NEWS

ಮಾರ್ಚ್ 11 ರಂದು ಜಿಲ್ಲಾ ಮಟ್ಟದ ಕ್ರೀಡಾಕೂಟ -2026

ಮಂಡ್ಯ: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಮೈ ಭಾರತ (ಯುವ ವ್ಯವಹಾರಗಳು ಹಾಗೂ ಕ್ರೀಡಾ ಸಚಿವಾಲಯ) MY BHARAT, MANDYA ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಎನ್. ಎಸ್. ಎಸ್. ಘಟಕಗಳು ಮಂಡ್ಯ ವಿಶ್ವವಿದ್ಯಾಲಯ ಹಾಗೂ ಮಂಡ್ಯ ಜಿಲ್ಲೆಯ ಎಲ್ಲಾ ಯುವಕ, ಯುವತಿ ಮತ್ತು ಮಹಿಳಾ ಮಂಡಳಿಗಳು ಇವರ ಸಹಯೋಗದಲ್ಲಿ ಮಂಡ್ಯ ಜಿಲ್ಲಾ ಮಟ್ಟದ ಕ್ರೀಡಾಕೂಟ-2026 ಕಾರ್ಯಕ್ರಮವನ್ನು ಮಾರ್ಚ್ 11 ರಂದು ಬೆಳಿಗ್ಗೆ 10 ಗಂಟೆಗೆ ಸರ್. ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಕೇಂದ್ರ ಸರ್ಕಾರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ .ಕುಮಾರಸ್ವಾಮಿ ಅವರು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸಲಿದ್ದಾರೆ.

ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಶ್ರೀ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಅಧ್ಯಕ್ಷರು ಹಾಗೂ ಶ್ರೀರಂಗಪಟ್ಟಣ ವಿಧಾನಸಭಾ ಶಾಸಕ ಎ.ಬಿ ರಮೇಶ ಬಂಡಿಸಿದ್ದೇಗೌಡ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರು ಹಾಗೂ ಮಳವಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಪಿ ಎಂ ನರೇಂದ್ರಸ್ವಾಮಿ,ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗದ ಅಧ್ಯಕ್ಷರಾದ ಡಾ.ಮೂರ್ತಿ ಅವರು ಕಾರ್ಯಕ್ರಮದ ಗೌರವ ಉಪಸ್ಥಿತಿ ವಹಿಸಲಿದ್ದಾರೆ.

ಮಂಡ್ಯ ವಿಧಾನಸಭಾ ಶಾಸಕರಾದ ಪಿ.ರವಿಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ವಿಧಾನಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ,ವಿಧಾನ ಪರಿಷತ್ ಶಾಸಕರುಗಳಾದ ಮಧು ಜಿ. ಮಾದೇಗೌಡ, ಕೆ. ವಿವೇಕಾನಂದ, ವಿಧಾನ ಸಭಾ ಶಾಸಕರುಗಳಾದ ದರ್ಶನ್ ಪುಟ್ಟಣ್ಣಯ್ಯ, ಹೆಚ್.ಟಿ ಮಂಜು, ಕೆ.ಎಂ ಉದಯ, ರಾಜ್ಯ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಎಸ್ ಆತ್ಮಾನಂದ, ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ.ಹೆಚ್.ಕೃಷ್ಣ, ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಪಿ ಪ್ರಕಾಶ್, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ವಿಜಯಲಕ್ಷ್ಮಿ ರಘುನಂದನ್, ಮೈಸೂರು ಸಕ್ಕರೆ ಕಂಪನಿ ನಿಯಮಿತ ಅಧ್ಯಕ್ಷರಾದ ಸಿ.ಡಿ ಗಂಗಾಧರ, ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬಿ. ನಾಗೇಂದ್ರ ಕುಮಾರ್ ರವರು ಭಾಗವಹಿಸಲಿದ್ದಾರೆ.

ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಮಲ್ಯಗೆ ಬಾಂಬೆ ಹೈಕೋರ್ಟ್ ಸೂಚನೆ : ಭಾರತಕ್ಕೆ ಬರಲೇಬೇಕು

ರಂಗೋಲಿ ಕೇವಲ ಚುಕ್ಕೆ- ಗೆರೆ- ಬಣ್ಣಗಳ ಚಿತ್ತಾರವಲ್ಲ: ಕೆ.ಟಿ. ಹನುಮಂತು

ಮೂಲ ಸೌಕರ್ಯ ಕಲ್ಪಿಸಮೂಲ ಸೌಕರ್ಯ ಕಲ್ಪಿಸ‌ಲು 500 ಕೋಟಿ ರೂ. ಪ್ರಸ್ತಾವನೆ: ಜಿ.ಟಿ.ದೇವೇಗೌಡ

Leave a Comment