NEWS

ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್

ಪಾಲನೆ ನ್ಯೂಸ್

ಬೆಂಗಳೂರು: ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 56,432 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಂಡಿರುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದಾರೆ. 2006-27ನೇ ಸಾಲಿನ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸರ್ಕಾರಿ ಹುದ್ದೆಗಳಿಗೆ ನೇರನೇಮಕಾತಿಗೆ ನಿಗದಿಪಡಿಸಿರುವಗರಿಷ್ಟ ವಯೋಮಿತಿ ಯನ್ನು ಒಂದು ಬಾರಿಗೆ ಮಾತ್ರ ಐದು ವರ್ಷ ಸಡಿಲಿಕೆ ಮಾಡಲಾ ಗಿದೆ ಎಂದು ಘೋಷಿಸಿದರು.

ಉದ್ಯೋಗ ನೇಮಕಾತಿ ಒಳಮೀಸಲಾತಿ ಪ್ರಮಾಣದ ಬಗ್ಗೆ ಪ್ರಕರಣಗಳು ನ್ಯಾಯಾಲಯದಲ್ಲಿ ಇರುವುದರಿಂದಾಗಿ ಅಭ್ಯರ್ಥಿಗಳಿಗೆ ಯಾವುದೇ ನಷ್ಟವನ್ನು ತಡೆಗಟ್ಟುವ ಉದ್ದೇಶದಿಂದಾಗಿ ನೇಮಕಾತಿ ವಯೋಮಿತಿಯನ್ನು 5 ವರ್ಷ ಸಡಿಲಿಕೆ ಮಾಡಲಾಗಿದೆ. ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್, ಇಂಜಿನಿಯರಿಂಗ್ ಕಾಲೇಜುಗಳಲ್ಲಿನ ನೇಮಕಾತಿ ವಯೋಮಿತಿ ಒಂದು ಬಾರಿಗೆ ಐದು ವರ್ಷ ಸಡಿಲಿಕೆ ಮಹಿಳಾ ಅತಿಥಿ ಉಪನ್ಯಾಸಕರಿಗೆ 90 ದಿನಗಳ ಮಾತೃತ್ವ ರಜೆ ಮಹಿಳಾ ಅತಿಥಿ ಉಪನ್ಯಾಸಕರಿಗೆ 90 ದಿನಗಳ ಮಾತೃತ್ವ ರಜೆಯನ್ನು ಮುಂದಿನ ಶೈಕ್ಷಣಿಕ ಸಾಲಿನಿಂದ ಜಾರಿಗೊಳಿಸಲಾಗುವುದು ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಉದ್ಯೋಗ ಸೃಷ್ಟಿಗೆ ಹೆಚ್ಚು ಒತ್ತು ನೀಡಿದ್ದು, ಅದಕ್ಕೆ ಪೂರಕವಾದ ಯೋಜನೆಯನ್ನು ಜಾರಿ ಮಾಡಿದ್ದೇವೆ. ವ್ಯಾಪಾರ, ಕೈಗಾರಿಕಾ ಕ್ಷೇತ್ರಕ್ಕೆ ಸಾಕಷ್ಟು ಒತ್ತು ನೀಡಲಾಗುವುದು ಎಂದು ತಿಳಿಸಿದರು. ಕಳೆದ ತಿಂಗಳು ಧಾರವಾಡದಲ್ಲಿ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ನಡೆಸಿದ ಬೃಹತ್ ಪ್ರತಿಭಟನೆಯ ಬೆನ್ನಲ್ಲೇ ರಾಜ್ಯ ಸರ್ಕಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಉದ್ಯೋಗ ಭರ್ತಿ ಕುರಿತು ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಈಗಾಗಲೇ ಶೇ.56ರಷ್ಟು ಮೀಸಲಾತಿ ಬದಲು ಶೇ.50 ರಷ್ಟು ಮೀಸಲಾತಿ ಮೇರೆಗೆ ಮಾತ್ರವೇ ವಿವಿಧ ಹುದ್ದೆಗಳ ಭರ್ತಿಗೆ ಸಚಿವ ಸಂಪುಟ ಅನುಮೋದನೆ ನೀಡಿದ್ದು, 30 ದಿನಗಳಲ್ಲಿ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ತಿಳಿಸಿತ್ತು.

ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿತದ ಬಗ್ಗೆ ತನಿಖೆ

ಗ್ರಾಮ ಒನ್ ಕೇಂದ್ರಗಳ ಸ್ಥಾಪನೆಗೆ ಅರ್ಜಿ ಅಹ್ವಾನ

ನೂತನ ಸಿಎಂ ಆಗಿ ಜೋಸೆಫ್ ವಿಜಯ್ ಪ್ರಮಾಣ ವಚನ

Leave a Comment