.

ಮಾರ್ಚ 8 ರಿಂದ ಏ. 8 ರವರೆಗೆ ಒಂದು ತಿಂಗಳುಗಳ ಕಾಲ ನಡೆಯುವ ಈ ಅಭಿಯಾನದಲ್ಲಿ ಸಕ್ರಿಯವಾಗಿ ಕೆಲಸ ನಿರ್ವಹಿಸುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಆರೋಗ್ಯ ಇಲಾಖೆಯ ಸಿಬ್ಬಂದಿ, ಆಶಾ/ಅಂಗನವಾಡಿ ಕಾರ್ಯಕರ್ತೆಯರು, ತಾಲ್ಲೂಕು ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎನ್.ಎಲ್.ಆರ್.ಎಂ ಸಿಬ್ಬಂದಿಗಳು, ಹಾಸ್ಟೆಲ್ ಸಿಬ್ಬಂದಿಗಳು ಹಾಗೂ ತಾಲ್ಲೂಕು ಮಟ್ಟದಲ್ಲಿ ಸಕ್ರಿಯವಾಗಿ ಕಾರ್ಯ ನಿರ್ವಹಿಸುವ ಮಹಿಳಾ ಸಿಬಬ್ಬಂದಿಗಳನ್ನೊಳಗೊಂಡ ತಂಡ ರಚಿಸಿ, ಮಹಿಳೆಯರಿಗೆ ಮುಟ್ಟಿನ ಕಪ್ ಬಳಸುವುದರ ಕುರಿತು ಹಾಗೂ NRLM ಯೋಜನೆಯ FNHW ( Food and Nutrition, Health and Wash), ಲಿಂಗತ್ವ ದೌರ್ಜನ್ಯ ತಡೆಯುವ ಬಗ್ಗೆ ವ್ಯಾಪಕವಾಗಿ ಜಾಗೃತಿ ಮೂಡಿಸಲು ಸೂಕ್ತ ಕ್ರಮ ವಹಿಸುವಂತೆ ಜಿ.ಪಂ.ಸಿಇಒ ರವರು ಸೂಚಿಸಿದರು.

ಈ ಸಭೆಯಲ್ಲಿ ಸುಂದರ್ ರಾಜ್, ಯೋಜನಾ ನಿರ್ದೇಶಕರು, ಜಿ.ಪಂ. ಮಂಡ್ಯ, ಹರ್ಷ, ಸಹಾಯಕ ಯೋಜನಾಧಿಕಾರಿ ಜಿ.ಪಂ. ಮಂಡ್ಯ. ಕಾರ್ಯನಿರ್ವಾಹಕ ಅಧಿಕಾರಿಗಳು, ಡಾ|| ಶಿಲ್ಪ, ಡಾ|| ಬೆಟ್ಟಸ್ವಾಮಿ, ಮತ್ತು ಎನ್.ಆರ್.ಎಲ್.ಎಂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ವರನಟ ಡಾ. ರಾಜ್‌ಕುಮಾರ್ ಅವರಿಗೆ ಮರಣೋತ್ತರ ‘ಭಾರತ ರತ್ನ’ ನೀಡಲು ಮನವಿ ಮಾಡಿ

ಮಂಡ್ಯ ಜಿಲ್ಲೆ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ರಾಜ್ಯಕ್ಕೆ 5ನೇ ಸ್ಥಾನ: ಸಚಿವ ಚಲುವರಾಯಸ್ವಾಮಿ ಹರ್ಷ

ಡಾ. ಬಾಬು ಜಗಜೀವನ್ ರಾಂ ರವರ ಆದರ್ಶ ಹಾಗೂ ಚಿಂತನೆಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು

Leave a Comment