NEWS

ಇಂದಿರಾ ಕಿಟ್ ವಿತರಿಸಲು ಸಿಎಂ ಘೋಷಣೆ

ಪಾಲನೆ ನ್ಯೂಸ್

ಬೆಂಗಳೂರು: ಕರ್ನಾಟಕ ಸರ್ಕಾರವು 2026ರ ಬಜೆಟ್‌ನಲ್ಲಿ ಬಿಪಿಎಲ್ ಕಾರ್ಡ್ ದಾರರಿಗೆ ಮಹತ್ವದ ಯೋಜನೆ ಘೋಷಿಸಿದೆ. ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆ.ಜಿ ಅಕ್ತಿಯ ಬದಲಾಗಿ ಇಂದಿರಾ ಆಹಾರ ಕಿಟ್ ವಿತರಿಸುವುದಾಗಿ ಸಿಎಂ ಘೋಷಣೆ ಮಾಡಿದ್ದಾರೆ.

ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಯಡಿ ರಾಜ್ಯದ 4.54 ಕೋಟಿ ಬಡ ಫಲಾನುಭವಿಗಳಿಗೆ 5 ಕೆಜಿ ಹೆಚ್ಚುವರಿ ಅಕ್ಕಿಯನ್ನು ಯಶಸ್ವಿಯಾಗಿ ವಿತರಿಸಲಾಗುತ್ತಿತ್ತು. ಕಳೆದ ಮಾಂಗಾ + ಮೂರು ವರ್ಷಗಳಲ್ಲಿ ಈ ಯೋಜನೆಗೆ 17,167 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. ಈಗ, ಹೆಚ್ಚುವರಿ 5 ಕೆಜಿ ಅಕ್ಕಿಯ ಬದಲಾಗಿ, ಪ್ರತಿ ತಿಂಗಳು ಪೌಷ್ಟಿಕಾಂಶ ಉಳ್ಳ ಇಂದಿರಾ ಆಹಾರ ಕಿಟ್ ವಿತರಿಸಲು ಸರ್ಕಾರ ಉದ್ದೇಶಿಸಿದೆ. ಈ ಕಿಟ್ ತೊಗರಿಬೇಳೆ, ಸಕ್ಕರೆ, ಉಪ್ಪು ಮತ್ತು ಅಡಿಗೆ ಎಣ್ಣೆ ಒಳಗೊಂಡಿರುತ್ತದೆ. 2026-27ನೇ ಸಾಲಿನಲ್ಲಿ ಈ ಯೋಜನೆಗಾಗಿ 6,200 ಕೋಟಿ ರೂಪಾಯಿ ಗಳನ್ನು ಮೀಸಲಿಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದೆ.

ಚಿನ್ನ, ಬೆಳ್ಳಿ ಬೆಲೆಯಲ್ಲಿ ಇಳಿಕೆ

Donald Trump: ಕೊನೆಗೂ ಟ್ರಂಪ್ ಕೈಸೇರಿತು ನೊಬೆಲ್ ಶಾಂತಿ ಪುರಸ್ಕಾರ

Leave a Comment