ಇಂದಿರಾ ಕ್ಯಾಂಟೀನ್‌ಗಳಲ್ಲಿ ಸ್ವಚ್ಛತೆಗೆ ಮೊದಲ ಆದ್ಯತೆ ಸ್ವಚ್ಛ ಸರ್ವೇಕ್ಷಣ ಅಭಿಯಾನದಡಿ ಮನೆಗಳಲ್ಲಿಯೇ ಹಸಿ ಕಸ ಒಣ ಕಸ ವಿಂಗಡಣೆ ಕುರಿತು ಅರಿವು -ಡಾ ಕುಮಾರ
ಪಾಲನೆ ನ್ಯೂಸ್
ಮಂಡ್ಯ: ಕುಡಿಯುವ ನೀರಿನ ಗುಣಮಟ್ಟವು ನೇರವಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ, ಸುರಕ್ಷಿತ, ಶುದ್ಧ ಮತ್ತು ರಾಸಾಯನಿಕ-ಮುಕ್ತ ನೀರನ್ನು ಖಚಿತಪಡಿಸಿಕೊಳ್ಳುವುದು ಅತ್ಯಗತ್ಯ. ಸಾರ್ವಜನಿಕರಿಗೆ ಪೂರೈಕೆಯಾಗುವ ಕುಡಿಯುವ ನೀರಿನ ಗುಣಮಟ್ಟಕ್ಕೆ ಆದ್ಯತೆ ನೀಡಿ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸ್ಧಳೀಯ ಸಂಸ್ಧೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಕುಡಿಯುವ ನೀರಿನ ಪೈಪ್ ಲೈನ್ ಸಾಗುವ ಮಾರ್ಗದಲ್ಲಿ ಒಳಚರಂಡಿ ನೀರು ಸೋರಿಕೆಯಾಗದಂದೆ ಕುಡಿಯುವ ನೀರಿನಲ್ಲಿ ಮಿಶ್ರಣವಾಗದಂತೆ ನೋಡಿಕೊಳ್ಳುವುದು ಸ್ಥಳೀಯ ಸಂಸ್ಥೆಗಳ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.
ಇಂದಿರಾ ಕ್ಯಾಂಟೀನ್‌ಗಳಲ್ಲಿ ಸ್ವಚ್ಛತೆಗೆ ಮೊದಲೇ ಆದ್ಯತೆ ನೀಡಬೇಕು. ಉತ್ತಮ ಗುಣಮಟ್ಟದ ಆಹಾರ ಪದಾರ್ಥಗಳನ್ನು ಸರಕಾರ ನಿಗದಿಪಡಿಸಿರುವ ಗುಣಮಟ್ಟದಲ್ಲಿ ವಿತರಣೆ ಆಗುವಂತೆ ನೋಡಿಕೊಳ್ಳಬೇಕು. ಪ್ಯೂರಿಫೈಡ್ ಕುಡಿಯುವ ನೀರನ್ನು ಒದಗಿಸಬೇಕು.

ಸ್ವಚ್ಛ ಸರ್ವೇಕ್ಷಣ ಅಭಿಯಾನ ದಡಿ
ಮನೆಗಳಲ್ಲಿಯೇ ಹಸಿ ಕಸ ಒಣ ಕಸ ವಿಂಗಡಿಸುವಂತೆ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು. ಶಾಲಾ ಕಾಲೇಜು, ಕೈಗಾರಿಕೆಗಳು ಮತ್ತು ಜನ ಸಂದಣಿ ಇರುವ ಕಡೆ ಸ್ವಚ್ಛ ಸರ್ವೇಕ್ಷಣ ಅಭಿಯಾನದ ಮೂಲಕ ವಾಕಾಥಾನ್, ಮ್ಯಾರಥಾನ್ ನಂತಹ ವಿವಿಧ ಚಟುವಟಿಕೆಗಳನ್ನು ಆಯೋಜಿಸಿ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಅವರು ತಿಳಿಸಿದರು.
ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಸರಕಾ ವಿವಿಧ ಯೋಜನೆಗಳಡಿ ನಗರ ಸ್ಥಳೀಯ ಸಂಸ್ಥೆ ಗಳಿಗೆ ನೀಡಿರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಪ್ರತಿಶತ ನೂರರಷ್ಟು ಅನುಷ್ಠಾನಗೊಳಿಸಬೇಕು ಎಂದು ಅವರು ತಿಳಿಸಿದರು.
ಬೀದಿ ನಾಯಿಗಳ ಹಾವಳಿ ತಡೆಯಲು ಸಂತಾನಹರಣ ಶಸ್ತ್ರಚಿಕಿತ್ಸೆ, ಲಸಿಕೆ (ABC/ARV) ಮತ್ತು ಆಶ್ರಯ ತಾಣಗಳ ನಿರ್ಮಾಣಕ್ಕೆ ಆದ್ಯತೆ ನೀಡಬೇಕು ಹಾಗೂ ಅಪಾಯಕಾರಿ ನಾಯಿಗಳನ್ನು ಹಿಡಿದು ಆಶ್ರಯ ತಾಣಗಳಿಗೆ ಸ್ಥಳಾಂತರಿಸಲು ಕ್ರಮವಹಿಸಬೇಕು ಎಂದು ಅವರು ತಿಳಿಸಿದರು.
ಬೀದಿ ನಾಯಿಗಳಿಗೆ ಆಹಾರ ನೀಡಲು ಸೂಕ್ತ ಸ್ಥಳ ಗುರುತಿಸಿ ಸದರಿ ಸ್ಥಳದಲ್ಲಿಯೇ ಸಾರ್ವಜನಿಕರು ಬೀದಿ ನಾಯಿಗಳಿಗೆ ಆಹಾರ ನೀಡುವಂತೆ ಅರಿವು ಮೂಡಿಸಬೇಕು. ಹೋಟೆಲ್ ಹಾಗೂ ಹಾಸ್ಟೆಲ್ ನಲ್ಲಿ ಉಳಿದ ಆಹಾರವನ್ನು ಗುರುತಿಸದ ಸ್ಥಳದಲ್ಲೇ ಹಾಕುವಂತೆ ಜಾಗೃತಿಯನ್ನು ಮೂಡಿಸಬೇಕು ಎಂದರು.

ಅನುದಾನ ಬಳಸಿ ನಗರಾಭಿವೃದ್ಧಿ ಕಾಮಗಾರಿಗಳ ವೇಗವನ್ನು ಹೆಚ್ಚಿಸಿ, ಕುಡಿಯುವ ನೀರು, ಘನತ್ಯಾಜ್ಯ ನಿರ್ವಹಣೆ, ಆಸ್ತಿ ತೆರಿಗೆ ವಸಲಾತಿಯನ್ನು ಮಾರ್ಚ್ ಮಾಹೆಯ ಅಂತ್ಯದೊಳಗೆ ಸಂಗ್ರಹಿಸಿ ಹಾಗೂ ಇ ಆಸ್ತಿ ಪ್ರಗತಿಯ ಪ್ರಗತಿಯನ್ನು ಪರಿಶೀಲಿಸಿ ಎಂದು ಸೂಚಿಸಿದರು.
ಸಭೆಯಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ನರಸಿಂಹ ಮೂರ್ತಿ, ನಗರಾಭಿವೃದ್ಧಿ ಕೋಶದ ಎ.ಇ.ಇ ಪ್ರಥಾಪ್, ನಗರ ಸಭೆ ಪೌರಾಯುಕ್ತೆ ಪಂಪಶ್ರೀ ಸೇರಿದಂತೆ ನಗರ ಸ್ಧಳೀಯ ಸಂಸ್ಧೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn
